ಅಕ್ರಮ ಮರಳುಗಾರಿಕೆ ವಿರುದ್ಧ ಕ್ರಮ
ಕೆ.ಆರ್. ನಗರ: ತಾಲೂಕಿನಾದ್ಯಂತ ಅಕ್ರಮವಾಗಿ ನಡೆಯುತ್ತಿರುವ ಮರಳುಗಾರಿಕೆಯನ್ನು ನಿಯಂತ್ರಿಸಲು ತಾಲೂಕು ಆಡಳಿತ ಕಠಿಣ ಕ್ರಮ ಕೈಗೊಂಡಿದ್ದು, ಪರವಾನಗಿ ಪಡೆಯದೆ ಮರಳು ಸಾಗಿಸುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ತಹಸೀಲ್ದಾರ್ ಆರ್.ಬಿ. ಶಿವಶಂಕರಪ್ಪ ಹೇಳಿದರು.
ಏ.24ರಂದು ತಾಲೂಕಿನ ದೊಡ್ಡಕೊಪ್ಪಲು, ಹಂಪಾಪುರ ಮತ್ತು ಬೇವಿನಹಳ್ಳಿ ಗ್ರಾಮಗಳಲ್ಲಿ ಅಕ್ರಮ ಮರಳು ಅಡ್ಡೆಗಳ ಮೇಲೆ ದಾಳಿ ಮಾಡಿ 40 ಲೋಡ್ ಮರಳನ್ನು ವಶಪಡಿಸಿಕೊಂಡು, ಈ ಸಂಬಂಧ ದೂರು ದಾಖಲಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.
ಅಕ್ರಮ ಮರಳು ಸಾಗಣೆಯನ್ನು ತಡೆಯಲು ತಾಲೂಕಿನಲ್ಲಿ ಅಗತ್ಯವಿರುವೆಡೆ ಚೆಕ್ ಪೋಸ್ಟ್ ತೆರೆಯಲು ಉಪ-ವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದು, ಅವರಿಂದ ಅನುಮತಿ ದೊರೆತ ಕೂಡಲೇ ಚೆಕ್ ಪೋಸ್ಟ್ಗಳನ್ನು ತೆರೆಯುವುದರ ಜತೆಗೆ ಪೊಲೀಸ್ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು ದಿಢೀರ್ ದಾಳಿ ನಡೆಸುವರು ಎಂದು ತಿಳಿಸಿದರು. ಚುಂಚನಕಟ್ಟೆಯ ಬಳಿ ಯಾವುದೇ ದಾಖಲಾತಿ ಇಲ್ಲದೆ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ವಶಪಡಿಸಿಕೊಂಡಿದ್ದು, ಮೊಕದ್ದಮೆ ದಾಖಲಿಸಿಕೊಳ್ಳಲಾಗಿದೆ ಎಂದ ತಹಸೀಲ್ದಾರರು ಸಾರ್ವಜನಿಕರು ಅಕ್ರಮ ಮರಳುಗಾರಿಕೆ ನಡೆಯುತ್ತಿರುವ ಬಗ್ಗೆ ಇಲಾಖೆಗೆ ಮಾಹಿತಿ ನೀಡಬೇಕೆಂದು ಕೋರಿದರು.
ಸರ್ಕಾರದಿಂದ ಪರವಾನಗಿ ಪಡೆದು ಮರಳುಗಾರಿಕೆ ಮಾಡುತ್ತಿರುವ ಸ್ಥಳಗಳನ್ನು ಹೊರತುಪಡಿಸಿ, ಇತರ ಸ್ಥಳಗಳಲ್ಲಿ ಸಾರ್ವಜನಿಕರು ಮರಳು ಸಾಗಿಸಿದರೆ ಅಂತಹವರ ವಿರುದ್ಧ ಕಠಿಣ ಕ್ರಮ ನಿಶ್ಚಿತ ಎಂದು ಎಚ್ಚರಿಕೆ ನೀಡಿದ ಅವರು, ದಾಖಲಾತಿ ಇಲ್ಲದೆ ಸಂಗ್ರಹಿಸುವ ಮರಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುತ್ತದೆ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

