ಮೈಸೂರು

ಮನೆ ಮನೆಗೆ ತೆರಳಿ ಬಿಜೆಪಿ ಮತಬೇಟೆ

Published On :

ಪಿರಿಯಾಪಟ್ಟಣ: ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಶ್ರೀ ಸಾಮಾನ್ಯನ ಮೇಲೆ ಹೆಚ್ಚಿನ ಹೊರೆ ಬಿದ್ದಿದ್ದು, ಇದಕ್ಕೆ ಕಾಂಗ್ರೆಸ್ ಪಕ್ಷದ ದುರಾಡಳಿತವೇ ಕಾರಣ ಎಂದು ಬಿಜೆಪಿ ಯುವ ಮೋರ್ಚಾ ರಾಜ್ಯ ಉಪಾಧ್ಯಕ್ಷ ಕೆ.ಎನ್. ಪರಿಕ್ಷಿತ್‌ರಾಜೇ ಅರಸ್ ಹೇಳಿದರು.
ತಾಲೂಕಿನ ವಿವಿಧ ಗ್ರಾಮಗಳಲ್ಲಿ ಹಾಗೂ ಪಟ್ಟಣದಲ್ಲಿ ಮನೆ-ಮನೆಗೆ ತೆರಳಿ ಬಿಜೆಪಿ ಅಭ್ಯರ್ಥಿ ಪ್ರತಾಪ್ ಸಿಂಹ ಅವರಿಗೆ ಮತ ನೀಡುವಂತೆ ಹಾಗೂ ನರೇಂದ್ರ ಮೋದಿ ಅವರು ಮುಂದಿನ ಪ್ರಧಾನಿಯನ್ನಾಗಿಸಲು ತಮ್ಮ ಮತ ನೀಡುವಂತೆ ಮನವಿ ಮಾಡಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಮತ್ತೊಮ್ಮೆ ಸ್ವಾಭಿಮಾನಿ ಭಾರತ ನಿರ್ಮಾಣವಾಗಬೇಕಿದೆ. ಭಾರತ ಸಮೃದ್ಧ ದೇಶವಾಗಿದ್ದರೂ ಅಗತ್ಯ ವಸ್ತುಗಳ ಅದರಲ್ಲಿಯೂ ದಿನಬಳಕೆಯ ಆಹಾರ ಪದಾರ್ಥಗಳ ಬೆಲೆ ಗಣನೀಯವಾಗಿ ಏರಿಕೆಯಾಗಿದೆ. ಇದಕ್ಕೆ ಯುಪಿಎ ಸರ್ಕಾರದ ದುರಾಡಳಿತವೇ ಕಾರಣ ಎಂದು ಆರೋಪಿಸಿದರು. ನರೇಂದ್ರ ಮೋದಿ ಅವರು ಪ್ರಧಾನಿಯಾದಲ್ಲಿ ಅಗತ್ಯ ವಸ್ತುಗಳ ಬೆಲೆ ಇಳಿಯಲಿದ್ದು, ಸಾರ್ವಜನಿಕರು ನೆಮ್ಮದಿಯ ಜೀವನ ನಡೆಸಲು ಸಹಕಾರಿಯಾಗಲಿದೆ ಎಂದು ತಿಳಿಸಿದರು. ಯುವ ಮೋರ್ಚಾ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಮಹದೇವ ನಂದೀಶ್, ತಾಲೂಕು ಅಧ್ಯಕ್ಷ ಮಾಗಳಿ ರವಿ, ಶಿವರಾಂ, ಯಾಧವಾಚಾರ್, ನಮೋ ಬ್ರಿಗೇಡ್‌ನ ದಯಾನಂದ್, ವಿಜಯ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.