ಶೂಟೌಟ್: ಎಸ್‌ಡಿಪಿಐ ಪ್ರತಿಭಟನೆ
ಕೆ.ಆರ್.ನಗರ: ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಸಮೀಪದ ತನಿಕೋಡು ಚೆಕ್‌ಪೋಸ್ಟ್‌ನಲ್ಲಿ ನಡೆದ ಎನ್‌ಕೌಂಟರ್ ನಕಲಿಯಾಗಿದ್ದು, ಎಎನ್‌ಎಫ್ ಸಿಬ್ಬಂದಿ ಅಮಾಯಕ ಕಬೀರ್ ಅವರನ್ನು ಕೊಲೆಗೈದಿದ್ದು, ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಒತ್ತಾಯಿಸಿ ತಾಲೂಕು ಎಸ್‌ಡಿಪಿಐ ವತಿಯಿಂದ ಪ್ರತಿಭಟಿದರು.
ಪಟ್ಟಣದ ಜಾಮೀಯ ಮಸೀದಿ ಬಳಿಯಿಂದ ಗರುಡಗಂಭ ವೃತ್ತ, ಪುರಸಭಾ ವೃತ್ತದ ಮೂಲಕ ವಿವಿ ರಸ್ತೆಯಲ್ಲಿ ಮೆರವಣಿಗೆಯಲ್ಲಿ ತೆರಳಿದ ಎಸ್‌ಡಿಪಿಐ ಕಾರ್ಯಕರ್ತರು ತಹಸೀಲ್ದಾರ್‌ಗೆ ಮನವಿ ಸಲ್ಲಿಸಿದರು.
ಕಬೀರ್ ಸರ್ಕಾರದ ನಿಯಮದ ಪ್ರಕಾರ ಜಾನುವಾರು ಸಾಗಾಟದ ಅನುಮತಿ ಪಡೆದು ಹೋಗುತ್ತಿದ್ದರು. ಆದರೆ ಪೊಲೀಸರು ದುರುದ್ದೇಶದಿಂದ ಎನ್‌ಕೌಂಟರ್ ಮಾಡುವ ಮೂಲಕ ಆರ್‌ಎಸ್‌ಎಸ್ ಏಜೆಂಟರಂತೆ ವರ್ತಿಸಿದ್ದಾರೆಂದು ದೂರಿದರು.
ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಯಲ್ಲಿ ಪೊಲೀಸರು ಸ್ಥಳೀಯ ಭಜರಂಗದಳದವರ ಜತೆ ಸೇರಿಕೊಂಡು ಇಂತಹ ಅನೇಕ ನಕಲಿ ಎನ್‌ಕೌಂಟರ್‌ಗಳನ್ನು ಮಾಡಿದ್ದಾರೆ. ಆದ್ದರಿಂದ ಸರ್ಕಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಉನ್ನತ ಮಟ್ಟದ ತನಿಖೆಗೆ ಮಾಡಿಸಬೇಕೆಂದು ಆಗ್ರಹಿಸಿದರು. ಅಮಾಯಕ ಮುಸ್ಲಿಂ ಯುವಕನನ್ನು ಗುಂಡು ಹಾರಿಸಿ ಹತ್ಯೆ ಮಾಡಿದ ಸಿಬ್ಬಂದಿಯನ್ನು ಕೂಡಲೇ ಅಮಾನುತುಗೊಳಿಸಬೇಕು. ಮೃತನ ಕುಟುಂಬಕ್ಕೆ ಸರ್ಕಾರ 50 ಲಕ್ಷ ಪರಿಹಾರ ನೀಡಬೇಕೆಂದು ಪ್ರಟಿಭಟನಾಕಾರರು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಎಸ್‌ಡಿಪಿಐ ಅಧ್ಯಕ್ಷ ಇಮ್ರಾನ್‌ಖಾನ್, ಕಾರ್ಯದರ್ಶಿ ಆಫ್ಗರ್‌ಪಾಷ, ಪದಾಧಿಕಾರಿಗಳಾದ ವಸೀಂ, ಇರ್ಫಾನ್, ಮುಯಿನ್, ಆಸೀಫ್ ಪಾಷ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

