ರೈತರ 'ಕೆ'ೈ ಹಿಡಿಯದ ಯುಪಿಎ
ಮೈಸೂರು: ಕೇಂದ್ರದ ಯುಪಿಎ ಸರ್ಕಾರ ರೈತರಿಗೆ ಸ್ಪಂದಿಸದೆ ನಿರ್ಲಕ್ಷ್ಯ ವಹಿಸಿದೆ ಎಂದು ಭಾರತೀಯ ರೈತ ಸಂಘಟನೆಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಸಿ. ಚಂಗಲರೆಡ್ಡಿ ಕಿಡಿ ಕಾರಿದರು.
2007 ರಲ್ಲಿ ಡಾ.ಎಂ.ಎಸ್. ಸ್ವಾಮಿನಾಥನ್ ಅವರು, ರೈತರ ಬೆಳೆಗಳಿಗೆ ಬೆಂಬಲ ಬೆಲೆ ನಿಗದಿ ಪಡಿಸಬೇಕೆಂದು ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ. ಈ ಸಂಬಂಧ 7 ವರ್ಷಗಳು ಕಳೆದರೂ ಸಹ ಯುಪಿಎ ಸರ್ಕಾರ ಬೆಂಬಲ ಬೆಲೆ ನಿಗದಿ ಪಡಿಸಿಲ್ಲ ಹಾಗೂ ರೈತರ ಹಿತಕ್ಕೆ ಸ್ಪಂದಿಸುತ್ತಿಲ್ಲ ಎಂದು ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.
ಐದು ವರ್ಷಕ್ಕಾಗಿ ಆಯ್ಕೆಯಾಗುವ ಜನಪ್ರತಿನಿಧಿಗಳು ವೇತನ, ಪಿಂಚಣಿ, ಅರೋಗ್ಯ ವಿಮೆ ಮುಂತಾದ ಸವಲತ್ತು ಪಡೆಯುತ್ತಾರೆ. ಶೇ. 70 ರಷ್ಟಿರುವ ರೈತರಿಗೆ ಕನಿಷ್ಠ ಭದ್ರತಾ ಕಾಯ್ದೆಯನ್ನು ಜಾರಿಗೆ ತರಬೇಕು ಹಾಗೂ ಕೇಂದ್ರದಲ್ಲಿ ಕೃಷಿಗೆ ಪ್ರತ್ಯೇಕ ಬಜೆಟ್ ಮಂಡಿಸಬೇಕು ಎಂದು ಅವರು ಆಗ್ರಹಿಸಿದರು.
ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಮಾತನಾಡಿ, ಉತ್ತರ ಪ್ರದೇಶದಲ್ಲಿ ಕಬ್ಬು ಬೆಳೆಗಾರರಿಗೆ ಬಾಕಿ ಕೊಡದಿರುವ ಬಗ್ಗೆ ಸೋನಿಯಾ ಗಾಂಧಿ ಭಾಷಣದಲ್ಲಿ ತರಾಟೆ ತೆಗೆದುಕೊಂಡಿದ್ದಾರೆ. ಆದರೆ ತಮ್ಮ ಸರ್ಕಾರವೇ ಇರುವ ಕರ್ನಾಟಕದಲ್ಲಿ 2,500 ಕೋಟಿ ರು, ಬಾಕಿ ಕಬ್ಬು ಬೆಳೆಗಾರರಿಗೆ ಬರಬೇಕಾಗಿದ್ದರೂ ಅವರು ಯಾಕೆ ಮೌನ ವಹಿಸಿದ್ದಾರೆ ಎಂದು ಪ್ರಶ್ನಿಸಿದರು.
ದಾಖಲೆ ಇಲ್ಲದ ರು. 8.55 ಲಕ್ಷ ವಶ
ಮೈಸೂರು: ಕಾರಿನಲ್ಲಿ ಸಾಗಿಸಲಾಗುತ್ತಿದ್ದ ದಾಖಲೆ ಇಲ್ಲದ ರು.8.55 ಲಕ್ಷ ಚುನಾವಣಾಧಿಕಾರಿ ತಂಡ ವಶಪಡಿಸಿಕೊಂಡಿರುವ ಘಟನೆ ಎಚ್.ಡಿ. ಕೋಟೆ ತಾಲೂಕಿನ ಬಾವಲಿ ಚೆಕ್ಸ್ ಪೋಸ್ಟ್ನಲ್ಲಿ ನಡೆದಿದೆ. ಮಾನಂದವಾಡಿಯಿಂದ ಮೈಸೂರು ಕಡೆಗೆ ಬರುತ್ತಿದ್ದ ಮಾರುತಿ ವ್ಯಾಗನಾರ್ ಕಾರಿನಲ್ಲಿ ಈ ಹಣ ಪತ್ತೆಯಾಗಿದ್ದು, ಆ ಹಣಕ್ಕೆ ಯಾವುದೇ ದಾಖಲೆ ಇರಲಿಲ್ಲ. ಹೀಗಾಗಿ ಚುನಾವಣಾಧಿಕಾರಿಗಳು ಹಣ ವಶಪಡಿಸಿಕೊಂಡು, ಬೀಚನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಪರವಾಗಿ ಜಾತಿ ಆಧಾರದ ಮೇಲೆ ಕರಪತ್ರಗಳನ್ನು ಮುದ್ರಿಸುರವ ಬಗ್ಗೆ ಹಾಗೂ ಜೆಡಿಎಸ್ ಪರ ಮುದ್ರಣಕಾರರ ಹೆಸರು ಮತ್ತು ವಿಳಾಸ ನಮೂದಿಸದ ಕರಪತ್ರಗಳನ್ನು ಹಂಚುತ್ತಿದ್ದ ಬಗ್ಗೆ ಪ್ರಕರಣಗಳು ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

