ಮೈಸೂರು

ಸಾಂಸ್ಕೃತಿಕ ನಗರಿಯಲ್ಲಿ ಭೀಮೋತ್ಸವ

Published On :

ಕ.ಪ್ರ. ವಾರ್ತೆ, ಮೈಸೂರು, ಏ. 14
ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ 123 ನೇ ಜನ್ಮದಿನಾಚರಣೆ ಅಂಗವಾಗಿ ವಿವಿಧ ಕಲಾತಂಡಗಳೊಂದಿಗೆ ಮೆರವಣಿಗೆಯು ಸೋಮವಾರ ವಿಜೃಂಭಣೆಯಿಂದ  ನಡೆಯಿತು.
ಅಶೋಕಪುರಂ ಆದಿಕರ್ನಾಟಕ ಮಹಾಸಂಘ ಹಾಗೂ ದಲಿತ ಯುವ ಸಂಘಟನೆಗಳ ಸಂಯುಕ್ತಾಶ್ರಯಲ್ಲಿ ಅಶೋಕಪುರಂ ಉದ್ಯಾನವನದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ವಿ.ಶ್ರೀನಿವಾಸಪ್ರಸಾದ್ ಅಂಬೇಡ್ಕರ್ ಪ್ರತಿಮೆಗೆ ಪುಷ್ಚಾರ್ಚನೆ ಮಾಡುವ ಮೂಲಕ ಉತ್ಸವಕ್ಕೆ ಚಾಲನೆ ನೀಡಿದರು.
ಶಾಸಕ ಎಂ.ಕೆ. ಸೋಮಶೇಖರ್, ಸಂಸದ ಎಚ್. ವಿಶ್ವನಾಥ್, ಮಾಜಿ ಮೇಯರ್ ಪುರುಷೋತ್ತಮ್, ಉಪಮೇಯರ್ ವಿ. ಶೈಲೇಂದ್ರ, ಮಾಜಿ ಉಪ ಮೇಯರ್ ಬಿ. ಸಿದ್ದರಾಜು, ಒಣಭೂಮಿ ಅಭಿವೃದ್ದಿ ಮಂಡಳಿ ಮಾಜಿ ಅಧ್ಯಕ್ಷ ಕೆ.ಆರ್ ಮೋಹನ್‌ಕುಮಾರ್, ಸಂಘದ ಅಧ್ಯಕ್ಷ ಪ್ರಭುಸ್ವಾಮಿ, ಕಾರ್ಯದರ್ಶಿ ಪಿ. ನಾಗರಾಜ್, ಯುವ ಮುಖಂಡ ಜೆ. ರವಿ ಮುಂತಾದವರು ಇದ್ದರು.  
ನಂತರ  ಅಂಬೇಡ್ಕರ್ ಸ್ತಬ್ಧಚಿತ್ರದೊಂದಿಗೆ ಅಲ್ಲಿಂದ ಹೊರಟ ಮೆರವಣಿಗೆಯಲ್ಲಿ ತಮಟೆ, ನಗಾರಿ, ಗಾರಡಿ ಗೊಂಬೆ, ಪೂಜಾ ಕುಣಿತ, ಡೊಳ್ಳು ಕುಣಿತ, ಕಂಸಾಳೆ ಮುಂತಾದ ಜನಪದ ಕಲಾತಂಡಗಳ ನೃತ್ಯಗಳು ಸಾರ್ವಜನಿಕರ ಗಮನ ಸೆಳೆಯಿತು. ಅಲ್ಲಿನ ಅಂಬೇಡ್ಕರ್ ಪ್ರತಿಮೆಗೆ ಮುಖಂಡರು ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.    

ಪ್ರತಾಪ್‌ಸಿಂಹ ಮಾಲಾರ್ಪಣೆ
ಮೈಸೂರು-ಕೊಡಗು ಬಿಜೆಪಿ ಅಭ್ಯರ್ಥಿ ಪ್ರತಾಪ್‌ಸಿಂಹ ಡಾ.ಬಿ.ಆರ್. ಅಂಬೇಡ್ಕರ್ ಜನ್ಮದಿನ ಅಂಗವಾಗಿ ಪುರಭವನದ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಮಾಜಿ ಸಚಿವ ರಾಮದಾಸ್, ನಗರ ಪಾಲಿಕೆ ಸದಸ್ಯ ಸ್ನೇಕ್ ಶ್ಯಾಂ, ಬಿಜೆಪಿ ಪ್ರಧಾನ ಕಾರ್ಯದರ್ಶಿ ಆರ್. ಸೋಮಸುಂದರ್ ಇತರರು ಇದ್ದರು.

ಸಂವಿಧಾನ ಶಿಲ್ಪಿಗೆ ಎಲ್ಲೆಡೆ ನಮನ...
ಮೈಸೂರು: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ 122 ನೇ ಜನ್ಮ ದಿನವನ್ನು ಜಿಲ್ಲಾಡಳಿತ ಹಾಗೂ ವಿವಿಧ ಸಂಘ ಸಂಸ್ಥೆಗಳು ಸೋಮವಾರ ಆಚರಿಸಿದವು.    
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ನಗರಾಭಿವೃದ್ಧಿ ಪ್ರಾಧಿಕಾರ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಪುರಭವನ ಆವರಣದ ಡಾ. ಬಿ.ಆರ್. ಅಂಬೇಡ್ಕರ್  ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಲಾಯಿತು.  
ಪ್ರಾದೇಶಿಕ ಆಯುಕ್ತೆ ಎಂ.ವಿ. ಜಯಂತಿ, ಜಿಲ್ಲಾಧಿಕಾರಿ ಸಿ. ಶಿಖಾ, ಪಾಲಿಕೆ ಆಯುಕ್ತ ಪಿ.ಜಿ ರಮೇಶ್, ಎಂಡಿಎ ಆಯುಕ್ತ ಎಸ್. ಪಾಲಯ್ಯ, ನಗರ ಪೊಲೀಸ್ ಆಯುಕ್ತ ಡಾ.ಎಂ.ಎ. ಸಲೀಂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಭಿನವ್ ಖರೆ,  ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಸರಸ್ವತಿ ಹಾಗೂ ಇತರೆ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು. ನಂತರ ಸಾರ್ವಜನಿಕರಿಗೆ ಸಿಹಿ ವಿತರಿಸಲಾಯಿತು.
ಸಚಿವರಿಂದ ಗೌರವ: ಪುರಭವನಕ್ಕೆ ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವ ವಿ. ಶ್ರೀನಿವಾಸಪ್ರಸಾದ್ ಹಾಗೂ ಲೋಕೋಪಯೋಗಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಪ್ರತ್ಯೇಕವಾಗಿ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿದರು.

ಬಿಜೆಪಿ ಎಸ್ಸಿ ಮೋರ್ಚಾ
ಬಿಜೆಪಿ ಎಸ್ಸಿ ಮೋರ್ಚಾ ವತಿಯಿಂದ ಪುರಭವನದ  ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು. ಸಮಿತಿ ಅಧ್ಯಕ್ಷ ಡಿ. ಮಹದೇವ್, ಮುಖಂಡರಾದ ಸೋಮಶೇಖರ ರಾಜು, ಶಿವಕುಮಾರ್, ಗೋವಿಂದರಾಜು, ಸುರೇಂದ್ರ, ಮಹೇಶ್, ಭಾಸ್ಕರ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.