ಬಿಜೆಪಿ ಪರ ಗಣೇಶ್ ಪ್ರಚಾರ
ಪಿರಿಯಾಪಟ್ಟಣ: ಮಾಜಿ ಪ್ರಧಾನಿ ಅಟಲ್‌ಬಿಹಾರಿ ವಾಜಪೇಯಿ ಆಡಳಿತಾವಧಿಯಲ್ಲಿ ದೇಶ ರಾಮರಾಜ್ಯದ ನಿಟ್ಟಿನಲ್ಲಿ ಸಾಗಿತ್ತು ಎಂದು ಬಿಜೆಪಿ ಮುಖಂಡ ಎಚ್.ಡಿ. ಗಣೇಶ್ ಹೇಳಿದರು.
ತಾಲೂಕಿನ ಆಲನಹಳ್ಳಿ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಪ್ರತಾಪ್‌ಸಿಂಹ ಅವರ ಪರವಾಗಿ ಮತಯಾಚಿಸಿ ಮಾತನಾಡಿದ ಅವರು, ಎನ್‌ಡಿಎ ಸರ್ಕಾರ ಅಸ್ತಿತ್ವದಲ್ಲಿದ್ದ ವೇಳೆ ಅನೇಕ ಜನಪರ ಯೋಜನೆಗಳು ಅನುಷ್ಠಾನಗೊಂಡವು.
ಅಲ್ಲದೆ ದೇಶದಲ್ಲಿ ಶಾಂತಿ, ನೆಮ್ಮದಿ ನೆಲಸಿತ್ತು. ಬಾಂಗ್ಲಾದೇಶ ಹಾಗೂ ಪಾಕಿಸ್ತಾನದಿಂದ ನುಸುಳಲು ಯತ್ನಿಸುತ್ತಿದ್ದ ಉಗ್ರಗಾಮಿಗಳ ನಿಗ್ರಹಕ್ಕೆ ಸೂಕ್ತ ಕ್ರಮ ಜರುಗಿಸುವ ಮೂಲಕ ದೇಶದ ರಕ್ಷಣೆಗೂ ಒತ್ತು ನೀಡಲಾಗಿತ್ತು. ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಉಗ್ರಗಾಮಿಗಳ ನುಸುಳುವಿಕೆ ಹೆಚ್ಚಾಗಿದ್ದು, ದೇಶದಲ್ಲಿ ರಕ್ಷಣಾ ವ್ಯವಸ್ಥೆ ಅದೊಗತಿಗೆ ತಲುಪಿದೆ. ಇಂತಹ ವೇಳೆಯಲ್ಲಿ ಜನತೆ ಮತ್ತೊಮ್ಮೆ ಬಿಜೆಪಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುವ ಮೂಲಕ ದೇಶ ರಕ್ಷಣೆಗೆ ಅವಕಾಶವನ್ನು ನೀಡುವಂತೆ ಮನವಿ ಮಾಡಿದರು.
ಬಿಜೆಪಿ ಅಭ್ಯರ್ಥಿ ಗೆದ್ದುಬಂದಲ್ಲಿ ತಾಲೂಕಿನ ಸಮಗ್ರ ಅಭಿವೃದ್ಧಿಗೆ ಶ್ರಮಿಸಲಿದ್ದು, ಅಭ್ಯರ್ಥಿ ಪ್ರತಾಪ್‌ಸಿಂಹ ಅವರಿಗೆ ಮತ ನೀಡುವ ಮೂಲಕ ನರೇಂದ್ರಮೋದಿ ಅವರನ್ನು ಪ್ರಧಾನಿಯನ್ನಾಗಿಸುವಂತೆ ಮನವಿ ಮಾಡಿದರು. ಪಕ್ಷದ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಎಂ.ಎಂ. ರಾಜೇಗೌಡ, ಮುಖಂಡ ಬಿ.ಎಸ್.ರಾಮಚಂದ್ರು ಮಾತನಾಡಿದರು. ಜಿಲ್ಲಾ ಉಪಾಧ್ಯಕ್ಷ ಕೃಷ್ಣೇಗೌಡ, ಮುಖಂಡ ಲೋಕಪಾಲಯ್ಯ, ಮಹದೇವ್, ಚಂದ್ರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

