ಮೈಸೂರು

ಮಸ್ಟರಿಂಗ್‌ಗಳಲ್ಲಿ ಮತಯಂತ್ರ ಹಸ್ತಾಂತರಮೈಸೂರು: ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆ ಕರ್ತವ್ಯಕ್ಕಾಗಿ ನಿಯೋಜಿಸಲಾಗಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಮತಯಂತ್ರ ಸೇರಿದಂತೆ ಅಗತ್ಯ ಚುನಾವಣಾ ಸಾಮಗ್ರಿಗಳನ್ನು

Published On :

ಮೈಸೂರು: ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆ ಕರ್ತವ್ಯಕ್ಕಾಗಿ ನಿಯೋಜಿಸಲಾಗಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಮತಯಂತ್ರ ಸೇರಿದಂತೆ ಅಗತ್ಯ ಚುನಾವಣಾ ಸಾಮಗ್ರಿಗಳನ್ನು ನೀಡಿ ಸಂಬಂಧಪಟ್ಟ ಮತಗಟ್ಟೆಗಳಿಗೆ ಕಳುಹಿಸುವ ಕಾರ್ಯವು ಮೈಸೂರಿನಲ್ಲಿ ನಾಲ್ಕು ಕಡೆ ನಡೆಯಿತು.
ನಗರದ 4 ಪ್ರತ್ಯೇಕ ಸ್ಥಳಗಳಲ್ಲಿ ಮಸ್ಟರಿಂಗ್ ಕೇಂದ್ರಗಳನ್ನು ಸ್ಥಾಪಿಸಿ, ಆ ಕೇಂದ್ರಗಳಿಂದ ವಿಧಾನಸಭಾ ಕ್ಷೇತ್ರವಾರು ಮತಗಟ್ಟೆಗಳಿಗೆ ಬಿಗಿ ಭದ್ರತೆಯಲ್ಲಿ ವಿದ್ಯುನ್ಮಾನ ಮತಯಂತ್ರವನ್ನು ಸಿಬ್ಬಂದಿ ತೆಗೆದುಕೊಂಡು ಹೋದರು. ನಗರದ ಪೀಪಲ್ಸ್ ಪಾರ್ಕ್ ಆವರಣದಲ್ಲಿರುವ ಸರ್ಕಾರಿ ಪಿಯು ಕಾಲೇಜಿನಲ್ಲಿ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ, ಸರಸ್ವತಿಪುರಂನ ಜೆಎಸ್‌ಎಸ್ ಮಹಿಳಾ ಕಾಲೇಜಿನಲ್ಲಿ ಕೃಷ್ಣರಾಜ, ಮಹಾರಾಜ ಜೂನಿಯರ್ ಕಾಲೇಜಿನಲ್ಲಿ ಚಾಮರಾಜ ಹಾಗೂ ಬೇಡನ್ ಪೋವೆಲ್ ಪಬ್ಲಿಕ್ ಶಾಲೆಯಲ್ಲಿ ನರಸಿಂಹರಾಜ ಕ್ಷೇತ್ರಕ್ಕೆ ನಿಯೋಜನೆಯಾಗಿರುವ ಮತಗಟ್ಟೆ ಅಧಿಕಾರಿ ಮತ್ತು ಸಿಬ್ಬಂದಿಗೆ ಮತಯಂತ್ರಗಳನ್ನು ಹಸ್ತಾಂತರಿಸಲಾಯಿತು. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಒಟ್ಟು 308 ಮತಗಟ್ಟೆಗಳಿದ್ದು, ಉಪ ವಿಭಾಗಾಧಿಕಾರಿ ಬಸವರಾಜು ನೇತೃತ್ವದಲ್ಲಿ ಚುನಾವಣಾ ಸಿಬ್ಬಂದಿಗೆ ಮತಯಂತ್ರ ಹಾಗೂ ಮತದಾನ ಪ್ರಕ್ರಿಯೆಗೆ ಅಗತ್ಯ ಸಾಮಗ್ರಿಗಳನ್ನು ವಿತರಿಸಲಾಯಿತು. ಚಾಮರಾಜ ಕ್ಷೇತ್ರದಲ್ಲಿ 213 ಮತ ಗಟ್ಟೆಗಳಿದ್ದು, ಎಆರ್‌ಒ ಆಶಾ ನೇತೃತ್ವದಲ್ಲಿ ಮತ ಯಂತ್ರ ವಿತರಿಸಲಾಯಿತು. ನರಸಿಂಹರಾಜ ಕ್ಷೇತ್ರದಲ್ಲಿ 220 ಮತಗಟ್ಟೆಗಳಿದ್ದು, ಎಆರ್‌ಒ ಶಶಿಕುಮಾರ್ ಅವರ ನೇತೃತ್ವದಲ್ಲಿ ಹಾಗೂ ಕೃಷ್ಣರಾಜ ಕ್ಷೇತ್ರದಲ್ಲಿ 223 ಮತಗಟ್ಟೆಗಳಿದ್ದು, ಪಾಲಿಕೆ ಆಯುಕ್ತ ರಮೇಶ್ ನೇತೃತ್ವದಲ್ಲಿ  ಮತಯಂತ್ರ ವಿತರಿಸಲಾಯಿತು.

'ಕಾಂಗ್ರೆಸ್- ಬಿಜೆಪಿ ಒಳ ಒಪ್ಪಂದ'
ಮೈಸೂರು: ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್- ಬಿಜೆಪಿ ಒಳಒಪ್ಪಂದ ಮಾಡಿಕೊಂಡಿವೆ ಎಂದು ನಗರ ಜೆಡಿಎಸ್ ಕಾನೂನು ಘಟಕ ಅಧ್ಯಕ್ಷ ಎನ್.ಆರ್. ರವಿಚಂದ್ರೇಗೌಡ ಆರೋಪಿಸಿದ್ದಾರೆ. ಕಾಂಗ್ರೆಸ್ ಅಲ್ಪಸಂಖ್ಯಾತರನ್ನು ದಿಕ್ಕು ತಪ್ಪಿಸುತ್ತಿದ್ದು, ಜೆಡಿಎಸ್ ವಿರುದ್ಧ ಗೆಲ್ಲಲೇ ಬೇಕೆಂಬ ದುರುದ್ದೇಶದಿಂದ ಬಿಜೆಪಿಯೊಂದಿಗೆ ಒಪ್ಪಂದ ಮಾಡಿಕೊಂಡಿದ್ದಾರೆ ಹೀಗಾಗಿ ಜೆಡಿಎಸ್ ವಿರುದ್ಧ ಮಾತನಾಡುವ ನೈತಿಕ ಹಕ್ಕು ಕಾಂಗ್ರೆಸ್‌ಗೆ  ಇಲ್ಲ ಎಂದು ರವಿಚಂದ್ರೇಗೌಡ  ಕಿಡಿಕಾರಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.