ಸಿದ್ದರಾಮಯ್ಯ ಸೌಖ್ಯದಾರಾಮ...
ಮೈಸೂರು: ರಾಜ್ಯದಲ್ಲಿ ಎರಡು ತಿಂಗಳಿಂದ ನಿರಂತರ ಚುನಾವಣೆ ಪ್ರಚಾರದಲ್ಲಿ ತೊಡಗಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಇದೀಗ ನಿರಾಳರಾಗಲು 'ಸೌಖ್ಯ'ಕ್ಕೆ ಮುಂದಾಗಿದ್ದಾರೆ.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ 100ಕ್ಕೂ ಹೆಚ್ಚು ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರಚಾರ ಕಾರ್ಯದಲ್ಲಿ ಭಾಗವಹಿಸಿದ್ದ ಅವರು ಹೊರ ರಾಜ್ಯದಲ್ಲೂ ಪ್ರಚಾರ ನಡೆಸಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಮತ ಯಾಚಿಸಿದ್ದರು. ಇದೀಗ ರಿಲ್ಯಾಕ್ಸ್ಗೆ ಮುಂದಾಗಿದ್ದಾರೆ.
ರಿಲ್ಯಾಕ್ಸ್ ಪಡೆಯಲು ಅವರೇನು ಬೇರೆ ರಾಜ್ಯಕ್ಕಾಗಲಿ ಅಥವಾ ಬೇರೆ ದೇಶಕ್ಕಾಗಲಿ ತೆರಳದೆ, ಬೆಂಗಳೂರಿನ ಹೊರವಲಯದ ವೈಟ್ಫೀಲ್ಡ್ನಲ್ಲಿರುವ ಸೌಖ್ಯ ಚಿಕಿತ್ಸಾಲಯದಲ್ಲಿ ಉತ್ತಮ ಆರೋಗ್ಯಕ್ಕಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಚಿವ ಸಹದ್ಯೋಗಿಗಳಾದ ಡಾ.ಎಚ್.ಸಿ.ಮಹದೇವಪ್ಪ, ಎಚ್.ಎಸ್.ಮಹದೇವ ಪ್ರಸಾದ್, ಕೇಂದ್ರದ ಮಾಜಿ ಸಚಿವ ಸಿ.ಎಂ. ಇಬ್ರಾಹಿಂ ಸಹಿತ ಹಲವು ನಾಯಕರೊಂದಿಗೆ ಆಸ್ಪತ್ರೆಯಲ್ಲಿ ಸಿದ್ದರಾಮಯ್ಯ ಅವರನ್ನು ಕಂಡಾಗ, ಅವರ ಮುಖದಲ್ಲಿ ನಿರಾಳ ಭಾವ ಕಂಡಿತು. ಸತತ 6 ದಿನಗಳ ಕಾಲ ಚಿಕಿತ್ಸೆ ಪಡೆದು ಭಾನುವಾರ ಮನೆಗೆ ತೆರಳುವರು. ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಕೇಂದ್ರದಲ್ಲಿ 10 ವರ್ಷ ಆಡಳಿತ ನಡೆಸಿರುವ ಕಾಂಗ್ರೆಸ್ ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳು ಹಾಗೂ ರಾಜ್ಯದಲ್ಲಿ 10 ತಿಂಗಳಿಂದ ಆಡಳಿತ ನಡೆಸುತ್ತಿರುವ ನಮ್ಮ ಸರ್ಕಾರದ ಜನಪರ ಕಾರ್ಯಕ್ರಮಗಳನ್ನು ಮೆಚ್ಚಿ ಜನರು ಕಾಂಗ್ರೆಸ್ ಪರವಾಗಿ ಮತ ಚಲಾಯಿಸಿದ್ದಾರೆ ಎಂದರು. ಕರ್ನಾಟಕದಲ್ಲಿ 16 ರಿಂದ 19 ಸ್ಥಾನಗಳು ಕಾಂಗ್ರೆಸ್ ಪಾಲಾಗಲಿವೆ ಎಂದ ಅವರು, ಈ ಬಾರಿಯೂ ಕೇಂದ್ರದಲ್ಲಿ ಸೋನಿಯಾ ಗಾಂಧಿ ನೇತೃತ್ವದ ಯುಪಿಎ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಕೆ.ಮರೀಗೌಡ, ಮುಖಂಡರಾದ ಮರಿಸ್ವಾಮಿಗೌಡ, ಕೃಷ್ಣಕುಮಾರ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

