ಮೈಸೂರು

ಸಮಾವೇಶದಲ್ಲಿ ಜನಸ್ತೋಮ

Published On :

ಮೈಸೂರು: ಬಿಜೆಪಿಯ ಪ್ರಧಾನಿ ಅಭ್ಯರ್ಥಿ, ಗುಜರಾತ್ ಸಿಎಂ ನರೇಂದ್ರ ಮೋದಿ  ಅವರು ಮಂಗಳವಾರ ನಡೆಸಿದ ವಿಜಯಿ ಭಾರತ ಸಮಾವೇಶದಲ್ಲಿ ಸಹಸ್ರಾರು ಮಂದಿ ಪಾಲ್ಗೊಂಡಿದ್ದರು. ಅದೇ ರೀತಿ ಬುಧವಾರ ಎಐಸಿಸಿ ಅಧ್ಯಕ್ಷೆ  ಸೋನಿಯಾಗಾಂಧಿ ಅವರು ನಡೆಸಿದ ಸಮಾವೇಶದಲ್ಲಿ ಸಹಸ್ರಾರು ಮಂದಿ ಪಾಲ್ಗೊಂಡಿದ್ದರು.
ಮೋದಿ ಕಾರ್ಯಕ್ರಮಕ್ಕೆ ಶಿಕ್ಷಿತರು, ನಗರ ಪ್ರದೇಶದವರು ಹಾಗೂ ಕೊಡಗಿನಿಂದ ಹೆಚ್ಚು ಮಂದಿ ಆಗಮಿಸಿದ್ದರು. ಆದರೆ, ಕಾಂಗ್ರೆಸ್ ಸಮಾವೇಶದಲ್ಲಿ ಹೆಚ್ಚು ಮಂದಿ ಗ್ರಾಮೀಣ ಪ್ರದೇಶದಿಂದ ಆಗಮಿಸಿದವರಾಗಿದ್ದರು.  ಅವರನ್ನು  ವಾಹನಗಳಲ್ಲಿ  ವಿವಿಧ ಜಿಲ್ಲೆಗಳಿಂದ ಕರೆತರಲಾಗಿತ್ತು. ಅವುಗಳನ್ನು ಸಮಾವೇಶ ನಡೆದ ಮಹಾರಾಜ ಕಾಲೇಜು ಮೈದಾನದ ಸುತ್ತಮುತ್ತಲಿನ ಕುಕ್ಕರಹಳ್ಳಿ ಕೆರೆ, ನ್ಯಾಯಾಲಯ ಎದುರಿನ ರಸ್ತೆ, ರಾಮಸ್ವಾಮಿ ವೃತ್ತ, ವಿವಿ ಓವೆಂಲ್ ಮೈದಾನ ಮತ್ತಿತರ ಕಡೆ ನಿಲುಗಡೆ ಮಾಡಲಾಗಿತ್ತು. ಕೆಲವೆಡೆ ಸಮಾವೇಶಕ್ಕೆ ಬಂದವರಿಗೆ ಬಾತ್ ಹಾಗೂ ನೀರು ವಿತರಿಸಲಾಯಿತು. ಮಧ್ಯಾಹ್ನ 2 ಗಂಟೆಗೆ ಆರಂಭವಾಗಬೇಕಿದ್ದ ಕಾರ್ಯಕ್ರಮ ಮಧ್ಯಾಹ್ನ 3.15ಕ್ಕೆ ಆರಂಭವಾಯಿತು. ಬಿಸಿಲಿನ ಜಳ ಜನರಿಗೆ ತಟ್ಟದಿರಲಿ ಎಂಬ ಕಾರಣಕ್ಕೆ ಬೃಹತ್ ಶಾಮಿಯಾನ ಹಾಕಿಸಲಾಗಿತ್ತು. ಸಮಾವೇಶದಲ್ಲಿ ಕಾಂಗ್ರೆಸ್ ಸೇವಾದಳದವರು ಬಿಳಿವಸ್ತ್ರ, ಗಾಂಧಿ ಟೋಪಿ ಧರಿಸಿ ಭಾಗವಹಿಸಿದ್ದರು. ಸಮಾವೇಶದ ಭದ್ರತೆಗೆ 2 ಸಾವಿರಕ್ಕೂ ಹೆಚ್ಚು ಮಂದಿ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿತ್ತು. ನಗರ ಪೊಲೀಸ್ ಆಯುಕ್ತ ಡಾ.ಎಂ.ಎ. ಸಲೀಂ ಕಾನೂನು- ಸುವ್ಯವಸ್ಥೆ ಉಸ್ತುವಾರಿ ನೋಡಿಕೊಂಡರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.