ಮತದಾನ ಜಾಗೃತಿ ಪೋಸ್ಟರ್
ಟಿ. ನರಸೀಪುರ: ಮತದಾನ, ಪ್ರಜಾಪ್ರಭುತ್ವ ವ್ಯವಸ್ಥೆಯ ಭದ್ರಬುನಾದಿಯಾಗಿರುವ ಹಿನ್ನೆಲೆ ಲೋಕಸಭೆ ಚುನಾವಣೆಯಲ್ಲಿ ಪ್ರತಿಯೊಬ್ಬರೂ ಮತವನ್ನು ಚಲಾಯಿಸಬೇಕೆಂದು ತಹಸೀಲ್ದಾರ್ ರಾಮಪ್ಪ ಹೇಳಿದರು.
ತಹಸೀಲ್ದಾರರ ಕಚೇರಿಯಲ್ಲಿ ಬುಧವಾರ ಕರ್ನಾಟಕ ಭ್ರಷ್ಟಚಾರ ವಿರೋಧಿ ಸಮಿತಿಯ ಮತದಾನ ಜಾಗೃತಿ ಪೋಸ್ಟರ್ಗಳನ್ನು ಬಿಡುಗಡೆ ಮಾಡಿ ಮಾತನಾಡಿದ ದರು.
ಏ. 17ರಂದು ನಿರ್ಭೀತ ಮತ್ತು ನಿಷ್ಪಕ್ಷ ಮತದಾನ ನಡೆಸಲು ತಾಲೂಕು ಆಡಳಿತ ಸಜ್ಜುಗೊಂಡಿದೆ. ಸಾರ್ವತ್ರಿಕ ಲೋಕಸಭಾ ಚುನಾವಣೆ ಮತದಾನಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಬೆಳಗ್ಗೆ 7 ರಿಂದ ಸಂಜೆ 6ರವರೆಗೆ ಮತದಾನಕ್ಕೆ ಅವಕಾಶವಿದೆ ಎಂದು ತಹಸೀಲ್ದಾರ್ ರಾಮಪ್ಪ ತಿಳಿಸಿದರು. ಸಮಿತಿ ರಾಜ್ಯಾಧ್ಯಕ್ಷ ಎಸ್.ಆರ್. ಶಶಿಕಾಂತ್ ಮಾತನಾಡಿದರು. ಮುಖಂಡರಾದ ಕೆ.ಎಂ. ಮಂಜುನಾಥ್, ಸೋಸಲೆ ಮಂಜುನಾಥ್ ಇದ್ದರು.
ಮತದಾನಕ್ಕೆ ಸಕಲ ಸಿದ್ಧತೆ
ಹುಣಸೂರು: ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಮತದಾನವು ಏ. 17 ರಂದು ನಡೆಯಲಿದ್ದು, ಹುಣಸೂರು ವಿಧಾನಸಭಾ ಕ್ಷೇತ್ರದಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಉಪ ವಿಭಾಗಾಧಿಕಾರಿ ಜಗದೀಶ್ ತಿಳಿಸಿದ್ದಾರೆ.
ತಾಲೂಕಿನಲ್ಲಿ ಸೂಕ್ಷ್ಮ, ಅತಿ ಸೂಕ್ಷ್ಮ ಮತ್ತು ಸಮಸ್ಯೆಗಳಿರುವ ಮತದಾನ ಕೇಂದ್ರಗಳ ಮಾಹಿತಿ ಪಡೆದು ಸೂಕ್ತ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಮತ್ತು ಮತದಾರರ ಪಟ್ಟಿ, ಚೆಕ್, ಪೋಸ್ಟ್ ಗೊಂದಲಗಳ ನಿವಾರಿಸಲಾಗಿದೆ. ಚುನಾವಣೆಗೆ ಸಂಬಂಧಿಸಿದಂತೆ ಯಾವುದೇ ಅಕ್ರಮ ಮತ್ತು ದೂರು ಇದ್ದರೆ ಸಂಬಂಧಿಸಿದ ಅಧಿಕಾರಿಗಳಿಗೆ ಮಾಹಿತಿ ನೀಡಬಹುದು ಎಂದಿದ್ದಾರೆ.
ಹುಣಸೂರು ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 2,07,359 ಮತದಾರರಿದ್ದು, ಅವರಲ್ಲಿ 1,05,558 ಪುರುಷರು, 1,01,846 ಮಹಿಳೆಯರಿದ್ದಾರೆ. ಹೊಸದಾಗಿ 1762 ಮಂದಿ ಸೇರ್ಪಡೆಯಾಗಿದ್ದಾರೆ. ಪುರುಷರು ತಾಲೂಕಿನಾದ್ಯಂತ ಒಟ್ಟು 263 ಬೂತ್ಗಳಿವೆ. ಮನೆ ಮನೆಗೆ ಏ.15ಮತ್ತು 16 ರಂದು ತಲುಪಿಸುತ್ತಾರೆ. ಯಾವುದೇ ರಾಜಕೀಯ ಪಕ್ಷಗಳ ಮುಖಂಡರಿಗೆ ಹಸ್ತಕ್ಷೇಪ ಮಾಡಲು ಅವಕಾಶವಿಲ್ಲ ಎಂದರು.
ಜಾಜಿಯ ಫಾರಂ ಹೌಸ್ನಲ್ಲಿ ನಿವೃತ್ತ ಪೊಲೀಸ್ ಅಧಿಕಾರಿ ಪುತ್ರ ಚೇತನ್ ಅನುಮತಿ ಇಲ್ಲದೆ ಊಟ ಹಾಕಿಸಿದ್ದರು ಎಂಬ ದೂರಿನ ಮೇಲೆ ಪ್ರಕರಣ ದಾಖಲು ಮಾಡಲಾಗಿದೆ.
ನಿರ್ಭೀತ ಮತದಾನಕ್ಕೆ ಮನವಿ
ಎಚ್.ಡಿ. ಕೋಟೆ: ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ನಿರ್ಭೀತಿಯಿಂದ ಮತದಾನ ಮಾಡುವಂತೆ ಜಿಲ್ಲಾ ಶಿಶು ಅಭಿವೃದ್ಧಿ ಉಪ ನಿರ್ದೇಶಕ ಎನ್.ಆರ್. ವಿಜಯ್ ಮನವಿ ಮಾಡಿದರು. ಪಟ್ಟಣದಲ್ಲಿ ತಾಲೂಕಿನ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಆಶಾ ಕಾರ್ಯಕರ್ತೆಯರು ಹಾಗೂ ಸ್ವ ಸಹಾಯ ಗುಂಪುಗಳ ಪ್ರತಿನಿಧಿಗಳಿಗೆ ಏರ್ಪಡಿಸಿದ್ದ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರತಿಯೊಬ್ಬ ಮತದಾರರು ತಪ್ಪದೇ ಮತ ಚಲಾಯಿಸಬೇಕು. ಇದಕ್ಕಾಗಿ ಹಲವು ದಿನ ಏ. 10 ರಿಂದ ತಮ್ಮ ಕೇಂದ್ರದ ವ್ಯಾಪ್ತಿಯಲ್ಲಿ ಪ್ರತಿ ಮನೆಗಳಿಗೂ ತೆರಳಿ ಮತದಾರರನ್ನು ಜಾಗೃತಗೊಳಿಸುವಂತೆ ಕರೆ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

