ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕ ಯತ್ನ
ಎಚ್.ಡಿ. ಕೋಟೆ: ನನಗೆ ಸಿಕ್ಕ ಐದು ವರ್ಷಗಳ ಅವಧಿಯಲ್ಲಿ ಚಾಮರಾಜನಗರ ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ ಎಂದು ಕಾಂಗ್ರೆಸ್ ಅಭ್ಯರ್ಥಿ ಆರ್.ಧ್ರುವನಾರಾಯಣ್ ಹೇಳಿದರು.
ಪಟ್ಟಣದ ತಾಲೂಕು ಪತ್ರಕರ್ತರ ಸಂಘದ ಕಚೇರಿಯಲ್ಲಿ ಗುರುವಾರ ಏರ್ಪಡಿಸಿದ್ದ ಸಂವಾದದಲ್ಲಿ ಮಾತನಾಡಿದ ಅವರು, 5 ವರ್ಷದಲ್ಲಿ ಪಟ್ಟಣದಲ್ಲಿ 6 ಕೋಟಿ ವೆಚ್ಚದಲ್ಲಿ ತಂಬಾಕು ಹರಾಜು ಮಾರುಕಟ್ಟೆ ನಿರ್ಮಿಸಲಾಗಿದೆ. ತಾಲೂಕಿನಲ್ಲಿ ಪರಿಶಿಷ್ಟ ವರ್ಗದವರು ಜಾಸ್ತಿಯಾಗಿರುವುದರಿಂದ ಅದರಲ್ಲಿಯೂ ಮುಖ್ಯವಾಗಿ ಗಿರಿಜನರು ಹೆಚ್ಚಿನ ಸಂಖ್ಯೆಯಲ್ಲಿರುವುದರಿಂದ ಬಸವನಗಿರಿ ಹಾಡಿಯಲ್ಲಿ ಸುಮಾರು 13 ಕೋಟಿ ವೆಚ್ಚದಲ್ಲಿ ಏಕಲವ್ಯ ವಿದ್ಯಾಲಯ ಮಂಜೂರು ಮಾಡಿಸಿದ್ದೇನೆ.
ತಾಲೂಕಿನ ಬುಡಕಟ್ಟು ಜನರಿಗೆ ಸುಮಾರು 800 ಮನೆಗಳನ್ನು ಮಂಜೂರು ಮಾಡಿಸಿದ್ದು ಉಳಿದಂತೆ 600 ಮನೆಗಳ ಕಾಮಗಾರಿಯು ನಡೆಯಬೇಕಿದೆ. ಸರ್ಕಾರಿ ಪ್ರೌಢಶಾಲೆಗಳಲ್ಲಿ ಹೊಸ ಕೊಠಡಿಗಳ ನಿರ್ಮಾಣಕ್ಕೆ ಹಣ ಬಿಡುಗಡೆ ಮಾಡಲಾಗಿದ್ದು ಕಾಮಗಾರಿ ಪ್ರಗತಿಯಲ್ಲಿದೆ. ಹೊಸದಾಗಿ ರಾಷ್ಟ್ರೀಯ ಅಭಿವೃದ್ಧಿಗಾಗಿ 550 ಕೋಟಿ, ಹೊಸ ರೈಲು ಮಾರ್ಗಕ್ಕಾಗಿ 1330 ಕೋಟಿ ಬಿಡುಗಡೆ ಮಾಡಿಸಿದ್ದೇನೆ ಎಂದರು. ಸಂವಾದದಲ್ಲಿ ಜಿಪಂ ಸದಸ್ಯರಾದ ನಂದಿನಿ ಚಂದ್ರಶೇಖರ್, ಎಚ್.ಸಿ. ಮಂಜುನಾಥ್ ಇದ್ದರು.
ಮತದಾನ ಜಾಗೃತಿ
ಅಂತರಸಂತೆ: ಎಚ್.ಡಿ. ಕೋಟೆ ತಾಲೂಕು ಅಂತರಸಂತೆ ಗ್ರಾಪಂನಲ್ಲಿ ಸಾಕ್ಷರ್ ಭಾರತ್ ಲೋಕ ಶಿಕ್ಷಣ ಕೇಂದ್ರದಿಂದ ಮತದಾನ ಜಾಗೃತಿ ಶಿಬಿರ ಏರ್ಪಡಿಸಲಾಗಿತ್ತು. ಶಿಬಿರದಲ್ಲಿ ಸ್ವಯಂ ಸೇವಕರು, ಕಲಿಕಾರ್ಥಿಗಳು, ನವಸಾಕ್ಷರರಿಗೆ ಮತ್ತು ಮಹಿಳಾ ಸ್ವ- ಸಹಾಯ ಸಂಘದ ಸದಸ್ಯರಿಗೆ ಮತದಾನ ಮಾಡುವ ಬಗ್ಗೆ ತಿಳಿಸಲಾಯಿತು. ಜಿಲ್ಲಾ ವಯಸ್ಕರ ಶಿಕ್ಷಣ ಅಧಿಕಾರಿ ಡಾ.ಕೆ. ಶಂಕರೇಗೌಡ ಮಾತನಾಡಿ, ಮತದಾನ ತಮ್ಮೆಲ್ಲರ ಹಕ್ಕು. ಏ.17 ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ತಪ್ಪದೆ ಕಡ್ಡಾಯವಾಗಿ ಮತ ಚಲಾಯಿಸಿ ನೀವು ಮತ್ತು ನಿಮ್ಮ ಮನೆಯವರು ಅಕ್ಕಪಕ್ಕದವರಿಗೆ ತಿಳಿಸಿ ತಪ್ಪದೇ ಮತದಾನ ಮಾಡುವಂತೆ ತಿಳಿಸಿದರು. ತಾ. ಸಂಯೋಜಕ ಯು.ನಾಗರಾಜು, ಮುಖ್ಯೋಪಾಧ್ಯಾಯಿನಿ ದ್ರಾಕ್ಷಾಯಿಣಿ, ಸಂಯೋಜಕಿ ಶೀಲ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

