ಕೈ ರೋಡ್ ಶೋ
ಕ.ಪ್ರ.ವಾರ್ತೆ ನಂಜನಗೂಡು ಏ. 13
ಪಟ್ಟಣದ ಊಟಿ ರಸ್ತೆಯ ಚಿಂತಾಮಣಿ ಗಣಪತಿ ದೇವಾಲಯ ಬಳಿಯಿಂದ ಕಾಂಗ್ರೆಸ್ ಬೃಹತ್ ರೋಡ್ ಶೋ ರ್ಯಾಲಿಗೆ ಜಿಲ್ಲಾ ಉಸ್ತುವಾರಿ ಸಚಿವ ವಿ. ಶ್ರೀನಿವಾಸಪ್ರಸಾದ್ ಚಾಲನೆ ನೀಡಿದರು.
ತೆರೆದ ಜೀಪಿನಲ್ಲಿ ಶ್ರೀನಿವಾಸಪ್ರಸಾದ್, ಧ್ರುವನಾರಾಯಣ್ ಮತ ಯಾಚನೆ ಮಾಡಿದರು.
ಆರ್. ಧ್ರುವನಾರಾಯಣ್ ಮಾತನಾಡಿ, ಪ್ರಾಮಾಣಿಕವಾಗಿ 5 ವರ್ಷಗಳ ಕಾಲ ಎಲ್ಲ ವರ್ಗದವರ ಹಿತ ಕಾಪಾಡಿ ನನ್ನ ವ್ಯಾಪ್ತಿಯ ಕ್ಷೇತ್ರದಲ್ಲಿ ಎಲ್ಲಿಯೂ ಶಾಂತಿ ಭಂಗವಾಗದಂತೆ ಎಚ್ಚರವಹಿಸಿ ಕೆಲಸ ನಿರ್ವಹಿಸಿದ್ದೇನೆ. ದಕ್ಷಿಣ ಕಾಶಿ ಶ್ರೀಕಂಠೇಶ್ವರಸ್ವಾಮಿ ದೇವಸ್ಥಾನಕ್ಕೆ ಆಗಮಿಸುವ ಭಕ್ತರಿಗೆ ಹೆಚ್ಚಿನ ಮೂಲ ಸೌಲಭ್ಯ ಕಲ್ಪಿಸುವುದಾಗಿ ಹೇಳಿದರು.
ಕೆಪಿಸಿಸಿ ಸದಸ್ಯ ಕೆ.ಆರ್. ಮೋಹನ್ ಕುಮಾರ್, ಯು.ಎನ್. ಪದ್ಮನಾಭರಾವ್, ಬಿ. ಹರ್ಷವರ್ಧನ, ಬ್ಲಾಕ್ ಅಧ್ಯಕ್ಷರಾದ ಕೆ.ಎಸ್. ಸುಬ್ಬಣ್ಣ, ಬಿ.ಎಸ್. ಮಹದೇವಪ್ಪ, ಕೆಪಿಸಿಸಿ ಸದಸ್ಯ ಅಕ್ಬರ್ ಅಲಿ, ಉಪಾಧ್ಯಕ್ಷ ದೊರೆಸ್ವಾಮಿ, ಸದಸ್ಯರಾದ ಅನಸೂಯ, ಡಿ.ಆರ್. ರಾಜು, ಚಂದ್ರಶೇಖರ್, ಪುಷ್ಟಕೇಶವ, ಮಾಜಿ ಅಧ್ಯಕ್ಷರಾದ ಎನ್.ಆರ್. ದೊರೆಸ್ವಾಮಿ, ಎನ್.ಶ್ರೀಧರ್, ಶ್ರೀನಿವಾಸ್ ಇದ್ದರು.
ಸಿದ್ದರಾಮಯ್ಯ ಕೈ ಬಲಪಡಿಸಿ
ಟಿ. ನರಸೀಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಾಯಕತ್ವ ಬಲಪಡಿಸಲು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕೆಂದು ಗರ್ಗೇಶ್ವರಿ ಜಿಪಂ ಸದಸ್ಯ ಕೆ. ಮಹದೇವ ಹೇಳಿದರು. ತಾಲೂಕಿನ ವರುಣ ವಿಧಾನಸಭಾ ಕ್ಷೇತ್ರದ ರಂಗಸಮುದ್ರ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆರ್. ಧ್ರುವನಾರಾಯಣ ಪರ ಮತಯಾಚಿಸಿ ಮಾತನಾಡಿ, ರೈತಪರ ಹೋರಾಟದ ಹಿನ್ನೆಲೆಯಿಂದ ರಾಜಕಾರಣವನ್ನು ಆರಂಭಿಸಿದ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗುತ್ತಿದ್ದಂತೆ ಬಡವರ ಧ್ವನಿಯಾಗಿ, ಬೆಂಬಲ ಬೆಲೆ ನೀಡುವ ಮೂಲಕ ರೈತರಿಗೆ ನೆರವಾಗಿರುವುದರಿಂದ ಮತದಾರರು ಕಾಂಗ್ರೆಸ್ ಬೆಂಬಲಿಸಬೇಕೆಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

