ಮೈಸೂರು

ಉಪ ನೋಂದಣಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ

Published On :

ಮೈಸೂರು: ಮೈಸೂರು ರಾಜವಂಶಸ್ಥ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರಿಗೆ ಸೇರಿದ ಆಸ್ತಿ ಪರಭಾರೆಗೆ ಸಹಕರಿಸಿದ್ದ ಆರೋಪ ಎದುರಿಸುತ್ತಿರುವ ಉಪನೋಂದಣಾಧಿಕಾರಿ ಗಿರೀಶ್ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ಶುಕ್ರವಾರ ದಾಳಿ ನಡೆಸಿದರು. ಸಿದ್ದಾರ್ಥನಗರದ ವಿನಯ ಮಾರ್ಗದಲ್ಲಿನ ಗಿರೀಶ್ ಮನೆ ಮೇಲೆ ದಾಳಿ ನಡೆಸಿ ಕೆಲ ದಾಖಲೆಗಳನ್ನು ಪರಿಶೀಲಿಸಿದರು. ಈ ವೇಳೆ ಕೆಲವು ದಾಖಲಾತಿ ಲಭಿಸಿದೆ. ಆದರೆ ಕಾನೂನುಬಾಹಿರವಾಗಿ ನಡೆಸಿದ ವ್ಯವಹಾರಕ್ಕೆ ಸಂಬಂಧಿಸಿದ ದಾಖಲೆ ದೊರೆತಿಲ್ಲ. ದಾಳಿ ವೇಳೆ ಸ್ವಿಫ್ಟ್ ಕಾರು, ಚಿನ್ನಾಭರಣ ಸೇರಿದಂತೆ ಸುಮಾರು 30 ಲಕ್ಷ ಮೌಲ್ಯದ ಬೆಲೆ ಬಾಳುವ ವಸ್ತುಗಳು ಪತ್ತೆಯಾಗಿವೆ. ಪ್ರಕರಣ ಕುರಿತಂತೆ ವಿಚಾರಣೆ ಮುಂದುವರಿಸಲಾಗಿದೆ ಎಂದು ಲೋಕಾಯುಕ್ತ ಎಸ್ಪಿ ಜಗದೀಶ್‌ಪ್ರಸಾದ್ ತಿಳಿಸಿದರು.

ಇನ್‌ಸ್ಪೆಕ್ಟರ್ ರಾಜಣ್ಣ ಅಮಾನತು
ಮೈಸೂರು: ಗಾಂಜಾ ಬೆಳೆ ಪ್ರಕರಣದಲ್ಲಿ ಶಾಮೀಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಮಂಡಿ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ರಾಜಣ್ಣ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಹುಣಸೂರು ತಾಲೂಕಿನ ನೆಲ್ಲೂರುಪಾಲ ಬಳಿ ಗಾಂಜಾ ಬೆಳೆ ಬೆಳೆದಿದ್ದ ಮಹಿಳೆಯೊಬ್ಬರು ರಾಜಣ್ಣ ಅವರ ಸಂಬಂಧಿ ಎನ್ನಲಾಗಿದೆ. ಹುಣಸೂರು ಠಾಣೆ ಇನ್‌ಸ್ಪೆಕ್ಟರ್ ಗಜೇಂದ್ರ ಅವರು ಡಿವೈಎಸ್ಪಿ ನಂಜುಂಡ ಅವರ ಮಾರ್ಗದರ್ಶನದಲ್ಲಿ ದಾಳಿ ನಡೆಸಿದ್ದಾಗ ಈ ವಿಷಯ ತಿಳಿದುಬಂದಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.