ಮೈಸೂರು

ಜವಾಬ್ದಾರಿ ಅರಿತು ಕಾರ್ಯ ನಿರ್ವಹಿಸಿ

Published On :

ಕ.ಪ್ರ.ವಾರ್ತೆ ಮೈಸೂರು ಏ. 20
ನೋಟರಿಗಳು ತಮ್ಮ ಜವಾಬ್ದಾರಿ ಅರಿತು ವೃತ್ತಿಯಲ್ಲಿ ಯಾವುದೇ ಲೋಪ ಆಗದಂತೆ ಎಚ್ಚರದಿಂದ ಕಾರ್ಯ ನಿರ್ವಹಿಸಬೇಕು ಎಂದು 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಎನ್. ರುದ್ರಮುನಿ ಸಲಹೆ ನೀಡಿದರು.
ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ನೋಟರಿಗಳ ಸಂಘವು ನಗರದ ನ್ಯಾಯಾಲಯ ಆವರಣದಲ್ಲಿರುವ ವಕೀಲರ ಸಂಘದಲ್ಲಿ ಭಾನುವಾರ ಆಯೋಜಿಸಿದ್ದ ನೋಟರಿಗಳ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಯಾವುದೇ ಅರ್ಜಿ ಸಲ್ಲಿಸಬೇಕಿದ್ದರೂ ನೋಟರಿಗಳ ಸಹಿ ಅಗತ್ಯ. ನ್ಯಾಯಾಲಯಗಳಿಗೆ ದಾಖಲಾತಿಗಳನ್ನು ಹಾಜರುಪಡಿಸುವಾಗ ನೋಟರಿಗಳ ಸಹಿ ಮಹತ್ವದ ಪಾತ್ರ ವಹಿಸುತ್ತದೆ. ಈ ಹಿಂದೆ ನೋಟರಿಗಳ ಸಂಖ್ಯೆ ತೀರಾ ಕಡಿಮೆ ಇತ್ತು. ಆದರೆ, ಪ್ರಸ್ತುತ ನೋಟರಿಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯಲ್ಲಿ ಮಾತ್ರ 126 ಮಂದಿ ನೋಟರಿಗಳು ಇದ್ದಾರೆ ಎಂದು ಹೇಳಿದರು.
ನ್ಯಾಯಾಧೀಶರ ಹುದ್ದೆಗೆ ಕಾನೂನು ಪದವಿ, ಸರ್ಕಾರಿ ವಕೀಲರ ಹುದ್ದೆಗೆ ಕನಿಷ್ಠ 4 ವರ್ಷಗಳ ಅನುಭವ, ಜಿಲ್ಲಾ ನ್ಯಾಯಾಧೀಶ ಹುದ್ದೆಗೆ 7 ವರ್ಷ ಅನುಭವ ಇರಬೇಕು ಎಂದು ಸರ್ಕಾರವು ಮಾನದಂಡ ನಿಗದಿಪಡಿಸಿದೆ. ಆದರೆ, ನೋಟರಿಗಳ ನೇಮಕಕ್ಕೆ 10 ವರ್ಷಗಳ ವಕೀಲ ವೃತ್ತಿಯ ಅನುಭವವನ್ನು ಸರ್ಕಾರವು ನಿಗದಿಪಡಿಪಡಿದೆ ಎಂದು ತಿಳಿಸಿದರು.
ಕರ್ನಾಟಕ ರಾಜ್ಯ ನೋಟರಿಗಳ ಸಂಘದ ಮಾಜಿ ಅಧ್ಯಕ್ಷ ರೇಣುಕಾಪ್ರಸಾದ್ ಮಾತನಾಡಿ, ಸಮಾಜಕ್ಕೆ ನೋಟರಿಗಳ ಅಗತ್ಯತೆ ಹೆಚ್ಚಾಗಿದ್ದು, ನೋಟರಿಗಳು ತಮ್ಮ ವೃತ್ತಿ ಗೌರವಕ್ಕೆ ಚ್ಯುತಿ ಬಾರದಂತೆ ಎಚ್ಚರ ವಹಿಸಬೇಕು ಎಂದು ಕಿವಿಮಾತು ಹೇಳಿದರು.
ನೋಟರಿ ಕಾಯ್ದೆ, ಅಗ್ರಿಮೆಂಟ್ಸ್, ವಕೀಲರ ಶಕ್ತಿ, ವಿಲ್ ಮತ್ತು ಅಫಿಡವಿಟ್ಸ್ ಕುರಿತು ಜೆಎಸ್‌ಎಸ್ ಕಾನೂನು ಕಾಲೇಜು ಪ್ರಾಂಶುಪಾಲ ಕೆ.ಎಸ್. ಸುರೇಶ್, ಸಹಾಯಕ ಪ್ರಾಧ್ಯಾಪಕರಾದ ಎ.ಟಿ. ಜಗದೀಶ್, ಪಿ. ಶಿವಾನಂದ ಭಾರತಿ ಅವರು ಉಪನ್ಯಾಸ ನೀಡಿದರು.
ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ನೋಟರಿಗಳ ಸಂಘದ ಅಧ್ಯಕ್ಷ ಎಸ್.ವಿ. ಸಂಗಮೇಶ್ವರನ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಎಂ.ಇ. ಸೋಮಣ್ಣ, ಕೋಶಾಧ್ಯಕ್ಷ ಎನ್.ಎಸ್. ಮಹದೇವಸ್ವಾಮಿ, ಮೈಸೂರು ವಕೀಲರ ಸಂಘದ ಅಧ್ಯಕ್ಷ ಸಿ.ಬಸವರಾಜು, ರಾಜ್ಯ ನೋಟರಿಗಳ ಸಂಘದ ಪ್ರಧಾನ ಕಾರ್ಯದರ್ಶಿ ಎಸ್. ಸುರೇಶ್‌ಬಾಬು, ಸಹ ಕಾರ್ಯದರ್ಶಿಪಿ. ರಮೇಶ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.