ಲಕ್ಷ್ಮಣತೀರ್ಥ ನದಿಗೆ ಅಡ್ಡಗಟ್ಟೆ ನಿರ್ಮಾಣ
ಕ.ಪ್ರ.ವಾರ್ತೆ ಹುಣಸೂರು ಏ. 28
ಕ್ಷೇತ್ರದಲ್ಲಿ ನೀರಾವರಿ, ಆರೋಗ್ಯ, ಶಿಕ್ಷಣ ಕ್ಷೇತ್ರಗಳಿಗೆ ಆದ್ಯತೆ ನೀಡಿದ್ದು, ಹನಗೋಡು ಅಣೆಕಟ್ಟು, ನಾಲೆ ಮತ್ತು ಹಾರಂಗಿ ನಾಲೆಗಳ ಆಧುನೀಕರಣ ಕಾಮಗಾರಿ ಯೋಜನೆ ಜಾರಿಗೊಳಿಸಲು ಈ ಬಾರಿಯ ಬಜೆಟ್ನಲ್ಲಿ ತಾಲೂಕಿಗೆ 360 ಕೋಟಿ ಅನುದಾನ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡುವುದಾಗಿ ಶಾಸಕ ಎಚ್.ಪಿ. ಮಂಜುನಾಥ್ ಹೇಳಿದರು.
ತಾಲೂಕಿನ ಬಿಳಿಕೆರೆ ಹೋಬಳಿಯ ಆಯರಹಳ್ಳಿ ಏತ ನೀರಾವರಿ ಯೋಜನೆಗೆ ಸಂಬಂಧಿತ ಲಕ್ಷ್ಮಣತೀರ್ಥ ನದಿಗೆ ಅಡ್ಡಗಟ್ಟೆ ನಿರ್ಮಿಸುವ 1.97 ಕೋಟಿ ವೆಚ್ಚದ ಕಾಮಗಾರಿಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ಈ ಭಾಗದ ರೈತರ ಜೀವನಾಡಿಯಾದ ಆಯರಹಳ್ಳಿ ಏತ ನೀರಾವರಿ ಯೋಜನೆಯ ಫಲಾನುಭವಿಗಳ ಬಹು ದಿನದ ಬೇಡಿಕೆಯಂತೆ ಸರ್ಕಾರದ ಮೇಲೆ ಒತ್ತಡ ತಂದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಸಂಸದ ಎಚ್. ವಿಶ್ವನಾಥ್ ಹಾಗೂ ಸಣ್ಣ ನೀರಾವರಿ ಸಚಿವ ತಂಗಡಗಿ ಅವರ ಸಹಕಾರದಲ್ಲಿ ಈ ಯೋಜನೆ ಮಂಜೂರು ಮಾಡಿಸಿದ್ದೇನೆ ಎಂದರು. ಸಣ್ಣ ನೀರಾವರಿ ಇಲಾಖೆಯಲ್ಲೇ ತಾಲೂಕಿನ ವಿವಿಧೆಡೆ ರು. 14 ಕೋಟಿ ವೆಚ್ಚದ ಕಾಮಗಾರಿಗೆ ಚಾಲನೆ ನೀಡಿದ್ದೇನೆ. ಈ ಹಿನ್ನೆಲೆಯಲ್ಲಿ ತಾಲೂಕಿನಲ್ಲಿ ಸಾಕಷ್ಟು ಶಾಶ್ವತ ಕಾಮಗಾರಿಗಳು ನಡೆಯಲಿವೆ. ಇಷ್ಟೆಲ್ಲಾ ಕಾಮಗಾರಿಗಳು ದೇವರಾಜ ಅರಸರ ನಂತರ ನಡೆದಿದೆ ಎಂಬುದು ಹೆಮ್ಮೆ ನನಗಿದೆ ಎಂದರು.
ಜಿಪಂ ಸದಸ್ಯ ಕೆ.ಎಂ.ಮಂಜು ಮಾತನಾಡಿದರು. ಮಾಜಿ ಸದಸ್ಯ ರಾಮಕೃಷ್ಣೇಗೌಡ, ತಾಪಂ ಮಾಜಿ ಸದಸ್ಯರಾದ ಲಾರಿ ಸ್ವಾಮಿಗೌಡ, ಹಂದನಹಳ್ಳಿ ಸೋಮಶೇಖರ್, ಬೋಳನಹಳ್ಳಿ ಗ್ರಾಪಂ ಅಧ್ಯಕ್ಷೆ ಚೌಡಮ್ಮ, ಉಪಾಧ್ಯಕ್ಷೆ ಜ್ಯೋತಿ, ಮಾಜಿ ಅಧ್ಯಕ್ಷ ಸ್ವಾಮಿಗೌಡ, ಯ.ಮಂಚೇಗೌಡ, ಯ.ಸಿದ್ದರಾಮೇಗೌಡ, ಪಿಎಲ್ಡಿ ಬ್ಯಾಂಕ್ ನಿರ್ದೇಶಕ ರೇವಣ್ಣ, ಬಾಲು, ರಾಮಶೆಟ್ಟಿ, ಹಲಗೇಗೌಡ, ರಾಜೇಶ್, ಶಿವಣ್ಣೇಗೌಡ, ಸಣ್ಣ ನೀರಾವರಿ ಇಲಾಖೆಯ ಎಇಇ ಕಾಂತರಾಜು, ಎಂಜಿನಿಯರ್ಗಳಾದ ಕೃಷ್ಣಮೂರ್ತಿ, ಮೋಹನ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

