ರಮ್ಯಾ ಒಳ್ಳೆ ನಟಿ, ಸಂಸದೆ ಅಲ್ಲ
ಸಾಲಿಗ್ರಾಮ: ಕೆ.ಆರ್. ನಗರದಲ್ಲಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ನಿರ್ಮಾಣ ಮಾಡಲು ಮಂಜೂರಾಗಿರುವ ಅನುದಾನ ಕೇಂದ್ರ ಸರ್ಕಾರದ್ದೋ ಅಥವಾ ರಾಜ್ಯ ಸರ್ಕಾರದ್ದೋ ಎಂಬ ಸಾಮಾನ್ಯ ಜ್ಞಾನ ತಿಳಿಯದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಮ್ಯಾ ಮತ್ತೆ ಸಂಸದೆಯಾದರೆ ರಾಜ್ಯದ ಪರಿಸ್ಥಿತಿ ಏನಾಗಬಹುದು ಎಂದು ಶಾಸಕ ಸಾ.ರಾ. ಮಹೇಶ್ ವ್ಯಂಗ್ಯವಾಡಿದರು.
ಪಟ್ಟಣದ ಕೃಷ್ಣ ಸಮುದಾಯ ಭವನದಲ್ಲಿ ಏರ್ಪಡಿಸಿದ್ದ ಸಾಲಿಗ್ರಾಮ ಹೋಬಳಿ ಮಟ್ಟದ ಜೆಡಿಎಸ್ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, 2013ರ ಆಗಸ್ಟ್ನಲ್ಲಿ ಮಂಡ್ಯ ಕ್ಷೇತ್ರದ ಲೋಕಸಭಾ ಉಪಚುನಾವಣೆ ನಡೆದಿದೆ. ಚಳಿಗಾಲದ ಅಧಿವೇಶನದಲ್ಲಿ ರಮ್ಯಾ ಪ್ರಮಾಣ ವಚನ ಸ್ವೀಕರಿಸಿದರು. ಈ ನಡುವೆ ಆರೋಗ್ಯ ಸಚಿವ ಯು.ಟಿ. ಖಾದರ್ ಮೇಲೆ ಒತ್ತಡ ಹೇರಿ ಆಸ್ಪತ್ರೆ ಮಂಜೂರು ಮಾಡಿಸಿರುವೆ ಎಂದು ಹೇಳಿಕೊಂಡಿರುವ ರಮ್ಯಾ, ಆ್ಯಕ್ಟಿಂಗ್ ಮಾಡಲು ಒಳ್ಳೆ ನಟಿಯೇ ಹೊರತು, ರೈತರ ಪರ ಹೋರಾಟ ಮಾಡಲು ಸೂಕ್ತ ಅಭ್ಯರ್ಥಿ ಅಲ್ಲ ಎಂದು ಟೀಕಿಸಿದರು.
ರಾಜ್ಯದಲ್ಲಿ ನಟಿಯರ ಸಂಖ್ಯೆ ಕಡಿಮೆ ಇದೆ. ರಮ್ಯಾ ಉತ್ತಮ ನಟಿ. ಚಿತ್ರರಂಗದಲ್ಲಿ ಹೆಚ್ಚು ಕಲಾ ಸೇವೆ ಮಾಡ್ಲಿ ಅಲ್ಲಿಯೇ ಇದ್ದು ಹೆಚ್ಚು ಸಾಧನೆ ಮಾಡಲಿ. ಜನತೆಯೂ ಅವರ ಸಿನಿಮಾಗಳನ್ನು ಹೆಚ್ಚೆಚ್ಚು ನೋಡುತ್ತಾರೆ. ರಾಜಕೀಯ ಅನುಭವ ಇಲ್ಲದ ರಮ್ಯಾ ಚಿತ್ರರಂಗದಲ್ಲೇ ಇರುವುದು ಸೂಕ್ತ ಎಂದು ಹೇಳಿದರು.
ರೈತರ ಕುಟುಂಬದಿಂದ ಬಂದಿರುವ ಜೆಡಿಎಸ್ ಅಭ್ಯರ್ಥಿ ಪುಟ್ಟರಾಜುಗೆ ರೈತರ ಸಂಕಷ್ಟಗಳ ಪರಿಚಯವಿದೆ. ಅಂತಹವರನ್ನು ಗೆಲ್ಲಿಸಿದರೆ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ, ಜತೆಗೆ ಸಂಸತ್ತಿನಲ್ಲಿ ರೈತರ ಪರವಾಗಿ ಸಮಸ್ಯೆಗಳ ಪರಿಹಾರಕ್ಕೆ ಹೋರಾಟ ಮಾಡುತ್ತಾರೆ. ಇಂತವರ ಗೆಲುವಿಗೆ ಶ್ರಮಿಸುವಂತೆ ಕಾರ್ಯಕರ್ತರಲ್ಲಿ ಮನವಿ ಮಾಡಿದರು.
ಭಿನ್ನಾಭಿಪ್ರಾಯ ಬೇಡ: ಕಾರ್ಯಕರ್ತರು ಪರಸ್ಪರ ಭಿನ್ನಾಭಿಪ್ರಾಯ ಬಿಟ್ಟು, ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರಮಿಸುವಂತೆ ಮನವಿ ಮಾಡಿದರು. ಸಭೆಯಲ್ಲಿ ಇತ್ತೀಚೆಗೆ ನಿಧನರಾದ ಜೆಡಿಎಸ್ನ ಹಿರಿಯ ಮುಖಂಡ ಹಾಗೂ ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಎಸ್.ಎಸ್. ರಾಮಕೃಷ್ಣೇಗೌಡ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಸಭೆಯಲ್ಲಿ ವಿಧಾನಪರಿಷತ್ ಮಾಜಿ ಸದಸ್ಯ ಕೆ.ಟಿ.ಶ್ರೀಕಂಠೇಗೌಡ, ತಾಪಂ ಅಧ್ಯಕ್ಷೆ ವಿಜಯಲಕ್ಷ್ಮಮ್ಮ, ಮಾಜಿ ಸದಸ್ಯ ಎಸ್.ಎಂ.ಶ್ರೀನಿವಾಸಗೌಡ, ಎ.ಟಿ. ಗೋವಿಂದೇಗೌಡ, ರಾಮೇಗೌಡ, ಗ್ರಾಪಂ ಅಧ್ಯಕ್ಷೆ ರಾಣಿರಾಜಣ್ಣ, ಉಪಾಧ್ಯಕ್ಷ ನಟರಾಜ್, ಸದಸ್ಯ ಅಯಾಜ್, ಜೆಡಿಎಸ್ ತಾಲೂಕು ಅಧ್ಯಕ್ಷ ಚಂದ್ರಶೇಖರ್, ವಕ್ತಾರ ಕೆ.ಎಲ್. ರಮೇಶ್, ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಎಸ್.ಕೆ. ಮಧುಚಂದ್ರ, ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಎಸ್.ಎಂ. ಸೋಮಣ್ಣ, ಮೈಮುಲ್ ಮಾಜಿ ಅಧ್ಯಕ್ಷ ಎ.ಟಿ. ಸೋಮಶೇಖರ್, ಎಪಿಎಂಸಿ ನಿರ್ದೇಶಕ ಕುಪ್ಪಳ್ಳಿಸೋಮು ಭಾಗವಹಿಸಿದ್ದರು.
ಇಂಡವಾಳು: ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ
ಟಿ. ನರಸೀಪುರ: ತಾಲೂಕಿನ ಇಂಡವಾಳು ಗ್ರಾಮದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಅಪಮಾನ ಮಾಡಿರುವುದನ್ನು ದಲಿತ ವಿದ್ಯಾರ್ಥಿ ಒಕ್ಕೂಟ, ಮೈಸೂರು ವಿವಿ ಬಹುಜನ ವಿದ್ಯಾರ್ಥಿ ಒಕ್ಕೂಟ ಖಂಡಿಸಿವೆ. ಈ ಕೃತ್ಯ ಎಸಗಿದವರನ್ನು ಪತ್ತೆಹಚ್ಚಿ ಬಂಧಿಸಿ ಅವರಿಗೆ ಗಲ್ಲು ಶಿಕ್ಷೆ ನೀಡಬೇಕು. ಸರ್ಕಾರ ಈ ಘಟನೆಯನ್ನು ನಿರ್ಲಕ್ಷಿಸಿದಲ್ಲಿ ದಲಿತ ಸಂಘಟನೆಗಳ ಜತೆಗೂಡಿ ಉಗ್ರ ಹೋರಾಟ ನಡೆಸುವುದಾಗಿ ಮುಖಂಡರಾದ ಶಿವನಾಗ, ಎಲ್. ಅರುಣ್ಕುಮಾರ್, ರಘು, ರಮೇಶ್, ಪ್ರಸನ್ನಕುಮಾರ್ ಎಚ್ಚರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

