ಮೈಸೂರು

ಕನ್ನಡಿಗರಿಗೆ ಶೇ.25 ಮೀಸಲು ಇರಲಿ

Published On :

ಕ.ಪ್ರ.ವಾರ್ತೆ  ಮೈಸೂರು  ಏ. 28
ಕನ್ನಡ ಮಾಧ್ಯಮದಲ್ಲಿ ಓದಿದವರಿಗೆ ಕೇಂದ್ರ ಸರ್ಕಾರದ ಉದ್ಯೋಗಗಳಲ್ಲಿ ಶೇ.25 ಮೀಸಲಾತಿ ನೀಡಬೇಕು ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಉದ್ಯಮಿ ಟಿ.ಆರ್. ಚಂದ್ರಶೇಖರ್ ಆಗ್ರಹಿಸಿದರು.
ನಗರದ ಜಗನ್ಮೋಹನ ಅರಮನೆಯಲ್ಲಿ ಸಿರಿಗನ್ನಡ ವೇದಿಕೆ ಮೈಸೂರು ಜಿಲ್ಲಾ ಘಟಕವನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದ ಅವರು, ಕನ್ನಡ ಮಾಧ್ಯಮದಲ್ಲಿ ಓದಬೇಕೆಂದು ಸಾಹಿತಿಗಳು, ಕನ್ನಡ ಅಭಿಮಾನಿಗಳು ಸಲಹೆ ನೀಡುತ್ತಿದ್ದಾರೆ. ಆದರೆ, ಕನ್ನಡದಲ್ಲಿ ಓದಿದವರಿಗೆ ಕೇಂದ್ರ ಸರ್ಕಾರದ ಉದ್ಯೋಗಗಳಲ್ಲಿ ಶೇ.5 ಮಾತ್ರ ಮೀಸಲಾತಿ ನೀಡಲಾಗಿದೆ. ಇದರ ಬದಲು ಶೇ.25 ಮೀಸಲಾತಿ ಸಿಗಬೇಕಿದೆ ಎಂದರು.
ಇದೇ ವೇಳೆ ಡಾ.ರಾಜ್‌ಕುಮಾರ್ ಅವರ ಸವಿನೆನಪಿನೋತ್ಸವ ಅಂಗವಾಗಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಡಾ.ರಾಜ್‌ಕುಮಾರ್ ಸೇವಾ ಪ್ರಶಸ್ತಿ, ಜೀವಮಾನ ಸಾಧನಾ ಪ್ರಶಸ್ತಿ, ಕನ್ನಡ ಸೇವಾ ರತ್ನ ಪ್ರಶಸ್ತಿ, ಸಮಾಜ ಸೇವಾ ರತ್ನ ಪ್ರಶಸ್ತಿ ಹಾಗೂ ಸಾಹಸ ರತ್ನ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಯಿತು. ಅಲ್ಲದೆ, ಡಾ.ರಾಜ್‌ಕುಮಾರ್ ಅವರು ನಟಿಸಿರುವ ಚಲನಚಿತ್ರ ಗೀತೆಗಳ ರಾಜ್ಯಮಟ್ಟದ ಗಾಯನ ಸ್ಪರ್ಧೆ, ರಾಜ್ಯಮಟ್ಟದ ಕವಿಗೋಷ್ಠಿ, ರಾಜ್ಯಮಟ್ಟದ ನೃತ್ಯ ಸ್ಪರ್ಧೆ ಹಾಗೂ ಚಿತ್ರಕಲೆ ಸ್ಪರ್ಧೆಗಳನ್ನು ಸಹ ಆಯೋಜಿಸಲಾಗಿತ್ತು.
ಸಿರಿಗನ್ನಡ ವೇದಿಕೆಯ ರಾಜ್ಯಾಧ್ಯಕ್ಷ ಎಂ.ಎಸ್. ವೆಂಕಟರಾಮಯ್ಯ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಉಪಾಧ್ಯಕ್ಷ ಕೆ.ರಾಜು ಬನ್ನೂರು, ಕರ್ನಾಟಕ ಕಾವಲು ಪಡೆಯ ರಾಜ್ಯಾಧ್ಯಕ್ಷ ಎಂ.ಮೋಹನ್‌ಕುಮಾರ್‌ಗೌಡ, ರಂಗಕರ್ಮಿ ರಾಜಶೇಖರ್ ಕದಂಬ, ಡೇನ್ ಕಿಯೇಷನ್‌ನ ಮಾಲೀಕರಾದ ಪಲ್ಲವಿ ರವಿಶಂಕರ್, ಕಸಾಪ ಜಿಲ್ಲಾಧ್ಯಕ್ಷ ಎಂ. ಚಂದ್ರಶೇಖರ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.