ಹಿಂದೂ ಧರ್ಮ ಗ್ರಂಥ ರಚನೆ ಆಗಬೇಕು: ಕೃಷ್ಣ
ಕ.ಪ್ರ.ವಾರ್ತೆ ್ಣ ಮೈಸೂರು ್ಣ ಏ. 24
ಅಧಿಕೃತವಾಗಿ ಹಿಂದೂ ಧರ್ಮ ಗ್ರಂಥ ರಚನೆ ಆಗಬೇಕಿದೆ ಎಂದು ವಿಧಾನಸಭೆಯ ಮಾಜಿ ಸ್ಪೀಕರ್ ಕೆ.ಆರ್. ಪೇಟೆ ಕೃಷ್ಣ ಹೇಳಿದರು.
ಮೈಸೂರಿನ ವಿಶ್ವವಿದ್ಯಾಲಯ ಸಂಜೆ ಕಾಲೇಜು ವತಿಯಿಂದ ಮಹಾರಾಜ ಕಾಲೇಜು ಜೂನಿಯರ್ ಬಿಎ ಹಾಲ್ನಲ್ಲಿ ಗುರುವಾರ ನಡೆದ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಜನ್ಮದಿನಾಚರಣೆಯಲ್ಲಿ ಡಾ.ಬಿ.ಪಿ. ಮಹೇಶ್ ಚಂದ್ರಗುರು ಮತ್ತು ಡಾ.ಸಿ.ಡಿ. ಪರಶುರಾಮ ಸಂಪಾದಿಸಿರುವ ಬಹುಜನ ಬಂಧು ಡಾ.ಬಿ.ಆರ್. ಅಂಬೇಡ್ಕರ್ ಕೃತಿಯನ್ನು ಅವರು ಬಿಡುಗಡೆಗೊಳಿಸಿ ಮಾತನಾಡಿದರು.
ಕ್ರಿಶ್ಚಿಯನ್, ಇಸ್ಲಾಂ ಸೇರಿದಂತೆ ವಿವಿಧ ಧರ್ಮಗಳು ಅಧಿಕೃತವಾದ ಧರ್ಮ ಗ್ರಂಥ ಹೊಂದಿವೆ. ಆದರೆ, ಹಿಂದೂ ಧರ್ಮ ಗ್ರಂಥ ಯಾವುದು ಎಂಬುದರ ಬಗ್ಗೆ ಸಾಕಷ್ಟು ಗೊಂದಲವಿದೆ. ಹೀಗಾಗಿ ಹಿಂದೂ ಧರ್ಮಕ್ಕಾಗಿ ಅಧಿಕೃತವಾದ ಗ್ರಂಥವೊಂದು ರಚನೆ ಆಗಬೇಕಿದೆ ಎಂದು ತಿಳಿಸಿದರು.
ದೇಶದಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ. ಸ್ವಚ್ಛ ರಾಜಕಾರಣ ನಡೆಯುತ್ತಿಲ್ಲ. ರಾಜಕಾರಣಿಗಳು, ಅಧಿಕಾರಿಗಳು ಹೀಗೆ ಯಾರಿಗೂ ಜವಾಬ್ದಾರಿ ಇಲ್ಲ. ಕೆಲವರು ಮಾತ್ರ ಜವಾಬ್ದಾರಿಯಿಂದ ಕೆಲಸ ಮಾಡುತ್ತಿದ್ದಾರೆ. ವಿದ್ಯಾವಂತರಲ್ಲಿ ಜಾತಿ ಜಾಸ್ತಿ ಆಗಿದೆ ಎಂದು ಅವರು ವಿಷಾದಿಸಿದರು.
ವಿಶ್ವವಿದ್ಯಾಲಯ ಸಂಜೆ ಕಾಲೇಜು ಪ್ರಾಂಶುಪಾಲ ಡಾ.ಸಿ.ಎಸ್. ರಾಮನಾರಾಯಣನ್ ಅಧ್ಯಕ್ಷತೆ ವಹಿಸಿದ್ದರು. ಮೈಸೂರು ವಿವಿ ಎಂಬಿಎ ವಿಭಾಗದ ಪ್ರಾಧ್ಯಾಪಕ ಡಾ.ಡಿ.ಆನಂದ್, ಸಂವಹನ ಹಾಗೂ ಪತ್ರಿಕೋದ್ಯಮ ವಿಭಾಗದ ಡಾ.ಬಿ.ಪಿ. ಮಹೇಶ್ ಚಂದ್ರಗುರು, ಡಾ.ಪರಶುರಾಮ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

