ಮೈಸೂರು

ಕಾಂಗ್ರೆಸ್ಗೆ ಗೆಲವು: ಕೆಆರ್ಎಂ

Published On :

ನಂಜನಗೂಡು: ಕಾಂಗ್ರೆಸ್ ಅಭ್ಯರ್ಥಿ ಆರ್.ಧ್ರುವನಾರಾಯಣ್ 40 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಪ್ರೊ.ಮಲ್ಲಿಕಾರ್ಜುನಪ್ಪ ವಿಶ್ವಾಸ ವ್ಯಕ್ತಪಡಿಸಿದರು. ಚಾಮರಾಜನಗರ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಆರ್.ಧ್ರುವನಾರಾಯಣ್ ಮಾಡಿರುವ ಅಭಿವೃದ್ಧಿ ಕೆಲಸಗಳು ಮತ್ತು ಅವರ ಜನಪ್ರಿಯತೆ ನೋಡಿದಲ್ಲಿ ಅವರು ಮತ್ತೆ ಪುನರಾಯ್ಕೆಯಾಗುವುದರಲ್ಲಿ ಯಾವುದೇ ಅನುಮಾನವಿಲ್ಲ. ಆದರೂ ಅತಿಯಾದ ಆತ್ಮವಿಶ್ವಾಸವಿಟ್ಟುಕೊಳ್ಳದೇ ಪ್ರಚಾರವನ್ನು ಶಿಸ್ತುಬದ್ಧವಾಗಿ ಮಾಡಬೇಕೆಂದು ಕಾರ್ಯಕರ್ತರಿಗೆ ಕಿವಿಮಾತು ಹೇಳಿದರು. ಚಾಮರಾಜನಗರ ಜಿಲ್ಲೆಯಲ್ಲಿ ಬಿಜೆಪಿ ಕಟ್ಟಿ, ತೊರೆದ ಬಗ್ಗೆ ವಿವರಣೆ ನೀಡಿದ ಅವರು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ನನ್ನ ವಿರುದ್ಧವಾಗಿ ಕೆಲಸ ಮಾಡಿ ನನ್ನ ಸೋಲಿಗೆ ಕಾರಣರಾದ ಎ.ಆರ್. ಕೃಷ್ಣಮೂರ್ತಿ ಅವರಿಗೆ ಈ ಬಾರಿ ಟಿಕೆಟ್ ನೀಡಿದರೆ ನಾನು ಪಕ್ಷ ಬಿಡುವುದಾಗಿ ಬಿಜೆಪಿ ವರಿಷ್ಠರ ಗಮನಕ್ಕೆ ತಂದಿದ್ದೆ. ನನ್ನ ಮಾತಿಗೆ ಮನ್ನಣೆ ನೀಡದ ಕಾರಣ, ಬಿಜೆಪಿ ಬಿಟ್ಟು  ಕಾಂಗ್ರೆಸ್ ಸೇರಿದೆ ಎಂದು ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.