ದೇಶದಲ್ಲಿ ಮೋದಿ ಅಲೆ ಇಲ್ಲ
ಕ.ಪ್ರ.ವಾರ್ತೆ ಟಿ.ನರಸೀಪುರ ಏ. 6
ದೇಶದಲ್ಲಿ ನರೇಂದ್ರ ಮೋದಿ ಪರವಾದ ಯಾವುದೇ ಅಲೆಯಿಲ್ಲ. ಕಾರ್ಪೊರೇಟರ್ ವಲಯ ಕೇಂದ್ರ ಸರ್ಕಾರ ಮೇಲೆ ಹಿಡಿತ ಸಾಧಿಸಲು ಮೋದಿಯನ್ನು ಪ್ರಧಾನಿ ಮಾಡಲು ಹಣ ಹೂಡುತ್ತಿದೆ ಎಂದು ಲೋಕೋಪಯೋಗಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಆರೋಪಿಸಿದರು.
ತಾಲೂಕಿನ ಸೋಸಲೆ ಗ್ರಾಮದಲ್ಲಿ ನಡೆದ ಚಾಮರಾಜನಗರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಆರ್. ಧ್ರುವನಾರಾಯಣ ಪರ ಮತಯಾಚಿಸಿ ಮಾತನಾಡಿ, ಕೋಮುವಾದ ಮತ್ತು ಜಾತಿವಾದದ ಹಿನ್ನೆಲೆಯುಳ್ಳ ಬಿಜೆಪಿ ಮತ್ತು ಜಾತ್ಯತೀತ ಜನತಾದಳ ಬಂಡವಾಳಶಾಹಿಗಳ ಜೊತೆ ಶಾಮೀಲಾಗಿ ಕಾಂಗ್ರೆಸ್ ಮುಕ್ತ ಭಾರತದ ಹೆಸರಿನಲ್ಲಿ ರೈತರು, ಮಹಿಳೆಯರು, ದಲಿತರು ಹಾಗೂ ಹಿಂದುಳಿದ ವರ್ಗಗಳ ಜನರನ್ನು ತುಳಿಯುವ ಪ್ರಯತ್ನವನ್ನು ಮಾಡಲಾಗುತ್ತಿದೆ ಎಂದು ತಿಳಿಸಿದರು.
ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆರ್. ಧ್ರುವನಾರಾಯಣ್ ಮಾತನಾಡಿ, ಹತ್ತು ತಿಂಗಳ ಹಿಂದೆಯಷ್ಟೆ ಅಧಿಕಾರಕ್ಕೆ ಬಂದ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಆರಂಭದಲ್ಲಿಯೇ ಬಡವರ ಪರವಾದ ಜನಪರ ಯೋಜನೆಗಳನ್ನು ಜಾರಿಗೆ ತಂದಿರುವುದು ನನ್ನ ಗೆಲುವಿಗೆ ಶ್ರೀರಕ್ಷೆಯಾಗಲಿದೆ. ಅಲ್ಲದೇ ಕೇಂದ್ರದಲ್ಲಿ ಅಧಿಕಾರ ನಡೆಸಿರುವ ಕಾಂಗ್ರೆಸ್ ಸರ್ಕಾರದಿಂದಲೂ ಈ ಭಾಗದ ಅಭಿವೃದ್ಧಿಗೆ ಹೆಚ್ಚಿನ ಪ್ರಮಾಣದ ಅನುದಾನ ನೀಡಿದೆ. ಈ ಹಿನ್ನೆಲೆಯಲ್ಲಿ ಕ್ಷೇತ್ರದ ಜನರು ಮತ್ತೊಂದು ಬಾರಿ ನನ್ನನ್ನು ಬೆಂಬಲಿಸಬೇಕೆಂದು ಮನವಿ ಮಾಡಿಕೊಂಡರು.
ಕಾಂಗ್ರೆಸ್‌ಗೆ ಸೇರ್ಪಡೆ: ಸಚಿವ ಮಹದೇವಪ್ಪ, ಅಭ್ಯರ್ಥಿ ಧ್ರುವನರಾಯಣ ಹಾಗೂ ಯುವ ಮುಖಂಡ ಸುನೀಲ್ ಬೋಸ್ ಅವರನ್ನು ಕಾಂಗ್ರೆಸ್ ಎಸ್ಸಿ ವಿಭಾಗದ ಅಧ್ಯಕ್ಷ ಎ. ಶಿವಕುಮಾರ್, ರಾಜು, ರಾಜೇಶ್ ಸನ್ಮಾನಿಸಿದರು. ಇದೇ ವೇಳೆ ಜೆಡಿಎಸ್ ಬ್ಲಾಕ್ ಅಧ್ಯಕ್ಷ ಎಂ.ಮರಿಸ್ವಾಮಿ ಕಾಂಗ್ರೆಸ್ ಪಕ್ಷಕ್ಕೆ ವಿದ್ಯುಕ್ತವಾಗಿ ಸೇರ್ಪಡೆಯಾದರು.
ಕಾಂಗ್ರೆಸ್ ಮುಖಂಡ ಸುನಿಲ್ ಬೋಸ್, ಜಿಪಂ ಉಪಾಧ್ಯಕ್ಷೆ ಎಸ್.ಭ್ರಮರಾಂಬ, ತಾಪಂ ಅಧ್ಯಕ್ಷ ನಟರಾಜು, ಉಪಾಧ್ಯಕ್ಷೆ ಕಮಲಾಕ್ಷಿ ನಾಗರಾಜು, ಮಾಜಿ ಶಾಸಕರಾದ ಡಾ.ಎನ್.ಎಲ್. ಭಾರತೀಶಂಕರ್, ಎಸ್. ಕೃಷ್ಣಪ್ಪ, ಜಿಲ್ಲಾ ಎಸ್ಟಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೊನ್ನನಾಯ್ಕ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಟಿ.ಎಚ್. ಮಂಜುನಾಥ್, ಲಕ್ಷ್ಮೀನಾರಾಯಣ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಕೆ.ವಜ್ರೇಗೌಡ, ಎಪಿಎಂಸಿ ಅಧ್ಯಕ್ಷ ಎಂ.ರಾಜು, ಟಿಎಪಿಸಿಎಂಎಸ್ ನಿರ್ದೇಶಕ ಮಹೇಶ, ಎಪಿಎಂಸಿ ಮಾಜಿ ನಿರ್ದೇಶಕ ಬಸವಣ್ಣ, ತಾಪಂ ಮಾಜಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನಸ್ವಾಮಿ, ಸಿಡಿಎಸ್ ಅಧ್ಯಕ್ಷೆ ಲತಾ ಜಗದೀಶ್, ಡಿಸಿಸಿ ಸದಸ್ಯ ಗಣೇಶ್ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

