ಮೈಸೂರು

ದೇಶದ ಅಭಿವೃದ್ಧಿ ಬಿಜೆಪಿಯಿಂದ ಮಾತ್ರ ಸಾಧ್ಯ: ಎಚ್.ಡಿ. ಗಣೇಶ್

Published On :

ಪಿರಿಯಾಪಟ್ಟಣ: ರಾಷ್ಟ್ರದ ಅಭಿವೃದ್ಧಿ ಹಾಗೂ ರಕ್ಷಣೆ ಕೇವಲ ಬಿಜೆಪಿಯಿಂದ ಮಾತ್ರ ಸಾಧ್ಯ ಎಂದು ಬಿಜೆಪಿ ಮುಖಂಡ ಎಚ್.ಡಿ. ಗಣೇಶ್ ಹೇಳಿದರು. ತಾಲೂಕಿನ ರಾಜನಬಿಳಗುಲಿ ಮೂಡಲಕೊಪ್ಪಲು ಗ್ರಾಮದಲ್ಲಿ ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರತಾಪ್ ಸಿಂಹ ಪರವಾಗಿ ಮತಯಾಚಿಸಿ ಮಾತನಾಡಿ, ದೇಶದಲ್ಲಿನ ಆಹಾರ ಧಾನ್ಯಗಳೂ ಸೇರಿದಂತೆ ದಿನನಿತ್ಯದ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರು ತತ್ತರಿಸಿ ಹೋಗಿದ್ದಾರೆ. ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಬೆಲೆ ನಿಯಂತ್ರಣವಾಗಲಿದ್ದು, ಸುಧಾರಣೆ ಕಾಣಲಿದೆ. ಅಲ್ಲದೆ ಜನಸಾಮಾನ್ಯರು ನೆಮ್ಮದಿಯ ಜೀವನ ನಡೆಸಲು ಸಹಕಾರಿಯಾಗಲಿದೆ. ಸಾರ್ವಜನಿಕರು ಬಿಜೆಪಿ ಅಭ್ಯರ್ಥಿ ಪ್ರತಾಪ್ ಸಿಂಹ ಅವರಿಗೆ ಮತ ನೀಡುವ ಮೂಲಕ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಬೆಂಬಲಿಸುವಂತೆ ಮನವಿ ಮಾಡಿದರು. ಪಕ್ಷದ ಹಿಂದುಳಿದ ವರ್ಗದ ಜಿಲ್ಲಾಧ್ಯಕ್ಷ ಎಂ.ಎಂ. ರಾಜೇಗೌಡ ಮಾತನಾಡಿದರು. ಪಕ್ಷದ ಅಲ್ಪಸಂಖ್ಯಾತರ ಘಟಕದ ತಾಲೂಕು ಅಧ್ಯಕ್ಷ ವಾಜಿದ್ ಪಾಷಾ, ಮುಖಂಡರಾದ ಜಯರಾಮೇಗೌಡ, ಕುಮಾರ, ಪೂಣಚ್ಚ, ಹರೀಶ್, ಮಲ್ಲಿಕಾರ್ಜುನ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.