ಹಸಿವು ಮುಕ್ತ ರಾಜ್ಯ ನಿರ್ಮಾಣದ ಗುರಿ: ಶ್ರೀನಿವಾಸಪ್ರಸಾದ್
ನಂಜನಗೂಡು: ಹಸಿವುಮುಕ್ತ ರಾಜ್ಯವನ್ನಾಗಿ ಮಾಡುವುದೇ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಉದ್ದೇಶವಾಗಿದೆ ಎಂದು ಕಂದಾಯ ಸಚಿವ ವಿ.ಶ್ರೀನಿವಾಸಪ್ರಸಾದ್ ಹೇಳಿದರು. ತಾಲೂಕಿನ ಹೆಡಿಯಾಲ, ಹುರ ಗ್ರಾಮಗಳಲ್ಲಿ ಸೋಮವಾರ ಅವರು ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆರ್.ಧ್ರುವನಾರಾಯಣ್ ಪರ ಬಿರುಸಿನ ಪ್ರಚಾರ ನಡೆಸಿ, ಮತಯಾಚಿಸಿ ಮಾತನಾಡಿದರು.
ಕಾಂಗ್ರೆಸ್ ಸರ್ಕಾರ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯನ್ನು ಪ್ರಾಮಾಣಿಕವಾಗಿ ಜಾರಿಗೆ ತಂದಿದೆ. ಹಿಂದಿನ ಬಿಜೆಪಿ ಸರ್ಕಾರವನ್ನು ಜನತೆ ತಿರಸ್ಕರಿಸಿ ನಮ್ಮನ್ನು ಆಶೀರ್ವದಿಸಿದರು. ಅವರ ನಿರೀಕ್ಷೆಯಂತೆ ಭ್ರಷ್ಟಾಚಾರ ರಹಿತ ಆಡಳಿತ ನೀಡುತ್ತಿದ್ದೇವೆ. ಬಡವರ ಉದ್ಧಾರಕ್ಕಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದೇವೆ ಎಂದ ಅವರು, ಸರಳ, ಸಜ್ಜನ ಅಭ್ಯರ್ಥಿ ಆರ್.ಧ್ರುವನಾರಾಯಣ್ ಅವರನ್ನು ಬೆಂಬಲಿಸಿ ಮತ ನೀಡಬೇಕೆಂದು ಮನವಿ ಮಾಡಿದರು.
ವಿಧಾನ ಪರಿಷತ್ ಮಾಜಿ ಸದಸ್ಯ ಪ್ರೊ.ಕೆ.ಆರ್. ಮಲ್ಲಿಕಾರ್ಜುನಪ್ಪ ಮಾತನಾಡಿದರು. ತಾಪಂ ಮಾಜಿ ಸದಸ್ಯ ನಾಗರಾಜು ಸೇರಿದಂತೆ ಹಲವು ಮುಖಂಡರು ಸಚಿವರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು.
ಜಿಪಂ ಸದಸ್ಯ ಕೆ.ಮಾರುತಿ, ಬ್ಲಾಕ್ ಅಧ್ಯಕ್ಷರಾದ ಕೆ.ಎಸ್.ಸುಬ್ಬಣ್ಣ, ಬಿ.ಎಸ್. ಮಹದೇವಪ್ಪ, ಮುಖಂಡ ಬಿ. ಹರ್ಷವರ್ಧನ್, ತಾಪಂ ಮಾಜಿ ಅಧ್ಯಕ್ಷ ನಾಗೇಶ್ರಾಜ್, ಕೆಪಿಸಿಸಿ ಸದಸ್ಯ ಅಕ್ಬರ್ ಅಲಿ, ನೋಟರಿ ರಾಚಪ್ಪ, ಟಿಎಪಿಸಿಎಂಸಿ ಸದಸ್ಯ ಸಂಗರಾಜು, ಮಾಜಿ ಅಧ್ಯಕ್ಷ ಮಹೇಶ್, ಎಪಿಎಂಸಿ ಸದಸ್ಯರಾದ ಮಾದಪ್ಪ, ಮಹದೇವಸ್ವಾಮಿ, ಮಹದೇವಶೆಟ್ಟಿ, ಮೂಗಶೆಟ್ಟಿ, ಡಾ.ಶಿವರುದ್ರಪ್ಪ, ದೇಬೂರು ಸಿದ್ದಲಿಂಗಪ್ಪ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

