ದೊಡ್ಡಸ್ವಾಮೆಗೌಡರ ವಿರುದ್ಧ ದ್ವಾರಕೀಶ್ ವಾಗ್ದಾಳಿ
ಮೈಸೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮತ ನೀಡಿದ ರೈತರ ಜಮೀನುಗಳನ್ನು ಕಿತ್ತುಕೊಂಡು ರಿಯಲ್ ಎಸ್ಟೇಟ್ ಉದ್ಯೋಗ ಮಾಡಿ, ಲೋಕಸಭಾ ಚುನಾವಣೆಯಲ್ಲಿ ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿಯಿಂದ ಮೆಚ್ಚುಗೆ ಗಳಿಸಲು ಮುಂದಾಗಿರುವ ಕಾಂಗ್ರೆಸ್ ಮುಖಂಡ ದೊಡ್ಡಸ್ವಾಮೇಗೌಡರಿಗೆ ಯಾವ ಪಕ್ಷ ನಿಷ್ಠೆ ಇದೆ ಎಂದು ಜಿಪಂ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಸಿ.ಜೆ. ದ್ವಾರಕೀಶ್ ಪ್ರಶ್ನಿಸಿದರು.
ಚುಂಚನಕಟ್ಟೆ ಹೋಬಳಿಯ ಹನಸೋಗೆ ಗ್ರಾಮದಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸಿ.ಎಸ್. ಪುಟ್ಟರಾಜು ಪರ ಮತಯಾಚನೆ ಮಾಡಿ ಮಾತನಾಡಿದ ಅವರು, ಕಾಂಗ್ರೆಸ್ನ ನಿಷ್ಠಾವಂತ ಕಾರ್ಯಕರ್ತ ಎಂದು ಹೋದ ಕಡೆಯಲ್ಲ ಬೊಗಳೆ ಬಿಡುತ್ತಿರುವ ಇವರು, ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ವೇಳೆ ಕಾಂಗ್ರೆಸ್ ತೊರೆದು, ಬಿಜೆಪಿ ಸೇರಿದ್ದು, ಹಣ ಗಳಿಸುವ ಉದ್ದೇಶದಿಂದಲೇ ಹೊರತು, ಕ್ಷೇತ್ರದ ಅಭಿವೃದ್ಧಿ ದೃಷ್ಟಿಯಿಂದಲ್ಲ. ಆದ್ದರಿಂದ ಇಂತಹವರು ಶಾಸಕ ಸಾ.ರಾ. ಮಹೇಶ್ ಮಾಡಿರುವ ಅಭಿವೃದ್ಧಿ ಕೆಲಸಗಳ ಕುರಿತು ಟೀಕೆ ಮಾಡುತ್ತಿರುವುದು ಅಸಂಬದ್ಧ ಎಂದು ಹೇಳಿದರು.
ಕಳೆದ ವಿಧಾನಸಭಾ ಚುನಾವಣೆ ವೇಳೆ, ಮಳೆ ಬೀಳದೆ ಬರಗಾಲ ಪೀಡಿತ ಪ್ರದೇಶ ಎಂದು ತಾಲೂಕನ್ನು ಘೋಷಣೆ ಮಾಡಲಾಗಿತ್ತು. ಇದೇ ವೇಳೆ ಶಾಸಕ ಸಾ.ರಾ. ಮಹೇಶ್ ಅವರು ಮೂರು ತಿಂಗಳು ಉಚಿತವಾಗಿ ಅಕ್ಕಿ ಕೊಡುವ ಮೂಲಕ ಬಡವರ ನೆರವಿಗೆ ಧಾವಿಸಿದ್ದರು ಎಂದರು.
ತಾಲೂಕಿನಲ್ಲಿ ಶಾಸಕ ಸಾ.ರಾ.ಮಹೇಶ್ ಅವರು ಯಶಸ್ವಿನಿ, ಬಸ್ಪಾಸ್, ಉಚಿತ ನೋಟ್ ಪುಸ್ತಕ, ಅಂಬುಲೆನ್ಸ್, ಮಹಿಳಾ ಸಂಘಗಳಿಗೆ ಮತ್ತು ನೊಂದವರಿಗೆ ಆರ್ಥಿಕ ನೆರವು ಸೇರಿದಂತೆ 700 ಕೋಟಿ ಅಭಿವೃದ್ಧಿ ಕೆಲಸ ಕಾರ್ಯಗಳನ್ನು ಮಾಡಿದ್ದಾರೆ. ಎಂದರು. ಶಾಸಕ ಸಾ.ರಾ. ಮಹೇಶ್ ನೇತೃತ್ವದಲ್ಲಿ ತಾಲೂಕಿನ ವಿವಿಧ ಗ್ರಾಮಗಳಿಗೆ ತೆರಳಿ ಮತಯಾಚಿಸಿದರು. ತಾಪಂ ಮಾಜಿ ಉಪಾಧ್ಯಕ್ಷ ಹಾಡ್ಯಮಹದೇವಸ್ವಾಮಿ, ಎಸ್.ಟಿ. ಕೀರ್ತಿ, ಎಚ್.ಆರ್. ಮಧುಚಂದ್ರ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

