ಮೈಸೂರು

ಅಂತರ್ಜಾತಿ ಒಪ್ಪದ ಜನ: ಗೊರುಪ ವಿಷಾದ

Published On :

ಕ.ಪ್ರ.ವಾರ್ತೆ ಎಚ್.ಡಿ.ಕೋಟೆ  ಏ. 20
12ನೇ ಶತಮಾನದಲ್ಲಿ ಬದುಕಿದ್ದ ಬಸವಣ್ಣ ಅಂತರ್ಜಾತಿ ವಿವಾಹ ಮಾಡಿಸಿದರು. ಆದರೆ, ಇಂದು ಜನ ಅಂತರ್ಜಾತಿ ಒಪ್ಪದೇ ತಾರತಮ್ಯ ಮಾಡುತ್ತಿದ್ದಾರೆ ಎಂದು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಗೊ.ರು. ಪರಮೇಶ್ವರಪ್ಪ ವಿಷಾದ ವ್ಯಕ್ತಪಡಿಸಿದರು.
ತಾಲೂಕಿನ ಸರಗೂರು ಹೋಬಳಿಯ ಮುಳ್ಳೂರು ಗ್ರಾಮದಲ್ಲಿ ಶನಿವಾರ ಶಿವರಾತ್ರೀಶ್ವರ ಧಾರ್ಮಿಕ ದತ್ತಿ ಹಾಗೂ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ತಾಲೂಕು ಘಟಕದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಇಷ್ಟಲಿಂಗ ಧಾರಣೆ ಹಾಗೂ ಶರಣ ಸಾಹಿತ್ಯ ಚಿಂತನಾ ಸಮಾವೇಶದಲ್ಲಿ ಅವರು ಮಾತನಾಡಿದರು.
ಜಾತಿಯತೆಯನ್ನು ಹೋಗಲಾಡಿಸಲು ಬಸವಣ್ಣ ಕೈಗೊಂಡ ಕಾರ್ಯ ಸ್ಮರಣೀಯ. ಬಸವಣ್ಣ ಸ್ಥಾಪಿಸಿದ ಅನುಭವ ಮಂಟಪದಲ್ಲಿ ಎಲ್ಲಾ ಜಾತಿಯವರೂ ಬಂದು ತಮ್ಮ ವಾದ ಅನುಭವವನ್ನು ಹಂಚಿಕೊಳ್ಳುತ್ತಿದ್ದರು. ಅದಕ್ಕಾಗಿಯೇ ಅನುಭವ ಮಂಟಪವನ್ನು ವಿಶ್ಲೇಷಕರು ಮೊದಲ ಪ್ರಜಾಪ್ರಭುತ್ವ ಎನ್ನುತ್ತಾರೆ ಎಂದ ಅವರು, ಅಂದಿನ ದಿನಗಳಲ್ಲಿ ತಾವು ದುಡಿದು ತಮಗೆ ಅವಶ್ಯವಿದ್ದಷ್ಟನ್ನು ತಾವು ಇಟ್ಟುಕೊಂಡು ಉಳಿದ ಬಹುಪಾಲು ಹಣವನ್ನು ದಾಸೋಹದ ರೂಪದಲ್ಲಿ ನೀಡುತ್ತಿದ್ದರು. ಆದರೆ ಇಂದಿನ ದಿನಗಳಲ್ಲಿ ದಾಸೋಹಕ್ಕೆ ನೀಡಿದ ಹಣವನ್ನು ನುಂಗುವ ಮಂದಿ ಹೆಚ್ಚಾಗಿದ್ದಾರೆ ಎಂದು ತಿಳಿಸಿದರು.
ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಂ. ಚಂದ್ರಶೇಖರ್ ಮಾತನಾಡಿ, ವೀರಶೈವ ಎಂಬುದು ಒಂದು ಜಾತಿ ಎಂದು ಕೆಲವರು ವಾದಿಸುತ್ತಾರೆ. ಆದರೆ ಮತ್ತೆ ಕೆಲವರು ಧರ್ಮ ಎನ್ನುತ್ತಾರೆ. ವೀರಶೈವ ಎಂದರೆ ಜಾತಿಯೋ ಧಮವೋ ಇನ್ನೂ ನಮಗೆ ನಿಖರವಾಗಿ ತಿಳಿಯದಾಗಿದೆ ಎಂದರು. ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಸಿ.ಎಸ್. ಕುಮಾರಸ್ವಾಮಿ ಅಧ್ಯಕ್ಷತೆ ವಹಿಸಿದ್ದರು. ಬಿಡಿಗಲು ಪಡವಲು ವಿರಕ್ತ ಮಠಾಧ್ಯಕ್ಷರಾದ ಶ್ರೀ ಮಹದೇವ ಸ್ವಾಮೀಜಿ, ಮಾದಾಪುರ ಗ್ರಾಮದ ಚಂದ್ರಮೌಳೇಶ್ವರ ಪಟ್ಟದ ಮಠದ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ, ದಂಡೀಕೆರೆ ಮಠದ ಶ್ರೀ ಬಸವಲಿಂಗ ಸ್ವಾಮೀಜಿ, ಮುಳ್ಳೂರು ಗ್ರಾಮದ ಸೋಮಸುಂದರ್, ಶಿವರಾತ್ರೀಶ್ವರ ಧಾರ್ಮಿಕ ದತ್ತಿ ವಿಭಾಗ ಸೋಮಶೇಖರ್, ಮೈಸೂರು ಉತ್ತರ ರೋಟರಿ ಅಧ್ಯಕ್ಷ ಶಿವಲಿಂಗಸ್ವಾಮಿ, ವೀರಶೈವ ಯುವ ಅಧ್ಯಕ್ಷ ಮಹದೇವಸ್ವಾಮಿ, ಹಂಚೀಪುರ ಸಿ.ಗುರುಸ್ವಾಮಿ, ಶರಣ ಸಾಹಿತ್ಯ ಪರಿಷತ್ ತಾಲೂಕು ಉಪಾಧ್ಯಕ್ಷ ಗಿರೀಶ್‌ಮೂರ್ತಿ, ಎಂ. ಪಾರ್ವತಪ್ಪ, ಮುಳ್ಳೂರು ಶಿವಕುಮಾರ್, ಮಹದೇವಪ್ಪ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.