ಮೈಸೂರು

ಪ್ರತಿಜ್ಞೆ ಸ್ವೀಕರಿಸಿ ಮತದಾನ ಅಭಿಯಾನ

Published On :

ಮೈಸೂರು: ಲೋಕಸಭಾ ಚುನಾವಣೆಯಲ್ಲಿ ಮತದಾರರಿಗೆ ಅರಿವು ಮೂಡಿಸುವ ಸಲುವಾಗಿ ವಿವಿಧೆಡೆ ಮತದಾನ ಜಾಗೃತಿ ಅಭಿಯಾನ ಗುರುವಾರ ನಡೆಸಲಾಯಿತು. ಅರಮನೆ ಕೋಟೆ ಆಂಜುನೇಯಸ್ವಾಮಿ ದೇವಸ್ಥಾನದ ಮುಂಭಾಗ ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ಈ ಕಾರ್ಯಕ್ರಮವನ್ನು ಪೊಲೀಸ್ ಆಯುಕ್ತ ಡಾ.ಎಂ.ಎ. ಸಲೀಂ ಉದ್ಘಾಟಿಸಿದರು.
ಜಿಲ್ಲಾಧಿಕಾರಿ ಸಿ.ಶಿಖಾ, ಜಿಪಂ. ಸಿಇಒ ಪಿ.ಎ. ಗೋಪಾಲ್, ವಾರ್ತಾ ಇಲಾಖೆ ಉಪನಿರ್ದೇಶಕ ಎ.ಆರ್ ಪ್ರಕಾಶ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಕೆ.ಸುರೇಶ್ ಮತ್ತಿತರರು ಇದ್ದರು. ನಂತರ ಅಲ್ಲಿಂದ ಹೊರಟ ಮೆರವಣಿಗೆಯು ದೊಡ್ಡ ಗಡಿಯಾರ, ಅಶೋಕರಸ್ತೆ, ಕೇಂದ್ರ ಅಂಚೆ ಕಚೇರಿ ವೃತ್ತಿ ಬಳಸಿಕೊಂಡು ಇರ್ವಿನ್ ರಸ್ತೆ, ಕೆ.ಆರ್. ಆಸ್ಪತ್ರೆ ವೃತ್ತದ ಮೂಲಕ ಸಯ್ಯಾಜಿರಾವ್ ರಸ್ತೆ ಮೂಲಕ ಕೆ.ಆರ್. ವೃತ್ತ ಮುಖೇನ ಅರಮನೆ ಮುಂಭಾಗ ಅಂತ್ಯಗೊಂಡಿತು. ನಂತರ ಕೆ.ಆರ್. ವೃತ್ತದಲ್ಲಿ ಪಂಜಿನ ಮೆರವಣಿಗೆ ನಡೆಸಲಾಯಿತು.
ಕೈಗಾರಿಕಾ ವಾಣಿಜ್ಯ ಇಲಾಖೆ: ಮೈಸೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಸಹಯೋಗದಲ್ಲಿ ಸಂಸ್ಥೆಯ ಸಭಾಂಗಣದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮತದಾರರ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು. ಸಂಸ್ಥೆಯ ಅಧ್ಯಕ್ಷ ಎ.ಎಸ್. ಸತೀಶ್, ಉಪಾಧ್ಯಕ್ಷ ಎನ್.ಎಚ್. ಜಯಂತ್, ಗೌರವ ಕಾರ್ಯದರ್ಶಿ ಶ್ರೀಶೈಲ ರಾಮಣ್ಣನವರ್, ಖಜಾಂಚಿ ಎಂ.ಸಿ. ಬನ್ಸಾಲಿ ಹಾಗೂ ಜಂಟಿ ಕಾರ್ಯದರ್ಶಿ ಆರ್. ಆನಂದ್ ಮತ್ತಿತರರು ಇದ್ದರು.
ವಿವೇಕನಂದ ನಾಯಕತ್ವ ತರಬೇತಿ ಸಂಸ್ಥೆಯು ವಿವಿಧ ಸ್ವಯಂ ಸೇವಾ ಸಂಸ್ಥೆಗಳ ಸಹಯೋಗದಲ್ಲಿ ಮತದಾನದ ಜಾಗೃತಿಗಾಗಿ ಸೈಕಲ್ ರ್ಯಾಲಿ ನಡೆಸಿತು. ವಿಜಯನಗರದ ನೀರಿನ ಸಂಗ್ರಹಾಗಾರ ವೃತ್ತದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮವನ್ನು ಲಯನ್ಸ್ ಸೇವಾ ಸಂಸ್ಥೆ ಕಾರ್ಯದರ್ಶಿ ಶಿವಕುಮಾರ್ ಉದ್ಘಾಟಿಸಿದರು. ನಂತರ ಅಲ್ಲಿಂದ ಆರಂಭವಾದ ರ್ಯಾಲಿಯು ವಿದ್ಯಾವರ್ಧಕ ಎಂಜಿನಿಯರಿಂಗ್ ಕಾಲೇಜು ಮೂಲಕ ಹೊರಟು, ದಿವ್ಯಾ ರೂಪ ಕಲ್ಯಾಣ ಮಂಟಪ, ಯೋಗಾನರಸಿಂಹ ಸ್ವಾಮಿ ದೇವಸ್ಥಾನ ಮೂಲಕ ಐಶ್ವರ್ಯ ಪೆಟ್ರೋಲ್ ಬಂಕ್ ಬಳಿ ಕೊನೆಗೊಂಡಿತು.
ಎಸ್‌ಡಿಎಂ ಕಾಲೇಜು: ಕೃಷ್ಣಮೂರ್ತಿಪುರಂನ ಎಸ್‌ಡಿಎಂ ಕಾಲೇಜು ವತಿಯಿಂದ ಏರ್ಪಡಿಸಿದ್ದ ಮತದಾನ ಜಾಗೃತಿ ಕಾರ್ಯಕ್ರಮವನ್ನು ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕ ಪ್ರೊ.ಸಿ.ಕೆ. ಮಹೇಶ್ವರಪ್ಪ ಉದ್ಘಾಟಿಸಿದರು. ಪ್ರಾಂಶುಪಾಲ ಪ್ರೊ.ಕೆ.ವಿ ದಾಮೋದರಗೌಡ, ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಡಾ.ಸಿ.ವೈ. ಕವಿತಾ ಇದ್ದರು. ವರುಣ ಗ್ರಾಮದಲ್ಲಿ ಏರ್ಪಡಿಸಿದ್ದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಬಿ.ಸಿ. ಬೆಟ್ಟೇಗೌಡ ಪ್ರತಿಜ್ಞಾ ವಿಧಿ ಬೋಧಿಸಿದರು. ಸಹಾಯಕ ಅಭಿವೃದ್ಧಿ ಯೋಜನಾಧಿಕಾರಿ ಎಚ್.ಚಂದ್ರಶೇಖರ್, ಮೇಲ್ವಿಚಾರಕಿ ಲೀಲಾವತಿ ಎಲ್.ಕುಲಕರ್ಣಿ, ಜಿಲ್ಲಾ ನಿರೂಪಣಾಧಿಕಾರಿ ನಾಗೇಶ್, ತಾಂಪ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ, ಪಿಡಿಒಗಳಾದ ಬಸವರಾಜು, ಬೋರೇಗೌಡ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.