ಮೈಸೂರು

ಪ್ರತಿಯೊಬ್ಬರು ಮತದಾನ ಮಾಡಿ: ಮೋಕ್ಷಪತಿ ಶ್ರೀ

Published On :

ರಾವಂದೂರು: ಭಾರತದಲ್ಲಿ ಪ್ರತಿಯೊಬ್ಬರು ಮತದಾನ ಮಾಡುವಂತೆ ಪ್ರೇರೇಪಿಸುವ ಮತ್ತು ಜಾಗೃತಿ ಮೂಡಿಸುವ ಕೆಲಸವಾಗಬೇಕಿದೆ ಎಂದು ರಾವಂದೂರು ಮುರುಘಾಮಠದ ಮೋಕ್ಷಪತಿ ಸ್ವಾಮೀಜಿ ಹೇಳಿದರು.
ಗ್ರಾಪಂ ಲೋಕಶಿಕ್ಷಣ ಕೇಂದ್ರದ ವತಿಯಿಂದ ಸಾಕ್ಷರತಾ ಮತದಾನ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸ್ವಾತಂತ್ರ್ಯ ಬಂದು ಅರ್ಧಶತಮಾನ ಕಳೆದರೂ ಸಂಪೂರ್ಣ ಮತದಾನ ನಡೆಯದಿರುವುದು ಪ್ರಜಾಪ್ರಭುತ್ವ ದೇಶದಲ್ಲಿ ಉತ್ತಮ ಬೆಳವಣಿಗೆಯಲ್ಲ. ಹೀಗಾಗಿ ಸೂಕ್ತ ಜನರನ್ನು ಆಯ್ಕೆ ಮಾಡುವುದು ಪ್ರಜಾಪ್ರಭುತ್ವದಲ್ಲಿ ಅತಿದೊಡ್ಡ. ಜವಾಬ್ದಾರಿಯಾಗಿದೆ. ಎಲ್ಲಾ ಹಕ್ಕುಗಳನ್ನು ಕೇಳುವ ಜನರು ಮತದಾನದ ಜವಾಬ್ದಾರಿಯಿಂದ ನುಣುಚಿಕೊಳ್ಳಬಾರದು. ಎಲ್ಲ ಕ್ಷೇತ್ರದಲ್ಲಿಯೂ ಶೇ.100 ರಷ್ಟು ಮತದಾನವಾಗಬೇಕೆಂದು ತಿಳಿಸಿದರು.
ಉಪ ತಹಸೀಲ್ದಾರ್ ಸಣ್ಣರಾಮಪ್ಪ ಮಾತನಾಡಿ, ಮತದಾರರು ಯಾವುದೆ ಆಮಿಷಗಳಿಗೆ ಬಲಿಯಾಗದೆ, ಕಡ್ಡಾಯವಾಗಿ ಮತದಾನ ಮಾಡಬೇಕು. ಬೆಳಗ್ಗೆ 7 ರಿಂದ ಸಂಜೆ 6 ರವರೆಗೆ ಮತಗಟ್ಟೆಗಳು ತೆರೆದಿರುತ್ತವೆ. ಈ ಸಮಯವನ್ನು ಸದುಪಯೋಗ ಪಡಿಸಿಕೊಂಡು ಮತದಾನ ಮಾಡಲು ಮುಂದಾಗಬೇಕು ಎಂದು ತಿಳಿಸಿದರು. ಇದೇ ವೇಳೆ ರಾವಂದೂರಿನ ಪ್ರಮುಖ ಬೀದಿಗಳಲ್ಲಿ ಜಾಗೃತಿ ಜಾಥಾ ನಡೆಸಲಾಯಿತು. ಪಿಡಿಒ ಬಸವರಾಜು, ಗ್ರಾಮ ಲೆಕ್ಕಿಗ ಕೋಟೆಗೌಡ, ಅಂಗನವಾಡಿ ಕಾರ್ಯಕರ್ತೆ ರಾಜಾಮಣಿ, ಪ್ರೇರಕ ಮುಕುಂದ ನವಸಾಕ್ಷರರು ಮತ್ತು ಕಲಿಕಾರ್ಥಿಗಳು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.