ಮೈಸೂರು

ಜನರ ಸಮಸ್ಯೆಗಳಿಗೆ ಸ್ಪಂದಿಸಲಿರುವ ಜೆಡಿಎಸ್: ವೈಎಸ್‌ವಿ ದತ್ತ

Published On :

ಮೈಸೂರು: ಈ ಸಾರಿ ಚುನಾವಣೆಯಲ್ಲಿ ಹಣ ಹಾಗೂ ಜಾತಿ ಅಷ್ಟಾಗಿ ಪರಿಣಾಮ ಬೀರುವುದಿಲ್ಲ. ಬದಲಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಪಕ್ಷವನ್ನು ಜನ ಬೆಂಬಲಿಸಲಿದ್ದಾರೆ ಎಂದು ಜೆಡಿಎಸ್ ಶಾಸಕ ವೈ.ಎಸ್.ವಿ. ದತ್ತ ವಿಶ್ವಾಸ ವ್ಯಕ್ತಪಡಿಸಿದರು. ಚುನಾವಣೆಯಲ್ಲಿ ಹಣ, ಜಾತಿ ಪ್ರಭಾವ ಬೀರುತ್ತವೆ ಎಂಬುದು ಸರಿಯಲ್ಲ. ನಾನು ಕಡೂರು ಕ್ಷೇತ್ರದಿಂದ ನಿಂತಿ ಗೆದ್ದಿರುವುದು ಇದಕ್ಕೆ ಸಾಕ್ಷಿ. ಅಲ್ಲಿನ ಜ್ವಲಂತ ಸಮಸ್ಯೆಗಳಿಗೆ ಸ್ಪಂದಿಸಿದ್ದಕ್ಕಾಗಿ ಗೆದ್ದೆ. ಈಗ ರಾಜ್ಯದಲ್ಲಿಯೂ ಅಂತದ್ದೆ ಸಮಸ್ಯೆಯಿದ್ದು ಜೆಡಿಎಸ್ ಕಾರ್ಯೋನ್ಮುಖವಾಗಿದೆ. ಮೈಸೂರಿನಲ್ಲಿ ಜೆಡಿಎಸ್ ಪಕ್ಷದ ಸಂಘಟನೆ ಬಲವಾಗಿದೆ. ಕಾಂಗ್ರೆಸ್ ಮತ್ತು ಬಿಜೆಪಿ ಕ್ಷೇತ್ರದ ಮತದಾರರನ್ನು ತಮ್ಮತ್ತ ಸೆಳೆಯಲು ನಾನಾ ತಂತ್ರ ಬಳಸುತ್ತಿದ್ದಾಣೆ. ಆದರೂ ನಮಗೆ ಹೆಚ್ಚಿನ ಬಹುಮತ ಸಿಗಲಿದೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್.ಡಿ. ದೇವೇಗೌಡರನ್ನು ಟೀಕಿಸುವುದು ಶೋಭೆ ತರುವಂತದ್ದಲ್ಲ. ವೈಯಕ್ತಿಕವಾಗಿ ಸಿದ್ದರಾಮಯ್ಯ ಅವರ ಮೇಲೆ ಗೌರವವಿದೆ. ಆದರೆ, ಎಲ್ಲಿಂದ ಬಂದೆ ಎಂಬುದನ್ನು ಮರೆತು ಬಾಯಿಗೆ ಬಂದಂತೆ ಮಾತನಾಡಬಾರದು ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.