ಮೈಸೂರು

ಮತಗಟ್ಟೆಗಳ ಸುತ್ತ ನಿರ್ಬಂಧ

Published On :

ಮೈಸೂರು: ಏ.17 ರಂದು ಚುನಾವಣೆ ನಡೆಯಲಿರುವ ಮೈಸೂರು ಲೋಕಸಭಾ
ಕ್ಷೇತ್ರ ವ್ಯಾಪ್ತಿಯಲ್ಲಿರುವ ಎಲ್ಲ ಮತಗಟ್ಟೆಗಳ ಸುತ್ತಲೂ 200 ಮೀಟರ್ ಆವರಣವನ್ನು ಆವರಣವನ್ನು ನಿರ್ಬಂಧಿತ ಪ್ರದೇಶವೆಂದು ಚುನಾವಣಾಧಿಕಾರಿಯಾದ ಜಿಲ್ಲಾಧಿಕಾರಿ ಸಿ. ಶಿಖಾ ಆದೇಶಿಸಿದ್ದಾರೆ.
ಮತದಾನವು ಬೆಳಗ್ಗೆ 7 ರಿಂದ ಸಂಜೆ 6 ರವರೆಗೆ ನಡೆಯಲಿದೆ. ಈ ಹಿನ್ನೆಲೆಯ್ಲಿ ಏ.17ರ ಬೆಳಗ್ಗೆ 6 ರಿಂದ ಸಂಜೆ 6 ರವರೆಗೆ ಅಥವಾ ಮತಗಟ್ಟೆಯಲ್ಲಿ ಮತದಾನವು ಮುಕ್ತಾಯವಾಗಿ ಮತಗಟ್ಟೆ ಸಿಬ್ಬಂದಿ ತೆರಳುವವರೆಗೆ ಮತಗಟ್ಟೆ 200 ಮೀಟರ್ ವ್ಯಾಪ್ತಿ ಪ್ರದೇಶವನ್ನು ನಿರ್ಬಂಧಿಸಲಾಗಿದೆ.
ಏನೇನು ನಿಷೇಧ: ಮೆರವಣಿಗೆ ಅಥವಾ 5 ಜನರಿಗಿಂತ ಹೆಚ್ಚು ಜನ ಸೇರುವುದನ್ನು ನಿಷೇಧಿಸಲಾಗಿದೆ. ಯಾವುದೇ ರೀತಿಯ ಮಾರಕಾಸ್ತ್ರ, ಸ್ಫೋಟಕ ವಸ್ತುಗಳನ್ನು ಒಯ್ಯುವುದನ್ನು ನಿಷೇಧಿಸಲಾಗಿದೆ. ಪ್ರತಿಕೃತಿ ಪ್ರದರ್ಶನ, ದಹನ ಮಾಡುವುದನ್ನು ಮತ್ತು ಬಹಿರಂಗ ಘೋಷಣೆ ಇತ್ಯಾದಿಗಳನ್ನು ನಿಷೇಧಿಸಲಾಗಿದೆ.
ಸಾರ್ವಜನಿಕರು ಯಾವುದೇ ವ್ಯಕ್ತಿ ಪ್ರಚೋದನಾತ್ಮಕ ಹಾಗೂ ಉದ್ರೇಕಕಾರಿ ಹಾಡುಗಳನ್ನು, ಕೂಗಾಟ ಮಾಡುವುದು, ವ್ಯಕ್ತಿಗಳ ತೇಜೋವಧೆ ಮಾಡುವಂತಹ ಚಿತ್ರ, ಚಿಹ್ನೆ, ಪ್ರತಿಕೃತಿ ಪ್ರದರ್ಶಿಸುವುದು, ಸಾರ್ವಜನಿಕರ ಗಾಂಭೀರ್ಯ ಮತ್ತು ನೈತಿಕತೆಗೆ ಭಂಗ ತರುವಂತಹ ಕೃತ್ಯಗಳಲ್ಲಿ ತೊಡಗುವುದನ್ನು ನಿಷೇಧಿಸಲಾಗಿದೆ.
ಈ ಆದೇಶವು ಚುನಾವಣಾ ಕರ್ತವ್ಯ ನಿರತ ಮತಗಟ್ಟೆ ಅಧಿಕಾರಿ, ಸಿಬ್ಬಂದಿ, ಪೊಲೀಸ್ ಅಧಿಕಾರಿಗಳು, ಚುನಾವಣಾ ಏಜೆಂಟ್ಸ್‌ಗಳಿಗೆ ಮತ್ತು ಒಬ್ಬೊಬ್ಬರಾಗಿ ಮತಗಟ್ಟೆಗಳಿಗೆ ತೆರಳಿ ಮತದಾನ ಮಾಡುವ ಮತದಾರರಿಗೆ ಅನ್ವಯಿಸುವುದಿಲ್ಲ. ಅಂತ್ಯಕ್ರಿಯೆ ಮೆರವಣಿಗೆ ಮತ್ತು ಇನ್ನಿತರ ಪ್ರಾಧಿಕಾರದಿಂದ ಅನುಮತಿ ಪಡೆದ ಪ್ರಕರಣಗಳಿಗೆ ಅನ್ವಯಿಸುವುದಿಲ್ಲ. ಪೊಲೀಸ್ ಆಯುಕ್ತರು, ಎಸ್ಪಿ ಹಾಗೂ ತಾಲೂಕು ದಂಡಾಧಿಕಾರಿಗಳು ಕಟ್ಟುನಿಟ್ಟಾಗಿ ಈ ಆದೇಶವನ್ನು ಜಾರಿಗೊಳಿಸಿ, ಆದೇಶ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸಿ. ಶಿಖಾ ಸೂಚಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.