ತೇಜಸ್ವಿ ಅವಲೋಕನ 26, 27 ರಂದು
ಕ.ಪ್ರ.ವಾರ್ತೆ ್ಣ ಮೈಸೂರು ್ಣ ಏ. 23
ಅಭಿಯಂತರರು ಸಂಸ್ಥೆಯು ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ ಸಹಯೋಗದೊಂದಿಗೆ ಏ.26 ಮತ್ತು 27 ರಂದು ಮಾನಸಗಂಗೋತ್ರಿ ಸೆನೆಟ್ ಭವನದಲ್ಲಿ ಸಾಂಸ್ಕೃತಿಕ ಲೋಕದಲ್ಲಿ 'ತೇಜಸ್ವಿ ಒಂದು ಅವಲೋಕನ ಮತ್ತು ಮಾಯಾಲೋಕ' ನಾಟಕ ಪ್ರಯೋಗ ಕಾರ್ಯಕ್ರಮ ಆಯೋಜಿಸಿದೆ.
ಏ.26ರ ಬೆಳಗ್ಗೆ 10.30ಕ್ಕೆ ಪೂರ್ಣಚಂದ್ರ ತೇಜಸ್ವಿ ಅವರ 80ಕ್ಕೂ ಹೆಚ್ಚು ಛಾಯಾಚಿತ್ರಗಳ ಪ್ರದರ್ಶನವನ್ನು ಪ್ರಕಾಶಕ ಪ್ರೊ.ಬಿ.ಎನ್. ಶ್ರೀರಾಮ್ ಉದ್ಘಾಟಿಸುವರು. ಸಂಜೆ 6ಕ್ಕೆ ಸಮಾರಂಭವನ್ನು ಸಾಹಿತಿ ಡಾ.ಕೆ. ಮರುಳಸಿದ್ದಪ್ಪ ಉದ್ಘಾಟಿಸುವರು. ರಾಜ್ಯ ಮುಕ್ತ ವಿವಿ ಕುಲಪತಿ ಪ್ರೊ.ಎಂ.ಜಿ. ಕೃಷ್ಣನ್, ರಾಜೇಶ್ವರಿ ತೇಜಸ್ವಿ, ರಂಗ ನಿರ್ದೇಶಕ ಸಿ. ಬಸವಲಿಂಗಯ್ಯ ಅತಿಥಿಗಳಾಗುವರು ಎಂದು ಅಭಿಯಂತರರು ಅಧ್ಯಕ್ಷ ಎಚ್.ಎಸ್. ಸುರೇಶ್ಬಾಬು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಏ.27ರ ಬೆಳಗ್ಗೆ 10.30ಕ್ಕೆ ಸಾಂಸ್ಕೃತಿಕ ಲೋಕದಲ್ಲಿ ತೇಜಸ್ವಿ ಕುರಿತ ರಾಜ್ಯ ಮಟ್ಟದ ವಿಚಾರ ಸಂಕಿರಣವನ್ನು ವಿಮರ್ಶಕ ಪ್ರೊ. ಜಿ.ಎಚ್. ನಾಯಕ ಉದ್ಘಾಟಿಸುವರು. ಮೈಸೂರು ವಿವಿ ಪ್ರಸಾರಾಂಗ ನಿರ್ದೇಶಕ ಪ್ರೊ. ಸಿ.ನಾಗಣ್ಣ, ಕಸಾಪ ಜಿಲ್ಲಾಧ್ಯಕ್ಷ ಎಂ.ಚಂದ್ರಶೇಖರ್, ಪತ್ರಿಕೋದ್ಯಮಿ ರಾಜಶೇಖರ ಕೋಟಿ ಅತಿಥಿಗಳಾಗುವರು.
ನಂತರ ನಡೆಯುವ ಗೋಷ್ಠಿಯಲ್ಲಿ ತೇಜಸ್ವಿ ಮೀಮಾಂಸೆಗಳ ಬಗ್ಗೆ ಡಾ. ನಟರಾಜ್ಬೂದಾಳ್, ವ್ಯಕ್ತಿ ವಿಶಿಷ್ಟ ಸಿದ್ದಾಂತದ ಕಥನಗಳ ಬಗ್ಗೆ ಡಾ.ಎಂ.ಎನ್. ಆಶಾದೇವಿ, ಸಾಂಸ್ಕೃತಿಕ ಸಂದರ್ಭ- ತೇಜಸ್ವಿ ಅಭಿವ್ಯಕ್ತಿ ಬಗ್ಗೆ ಡಾ.ಕೆ.ಸಿ. ಶಿವಾರೆಡ್ಡಿ, ಮಾಯಾಲೋಕದ ಕೋಲಾಜ್ ಕಥನಗಳು ಬಗ್ಗೆ ಡಾ.ಕವಿತಾ ರೈ ಮಾತನಾಡುವರು. ಕೆ.ಟಿ. ಶಿವಪ್ರಸಾದ್ ಮತ್ತು ಡಾ. ಚಂದ್ರಶೇಖರ ನಂಗಲಿ ಗೋಷ್ಠಿಯ ಅಧ್ಯಕ್ಷತೆ ವಹಿಸುವರು ಎಂದರು.
ಏ.27ರ ಸಂಜೆ 6ಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ಕೆ.ಎ. ದಯಾನಂದ ಸಮಾರೋಪ ಭಾಷಣ ಮಾಡುವರು.ಮೈಸೂರು ವಿವಿ ಕುಲಪತಿ ಪ್ರೊ.ಕೆ.ಎಸ್. ರಂಗಪ್ಪ, ಅತಿಥಿಗಳಾಗುವರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

