ಮೈಸೂರು

ಬಹುವಿಷಯಗಳ ಜ್ಞಾನ ಅವಶ್ಯ

Published On :

ಕ.ಪ್ರ.ವಾರ್ತೆ  ಮೈಸೂರು  ಏ. 28
ವಿದ್ಯಾರ್ಥಿಗಳಿಗೆ ಬಹುವಿಷಯಗಳ ಜ್ಞಾನ ವಿಸ್ತಾರ ಅವಶ್ಯಕ ಎಂದು ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕ ಪ್ರೊ.ಸಿ.ಕೆ.ಮಹೇಶ್ವರಪ್ಪ ಹೇಳಿದರು.
ವಿದ್ಯಾವರ್ಧಕ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೋಮವಾರ ಏರ್ಪಡಿಸಿದ್ದ 2013-14ನೇ ಸಾಲಿನ ಪಠ್ಯೇತರ ಚಟುವಟಿಕೆಗಳ ಸಮಾರೋಪ ಹಾಗೂ ಬಹುಮಾನ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕಲೆಯಾಗಲಿ, ವಿಜ್ಞಾನವಾಗಲಿ ಅಥವಾ ವಾಣಿಜ್ಯಶಾಸ್ತ್ರಕ್ಕೆ ಸಂಬಂಧಿಸಿದ ವಿಷಯವಾಗಲಿ, ವಿದ್ಯಾರ್ಥಿಗಳು ಕೇವಲ ತಾವು ಆರಿಸಿಕೊಂಡಿರುವ ಪಠ್ಯಕ್ಕೆ ಮಾತ್ರವೇ ಸೀಮಿತವಾಗಬಾರದು. ಅದರ ಆಚೆಗೂ ಬೇರೆ ಬೇರೆ ವಿಷಯಗಳನ್ನು ಕಲಿಯುವತ್ತ ಆಸಕ್ತಿ ವಹಿಸಬೇಕು. ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಪೈಪೋಟಿ ಎದುರಿಸಬೇಕಾದರೆ ಬಹುವಿಷಯಗಳ ಜ್ಞಾನ ಹಾಗೂ ಕೌಶಲ ಬಹುಮುಖ್ಯ ಎಂದರು.
ವಾಣಿಜ್ಯ ನಿರ್ವಹಣಾ ವಿದ್ಯಾರ್ಥಿಗಳು ತರಗತಿ ಪಾಠಗಳತ್ತ ಮಾತ್ರವೇ ಗಮನ ಹರಿಸಿದರೆ ಸಾಲದು. ತಮ್ಮ ಮನೆಯಲ್ಲಿ ತಂದೆ ತಾಯಂದಿರು ಹೇಗೆ ಕುಟುಂಬ ನಿರ್ವಹಿಸುತ್ತಾರೆ ಎಂಬುದನ್ನು ಅರಿತರೆ, ಮುಂದೆ ಅಂಥವರು ಕಂಪನಿಗಳನ್ನು ನಡೆಸಲು ಸಾಮರ್ಥ್ಯ ಹೊಂದಬಹುದು. ಆದ್ದರಿಂದ ಸಂಬಂಧಿಸಿದ ಅಧ್ಯಾಪಕರು ಆಯಾಯ ಪಠ್ಯಗಳ ವಿಷಯದ ಜತೆಗೆ ಬೇರೆ ವಿಷಯಗಳ ಜ್ಞಾನ ಬೋಧನೆಗೆ ಮುಂದಾಗಬೇಕು ಎಂದು ಆಶಿಸಿದರು.
ಕುಸ್ತಿ ಕಲೆಗೆ ಉತ್ತೇಜನ: ಗ್ರಾಮೀಣ ಪ್ರದೇಶದಲ್ಲಿ ಕುಸ್ತಿ ಕಲೆಯು ನಶಿಸುತ್ತಿರುವ ಇಂದಿನ ಸಂದರ್ಭದಲ್ಲಿ ನಗರ ಪ್ರದೇಶದಲ್ಲಿ, ಅದರಲ್ಲೂ ಈ ಕಾಲೇಜು ವಿದ್ಯಾರ್ಥಿಗಳು ಕುಸ್ತಿ ಕ್ರೀಡೆಯಲ್ಲಿ ತೊಡಗಿಸಿಕೊಂಡು ರಾಜ್ಯಮಟ್ಟ ಸೇರಿದಂತೆ ಅನೇಕ ಬಹುಮಾನಗಳನ್ನು ಗಳಿಸಿರುವುದು ಶ್ಲಾಘನೀಯ. ಸಂಸ್ಥೆಯು ಇಂತಹ ದೇಸೀಯ ಕ್ರೀಡೆಗೆ ಉತ್ತೇಜನ ನೀಡುತ್ತಿರುವುದು ಅನುಕರಣೀಯ ಎಂದರು.
ಪಠ್ಯೇತರ ಚಟುವಟಿಕೆಯಲ್ಲಿ ಉತ್ತಮ ಸಾಧನೆ ತೋರಿರುವ ವಿದ್ಯಾರ್ಥಿಗಳಿಗೆ ಮೈಸೂರು ವಿವಿಯ ದೈಹಿಕ ಶಿಕ್ಷಣ ವಿಭಾಗದ ಉಪನಿರ್ದೇಶಕ ಪುಲಕೇಶಿ ವೈ.ಶೆಟ್ಟಪ್ಪನವರ್ ಬಹುಮಾನ ವಿತರಿಸಿದರು.
ವಿದ್ಯಾವರ್ಧಕ ಸಂಘದ ಗೌರವ ಕಾರ್ಯದರ್ಶಿ ಹಾಗೂ ಮಾಜಿ ಮೇಯರ್ ಪಿ.ವಿಶ್ವನಾಥ್ ಅಧ್ಯಕ್ಷತೆ ವಹಿಸಿದ್ದರು. ಖಜಾಂಚಿ ಎಸ್.ಎನ್.ಲಕ್ಷ್ಮೀನಾರಾಯಣ ಮುಖ್ಯ ಅತಿಥಿಯಾಗಿದ್ದರು. ಪ್ರಾಂಶುಪಾಲ ಡಾ.ಎನ್. ಶಂಕರ್ ಇದ್ದರು. ಕ್ರೀಡಾ ಕಾರ್ಯದರ್ಶಿ ಪ್ರೊ.ಎಚ್.ಕೆ. ಶಿವರಾಮ್, ದೈಹಿಕ ನಿರ್ದೇಶಕ ಎಂ.ವಿ. ಪ್ರಸಾದ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.