ಮೈಸೂರು

ಬಿಜೆಪಿ ಗೆಲವಿಗೆ ಶ್ರಮ ವಹಿಸಿ

Published On :

ಟಿ. ನರಸೀಪುರ: ಪ್ರಸ್ತುತ ಲೋಕಸಭಾ ಚುನಾವಣೆಯಲ್ಲಿ ಚಾಮರಾಜನಗರ ಕ್ಷೇತ್ರದಲ್ಲಿ ಕಾರ್ಯಕರ್ತರ ಪರಿಶ್ರಮದಿಂದ ಬಿಜೆಪಿಗೆ ಪವಾಡದಂತೆ ಅಚ್ಚರಿಯ ಗೆಲವು ಲಭ್ಯವಾಗಲಿದೆ ಎಂದು ಬಿಜೆಪಿ ಅಭ್ಯರ್ಥಿ ಎ.ಆರ್. ಕೃಷ್ಣಮೂರ್ತಿ ಹೇಳಿದರು.
ತಾಲೂಕಿನ ಚನ್ನಬಸವನಹುಂಡಿ ಗ್ರಾಮದಲ್ಲಿ ಪಾದಯಾತ್ರೆ ಮೂಲಕ ಮತಯಾಚಿಸಿ ಮಾತನಾಡಿದ ಅವರು, ವಿಧಾನಸಭೆ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸೋಲಿನ ಕಹಿಯನ್ನು ಪಡೆದ ಕಾರ್ಯಕರ್ತರು ಹಾಗೂ ಮುಖಂಡರು ಶ್ರಮವಹಿಸಿ ಬಿಜೆಪಿ ಗೆಲವಿಗೆ ಮತದಾರರ ಮನವೊಲಿಸುವಲ್ಲಿ ಸಫಲರಾಗುವರು ಎಂದು ತಿಳಿಸಿದರು.
ವಾಜಪೇಯಿ ನೇತೃತ್ವದ ಹಿಂದಿನ ಎನ್‌ಡಿಎ ಕೇಂದ್ರ ಸರ್ಕಾರ ಹಾಗೂ ರಾಜ್ಯದಲ್ಲಿ ಯಡಿಯೂರಪ್ಪ, ಸದಾನಂದಗೌಡ ಮತ್ತು ಜಗದೀಶ್ ಶೆಟ್ಟರ ಬಿಜೆಪಿ ಸರ್ಕಾರದ ಉತ್ತಮ ಆಡಳಿತ, ಮಾಜಿ ಸಚಿವರಾದ ಬಿ.ರಾಚಯ್ಯ ಹಾಗೂ ನನ್ನ ಮೇಲೆ ಚಾಮರಾಜನಗರ ಲೋಕಸಭಾ ಕ್ಷೇತ್ರದ ಜನರು ವಿಶ್ವಾಸವನ್ನಿಟ್ಟಿದ್ದಾರೆ. ಜನಮಾನಸದಲ್ಲಿ ನರೇಂದ್ರ ಮೋದಿ ಅವರು ಈಗಾಗಲೇ ನೆಲೆಸಿದ್ದಾರೆ. ಅವರೇ ಪ್ರಧಾನ ಮಂತ್ರಿಯಾಗುವುದು ಒಲವನ್ನು ವ್ಯಕ್ತಪಡಿಸುತ್ತಿದ್ದಾರೆ. ಆದ್ದರಿಂದ ಬಿಜೆಪಿಗೆ ಗೆಲವು ಬಹುತೇಕ ನಿಶ್ಚಿತವೆಂಬ ವಿಶ್ವಾಸ ವ್ಯಕ್ತಪಡಿಸಿದರು.
12ಕ್ಕೆ ಬಿಎಸ್‌ವೈ, ಶ್ರೀರಾಮುಲು: ಚಾಮರಾಜನಗರ ಲೋಕಸಭಾ ಕ್ಷೇತ್ರದ ವಿವಿಧೆಡೆ ಬಹಿರಂಗ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಲು ಏ.12 ರಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಮಾಜಿ ಸಚಿವ ಬಿ.ಶ್ರೀರಾಮುಲು ಆಗಮಿಸುವರು ಎಂದು ಎ.ಆರ್. ಕೃಷ್ಣಮೂರ್ತಿ ಹೇಳಿದರು. ವಿಧಾನ ಪರಿಷತ್ ಮಾಜಿ ಸದಸ್ಯ ಸಿ.ರಮೇಶ್ ಮಾತನಾಡಿದರು. ಚನ್ನಬಸವನಹುಂಡಿ ಗ್ರಾಮದ ಹಿರಿಯ ಜೆಡಿಎಸ್ ಮುಖಂಡ, ಗ್ರಾಪಂ ಮಾಜಿ ಅಧ್ಯಕ್ಷ ಸಿ.ಬಿ. ಹುಂಡಿ ಚಿನ್ನಸ್ವಾಮಿ ಅವರನ್ನು ಭೇಟಿ ಮಾಡಿದ ಎ.ಆರ್. ಕೃಷ್ಣಮೂರ್ತಿ ಲೋಕಸಭಾ ಚುನಾವಣೆಯಲ್ಲಿ ಬೆಂಬಲ ನೀಡುವಂತೆ ಮನವಿ ಮಾಡಿದರು. ಮೂಗೂರು ಸೇರಿದಂತೆ ಮಾಡ್ರಳ್ಳಿ, ಕುರುಬೂರು, ಕೊತ್ತೇಗಾಲ, ಸೀಹಳ್ಳಿ, ಕನ್ನಹಳ್ಳಿ, ಶಂಭುದೇವನಪುರ, ದೊಡ್ಡನಹುಂಡಿ, ಕಲಿಯೂರು ಗ್ರಾಮಗಳಲ್ಲಿ ಮತಯಾಚಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.