'ಅಧಿಕಾರ ದುರುಪಯೋಗ'
ಮೈಸೂರು: ಮೈಸೂರಿನಲ್ಲಿ ಸರ್ಕಾರಿ ಆಡಳಿತ ಯಂತ್ರವನ್ನು ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ ಎಂದು ವಿಧಾನಪರಿಷತ್ ಸದಸ್ಯ ಗೋ. ಮಧುಸೂದನ್ ಆರೋಪಿಸಿದರು.ಮೈಸೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಸೋಲುವ ಭಯ ಕಾಡುತ್ತಿದೆ. ಹೀಗಾಗಿ ಬಿಜೆಪಿ ಅಭ್ಯರ್ಥಿ ಪ್ರತಾಪ್ಸಿಂಹ ಒಕ್ಕಲಿಗರಲ್ಲ ಎಂದು ಆರೋಪಿಸುತ್ತಿದ್ದಾರೆ. ಇದು ಕಾಂಗ್ರೆಸ್ನ ಹತಾಶ ಮನಸ್ಥಿತಿಯನ್ನು ತೋರುತ್ತದೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.
ಕುವೆಂಪುನಗರದ ವಿಶ್ವನಾಥ್ ಸಂಬಂಧಿಕರಾದ ಚಂದ್ರಕಾಂತ್ ಎಂಬುವರ ಮನೆಯಲ್ಲಿ 9 ಕೋಟಿ ರು. ಹಣವನ್ನು ಚಾಮುಂಡೇಶ್ವರಿ ಮತ್ತು ವರುಣ ವಿಧಾನಸಭಾ ಕ್ಷೇತ್ರದ ಮುಖಂಡರು ಮತ್ತು ಕಾರ್ಯಕರ್ತರಿಗೆ ಹಂಚಲಾಗಿದೆ. ಈ ವಿಚಾರವನ್ನು ಚುನಾವಣಾಧಿಕಾರಿಗಳಿಗೆ ತಿಳಿಸಿದ್ದೆ. ಸ್ಥಳಕ್ಕೆ ಆಗಮಿಸಿದ ಸೆಕ್ಟರ್ ಮ್ಯಾಜಿಸ್ಟ್ರೇಟ್ಗಳು ಮತ್ತು ಪೊಲೀಸರು, ಮನೆ ತಪಾಸಣೆ ಮಾಡಿದ ಬಳಿಕ ಏನು ಸಿಕ್ಕಿಲ್ಲ ಎಂದು ಉತ್ತರ ನೀಡಿದ್ದಾರೆ. ಆದರೆ, ಕಾರ್ಯಕರ್ತರ ಕೈನಲ್ಲಿ ನೋಟಿ ಕಂತೆಗಳಿತ್ತು ಎಂದು ಅವರು ಆರೋಪಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನಲ್ಲಿದ್ದಾಗಲೇ ಈ ಘಟನೆ ನಡೆದಿದೆ.
ಸೆಕ್ಟರ್ ಮ್ಯಾಜಿಸ್ಟ್ರೇಟ್ಗಳ ಜೀಪಿನಲ್ಲೇ ಹಣ ಸಾಗಿಸಲಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಣ ಹಂಚಲು ಇಲ್ಲಿಗೆ ಬಂದಿದ್ದಾರೆ. ಅವರ ಕುರ್ಚಿ ಅಳಿವು-ಉಳಿವು ಪ್ರಶ್ನೆ ಎದುರಾಗಿದೆ ಎಂದರು.
ಗೋಮ ಹೇಳಿಕೆಗೆ 'ಕೈ' ಖಂಡನೆ
ಮೈಸೂರು: ಚುನಾವಣೆಯಲ್ಲಿ ಗೆಲವು ಸಾಧಿಸಲು ಕಾಂಗ್ರೆಸ್ ನಾಯಕರು ಹಣ ಹಂಚುತ್ತಿದ್ದಾರೆ ಎಂದಿರುವ ಬಿಜೆಪಿ ಶಾಸಕ ಗೋ. ಮಧುಸೂದನ್ ಹೇಳಿಕೆಯನ್ನು ಕಾಂಗ್ರೆಸ್ ವಕ್ತಾರ ಎಚ್.ಎ. ವೆಂಕಟೇಶ್ ಖಂಡಿಸಿದ್ದಾರೆ. ಕಾಂಗ್ರೆಸ್ ಮತದಾರರಿಗೆ ಹಣ ಹಂಚುತ್ತಿದ್ದಾರೆ ಎಂಬ ವಿಷಯವನ್ನು ಚುನಾವಣೆ ಆಯೋಗದ ಗಮನಕ್ಕೆ ತಂದಿಲ್ಲ. ಬದಲಾಗಿ ಜನರ ಬಳಿ ಹೋಗಿ ಪಕ್ಷದ ಪರ ತಪ್ಪು ಅಭಿಪ್ರಾಯ ಮೂಡಿಸುತ್ತಿದ್ದಾರೆ. ಚುನಾವಣೆಯಲ್ಲಿ ಸೋಲು ಕಟ್ಟಿಟ್ಟ ಬುತ್ತಿ ಎಂದು ಗೊತ್ತಾದ ಮೇಲೆ ತಮ್ಮ ಬತ್ತಳಿಕೆಯಲ್ಲಿನ ಎಲ್ಲಾ ಸುಳ್ಳಿನ ಬಾಣಗಳನ್ನು ಪ್ರಯೋಗಿಸುತ್ತಿದ್ದಾರೆ. ಚುನಾವಣೆ ವ್ಯವಸ್ಥೆಯ ಬಗ್ಗೆ ನಂಬಿಕೆ ಹೋಗುವ ರೀತಿಯಲ್ಲಿ ಅವರು ಅಧಿಕಾರಿಗಳು ನಿಷ್ಕ್ರಿಯರಾಗಿದ್ದಾರೆ ಎಂಬ ಆರೋಪ ನಿರಾಧಾರ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

