ಅತಂತ್ರ ಲೋಕಸಭೆ ನಿರ್ಮಾಣ
ಟಿ. ನರಸೀಪುರ: ಸಾರ್ವತ್ರಿಕ ಲೋಕಸಭೆ ಚುನಾವಣೆ ನಂತರ ಕೇಂದ್ರದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಬಹುಮತ ಕಳೆದುಕೊಳ್ಳುವುದರಿಂದ ಈ ಬಾರಿ ಅತಂತ್ರ ಲೋಕಸಭೆ ನಿರ್ಮಾಣವಾಗಲಿದೆ ಎಂದು ಬಿಎಸ್ಪಿ ರಾಜ್ಯ ಸಂಚಾಲಕ ಎನ್.ಮಹೇಶ್ ಹೇಳಿದರು.
ವರುಣ ಕ್ಷೇತ್ರದ ವ್ಯಾಪ್ತಿಗೆ ಸೇರುವ ತಾಲೂಕಿನ ಯಡದೊರೆ ಗ್ರಾಮದಲ್ಲಿ ಪಾದಯಾತ್ರೆ ನಡೆಸಿ ಬಿಎಸ್ಪಿ ಅಭ್ಯರ್ಥಿ ಎನ್. ಶಿವಮಲ್ಲು ಅವರ ಪರ ಮತಯಾಚಿಸಿ ಮಾತನಾಡಿದ ಅವರು, ನರೇಂದ್ರ ಮೋದಿ ನಾಯಕತ್ವದಲ್ಲಿ ಬಜೆಪಿ ಹಾಗೂ ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಕೇಂದ್ರದಲ್ಲಿ ಅಧಿಕಾರ ಹಿಡಿಯವ ಕನಸನ್ನು ಕಾಣುತ್ತಿದ್ದಾರೆ. ಕೇಂದ್ರ ಸರ್ಕಾರ ರಚನೆಯಲ್ಲಿ ಬಹುಜನ ಸಮಾಜ ಪಕ್ಷ ನಿರ್ಣಾಯಕ ಪಾತ್ರ ವಹಿಸಲಿದೆ ಎಂದರು.
ರಾಜ್ಯದ ಪ್ರಮುಖ ರಾಜಕೀಯ ಪಕ್ಷಗಳೆಲ್ಲವೂ ದಲಿತ ಸಮುದಾಯಗಳಿಗೆ ರಾಜಕೀಯ ಪ್ರಾತಿನಿಧ್ಯವನ್ನು ನೀಡದೆ ನಿರಂತರವಾಗಿ ವಂಚಿಸುತ್ತಲೇ ಬಂದಿವೆ. ವರುಣದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ದಲಿತರು ಬೆಂಬಲಿಸಿದರೆ ಕೊರಟಗೆರೆಯಲ್ಲಿ ಸಿಎಂ ರೇಸ್ನಲ್ಲಿದ್ದ ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ಅವರನ್ನು ಕುರುಬ ಸಮುದಾಯ ಮತ ನೀಡದೆ ಸೋಲಲು ಕಾರಣರಾದರು. ಆದ್ದರಿಂದ ವರುಣ ಕ್ಷೇತ್ರದ ಜನತೆ ಕಾಂಗ್ರೆಸ್ ಪಕ್ಷವನ್ನು ತಿರಸ್ಕರಿಸಬೇಕು ಎಂದು ಕರೆ ನೀಡಿದರು.
ಚಾ.ನಗರ ಕ್ಷೇತ್ರದಲ್ಲಿ ಬಿಎಸ್ಪಿ ಅಭ್ಯರ್ಥಿಗೆ ಶಿವಮಲ್ಲು ಗೆಲ್ಲುವ ಅವಕಾಶವಿದೆ. ಕ್ಷೇತ್ರದಲ್ಲಿ ನಾಲ್ಕು ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿ ದಲಿತ ಮತದಾರರು ಇದ್ದಾರೆ. ಲಕ್ಷ ಸಂಖ್ಯೆಯಲ್ಲಿರುವ ಅಲ್ಪಸಂಖ್ಯಾತರು ಹಾಗೂ ಹಿಂದುಳಿದ ವರ್ಗಗಳು ಜನರು ಕೂಡ ಬಿಎಸ್ಪಿ ಬೆಂಬಲಿಸಿದರೆ ಗೆಲವು ನಮ್ಮದಾಗಲಿದೆ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

