ರಾಮದೇವ್ ಬಂಧನಕ್ಕೆ ಮಂಜುನಾಥ್ ಆಗ್ರಹ
ಕ.ಪ್ರ.ವಾರ್ತೆ ಮೈಸೂರು ಏ. 27
ದಲಿತರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಬಾಬಾ ರಾಮದೇವ್ ಬಂಧನಕ್ಕೆ ಒತ್ತಾಯಿಸಿ ಕೇಂದ್ರ ಸರ್ಕಾರ ಮತ್ತು ರಾಷ್ಟ್ರಪತಿಗಳಿಗೆ ಪತ್ರ ಬರೆಯುವುದಾಗಿ ಕೆಪಿಸಿಸಿ ಪ.ಜಾತಿ ಘಟಕದ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯ ಎನ್.ಮಂಜುನಾಥ್ ಹೇಳಿದರು.
ಮೈಸೂರಿನಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್‌ಗಾಂಧಿ ಮತ್ತು ದಲಿತರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಬಾಬಾ ರಾಮದೇವ್ ವಿರುದ್ಧ ಕೇವಲ ಎಫ್‌ಐಆರ್ ದಾಖಲಿಸಿದರೆ ಸಾಲದು, ದೌರ್ಜನ್ಯ ನಿಯಂತ್ರಣ ಕಾಯ್ದೆಯಡಿ ಬಂಧಿಸಬೇಕು. ಆಗ ಮಾತ್ರ ಸಂವಿಧಾನಕ್ಕೆ ಗೌರವ ನೀಡಿದಂತೆ ಆಗುತ್ತದೆ ಎಂದರು.
ಬಾಬಾ ರಾಮದೇವ್ ಹೇಳಿಕೆಯನ್ನು ಸಮರ್ಥಿಸಿಕೊಂಡ ಬಿಜೆಪಿ ದಲಿತ ವಿರೋಧಿ ಎಂದು ಈಗ ತಿಳಿದಿದೆ. ಇನ್ನು ಬಿಜೆಪಿ ಅಧಿಕಾರಕ್ಕೆ ಬಂದರೆ ದಲಿತರ ರಕ್ಷಣೆ ಹೇಗೆ ಸಾಧ್ಯ ಎಂದರು.
ಕಾಂಗ್ರೆಸ್ ಸರ್ಕಾರ ಮಾತ್ರ ದಲಿತರಿಗೆ ಎಲ್ಲಾ ರೀತಿಯ ಅಧಿಕಾರ ನೀಡಿದೆ. ಕೆ.ಆರ್. ನಾರಾಯಣ್ ಅವರನ್ನು ರಾಷ್ಟ್ರಪತಿಯಾಗಿ ಮಾಡಿದ ಕೀರ್ತಿ ಕಾಂಗ್ರೆಸ್‌ಗೆ ಇದೆ. ಬಿಜೆಪಿಯಿಂದ ಇಂತಹ ಕೆಲಸ ಸಾಧ್ಯವಿಲ್ಲ. ಈಗಾಗಲೆ ಕಾಂಗ್ರೆಸ್‌ನ ಎಲ್ಲಾ ಘಟಕಗಳೂ ಪ್ರತಿಭಟನೆಗೆ ಇಳಿಯುತ್ತಿವೆ. ಮೈಸೂರಿನಲ್ಲಿ ನಗರ ಮತ್ತು ಗ್ರಾಮಾಂತರ ಕಾಂಗ್ರೆಸ್ ಕಾರ್ಯಕರ್ತರು ಬಾಬಾ ರಾಮದೇವ್ ವಿರುದ್ಧ ಪ್ರತಿಭಟಿಸುವರು ಎಂದು ಹೇಳಿದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 20 ಕ್ಷೇತ್ರಗಳಲ್ಲಿ ಜಯಗಳಿಸಲಿದೆ. ಬಿಜೆಪಿ ಹೇಳುವ ಮೋದಿ ಅಲೆ ಎಲ್ಲಿಯೂ ಕಂಡು ಬಂದಿಲ್ಲ ಎಂದರು.
ಪ.ಜಾತಿ. ಪ. ಪಂಗಡದ ಹಾಸ್ಟೆಲ್‌ಗಳ ಉಸ್ತುವಾರಿಯನ್ನು ಸಮಾಜ ಕಲ್ಯಾಣ ಇಲಾಖೆ ಮತ್ತು ಜಿಲ್ಲಾ ಪಂಚಾಯಿತಿ ಹೊಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಂದೆ ಪ.ಜಾತಿಯ ಎಲ್ಲಾ ಹಾಸ್ಟೆಲ್‌ಗಳನ್ನು ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಸೇರಿಸಬೇಕು. ಅಲ್ಲದೆ ಇದಕ್ಕೆ ಪ್ರತ್ಯೇಕ ಪ್ರಾಧಿಕಾರ ರಚಿಸಿದಾಗ ಮಾತ್ರ ಸರ್ಕಾರದ ಸೌಲಭ್ಯ ಸಮರ್ಪಕವಾಗಿ ತಲುಪುತ್ತದೆ. ವಿದ್ಯಾರ್ಥಿಗಳ ಪಾಲನೆಗಾಗಿ ಸರ್ಕಾರವು ಸರ್ಕಾರಿ ಮತ್ತು ಖಾಸಗಿ ಹಾಸ್ಟೆಲ್‌ಗಳಿಗೆ ನೀಡುವ ಸಹಾಯಧನ ಏಕರೂಪ ಇರುವಂತೆ ನೋಡಿಕೊಳ್ಳಬೇಕು ಎಂದು ಮನವಿ ಮಾಡಿದರು.
ನಗರ ಕಾಂಗ್ರೆಸ್ ಪ.ಜಾತಿ ಘಟಕದ ಅಧ್ಯಕ್ಷ ಸೋಮಸುಂದರ್, ಜಿಲ್ಲಾ ಅಧ್ಯಕ್ಷ ಪದ್ಮನಾಭ, ಮಂಡ್ಯ ಜಿಲ್ಲಾ ಅಧ್ಯಕ್ಷ ಆರ್.ಗುರು, ಮಹಿಳಾ ಘಟಕದ ಜಿಲ್ಲಾ ಅಧ್ಯಕ್ಷ ವಿಜಯಲಕ್ಷ್ಮಿ, ಎಚ್. ಅರವಿಂದ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

