ವಶಪಡಿಸಿಕೊಂಡ ಹಣ ಯಾರದು?
ಕೆ.ಆರ್. ನಗರ: ಚುನಾವಣಾ ಪ್ರಚಾರ ವೇದಿಕೆಗಳಲ್ಲಿ ಮತ್ತು ಮಾಧ್ಯಮಗಳ ಮುಂದೆ ನಾವು ಸತ್ಯ ಹರಿಶ್ಚಂದ್ರರು ಎಂದು ಹೇಳಿಕೊಂಡು ಬೀಗುವ ಕಾಂಗ್ರೆಸ್‌ನವರ ನಿಜ ಬಣ್ಣ ಬಯಲಾಗಬೇಕಾದರೆ, ಏ.10 ರಂದು ಹುಣಸೂರು ತಾಲೂಕಿನ ಮನುಗನಹಳ್ಳಿ ಚೆಕ್ ಪೋಸ್ಟ್ ಬಳಿ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ವಶಪಡಿಸಿಕೊಂಡ ಹಣ ಯಾರದು ಎಂದು ತನಿಖೆ ಮಾಡಿದರೆ ತಿಳಿಯುತ್ತದೆ ಎಂದು ಶಾಸಕ ಸಾ.ರಾ. ಮಹೇಶ್ ಹೇಳಿದರು.
ತಾಲೂಕಿನ ಕರ್ತಾಳು ಗ್ರಾಮದಲ್ಲಿ ಜೆಡಿಎಸ್ ಅಭ್ಯರ್ಥಿ ಸಿ.ಎಸ್. ಪುಟ್ಟರಾಜು ಪರ ಮನೆ ಮನೆಗೆ ತೆರಳಿ ಮತಯಾಚಿಸಿ ಮಾತನಾಡಿದ ಅವರು, ಆ ಹಣ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಗೆ ಸೇರಿದ ಹಣವಾಗಿದೆ. ಹಣ ಕೊಂಡೊಯ್ಯುತ್ತಿದ್ದ ವ್ಯಕ್ತಿ ಮತ್ತು ಆತನಿಗೆ ಪೊಲೀಸ್ ಠಾಣೆಯಲ್ಲಿ ಜಾಮಿನು ಕೊಡಿಸಲು ಬಂದಿದ್ದವರನ್ನು ತನಿಖೆಗೆ ಒಳಪಡಿಸಬೇಕೆಂದು ಒತ್ತಾಯಿಸಿದರು.
ಮತದಾರರಿಗೆ ಹಂಚಲು ಹಣ ಕೊಂಡೊಯ್ಯಲು ಕಾಗಿನೆಲೆ ಬಿ.ಇಡಿ ಕಾಲೇಜಿನ ಗುಮಾಸ್ತನನ್ನು ಬಳಸಿಕೊಳ್ಳಲಾಗಿದೆ. ಆದ್ದರಿಂದ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ಮಾಡಬೇಕೆಂದು ಒತ್ತಾಯಿಸಿದ ಅವರು, ತತ್ವ ಸಿದ್ಧಾಂತದ ಬಗ್ಗೆ ಮಾತನಾಡುವ ಕಾಂಗ್ರೆಸ್ಸಿಗರಿಗೆ ನಾಚಿಕೆಯಾಗಬೇಕೆಂದು ಅವರು ಟೀಕಿಸಿದರು.
ಎರಡಂಕಿ ದಾಟಲ್ಲ: ಲೋಕಸಬಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಎರಡಂಕಿಯನ್ನೂ ದಾಟುವುದಿಲ್ಲ ಎಂದು ಭವಿಷ್ಯ ನುಡಿದ ಅವರು, ಜೆಡಿಎಸ್ ಈ ಚುನಾವಣೆಯಲ್ಲಿ ಗಣನೀಯ ಸಾಧನೆ ಮಾಡುವುದರ ಜತೆಗೆ ತನ್ನ ಶಕ್ತಿ ಪ್ರದರ್ಶನ ಮಾಡಿ, ಹತ್ತು ಸ್ಥಾನಗಳನ್ನು ಗೆಲ್ಲಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ನಂತರ ಶಾಸಕರು ಚುಂಚನಕಟ್ಟೆ ಹೋಬಳಿಯ ಹನಸೋಗೆ, ಚನ್ನಂಗೆರೆ ಮತ್ತು ಮಾಯಗೌಡನಹಳ್ಳಿ ಗ್ರಾಪಂಗಳ ವ್ಯಾಪ್ತಿಯ ಗ್ರಾಮಗಳಿಗೆ ತೆರಳಿ ಪಾದಯಾತ್ರೆ ನಡೆಸಿ ಮತಯಾಚಿಸಿದರು.
ಜಿಪಂ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಸಿ.ಜೆ.ದ್ವಾರಕೀಶ್, ತಾಪಂ ಮಾಜಿ ಉಪಾಧ್ಯಕ್ಷ ಹಾಡ್ಯ ಮಹದೇವ ಸ್ವಾಮಿ, ಮಾಯಗೌಡನಹಳ್ಳಿ ಗ್ರಾಪಂ ಮಾಜಿ ಉಪಾಧ್ಯಕ್ಷ ಕೆ.ಆರ್. ಜಗದೀಶ್, ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಸ್.ಟಿ. ಕೀರ್ತಿ, ಮಾಜಿ ಅಧ್ಯಕ್ಷ ಎಚ್.ಆರ್.ಮಧುಚಂದ್ರ, ಚುಂಚನಕಟ್ಟೆ ಹೋಬಳಿ ಜೆಡಿಎಸ್ ಅಧ್ಯಕ್ಷ ಎಸ್.ತಿಮ್ಮೇಗೌಡ, ಕಾರ್ಯದರ್ಶಿ ಪ್ರಸನ್ನಕುಮಾರ್, ಮುಖಂಡರಾದ ಬಿ. ರಮೇಶ್, ಮಂಜುನಾಥ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

