ಜೀವನದಲ್ಲಿ ಶಿಸ್ತು ಕಲಿಸುವ ಕ್ರೀಡೆ
ಕ.ಪ್ರ.ವಾರ್ತೆ ಕೆ.ಆರ್. ನಗರ ಏ. 29
ಕ್ರೀಡೆ ಮನುಷ್ಯನ ಜೀವನಕ್ಕೆ ಅತ್ಯಂತ ಅವಶ್ಯಕವಾಗಿದ್ದು, ಅದು ವಿದ್ಯಾರ್ಥಿಗಳ ಜೀವನದಲ್ಲಿ ಶಿಸ್ತು, ಸಂಯಮ ಮತ್ತು ಪ್ರಾಮಾಣಿಕತೆ ಕಲಿಸುತ್ತದೆ. ಆದ್ದರಿಂದ ಇಂತಹ ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಂಡು, ಜೀವನದಲ್ಲಿ ಸಾಧನೆ ಮಾಡಬೇಕೆಂದು ಅಂತಾರಾಷ್ಟ್ರೀಯ ಕ್ರೀಡಾಪಟು ರೇಷ್ಮಾ ಚಂಗಪ್ಪ ಕರೆ ನೀಡಿದರು.
ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ನಡೆದ ಕ್ರೀಡೆ, ಎನ್ಸಿಸಿ, ಎನ್ಎಸ್ಎಸ್ ಹಾಗೂ ಸ್ಕೌಟ್ ಮತ್ತು ಗೈಡ್ಸ್ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಸ್ಪರ್ಧಾತ್ಮಕ ಯುಗದಲ್ಲಿ ಉತ್ತಮ ಪರಿಶ್ರಮ ಮತ್ತು ಅಭ್ಯಾಸ ಮಾಡಿದಾಗ ಒಳ್ಳೆಯ ವಿದ್ಯಾರ್ಥಿಗಳಾಗಿ ಹೊರಹೊಮ್ಮಲು ಸಾಧ್ಯ ಎಂದು ಹೇಳಿದರು.
ಪ್ರಾಂಶುಪಾಲ ಡಾ.ಎಂ.ಎಚ್. ಕೊಂಡರಸಯ್ಯ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೈಸೂರು ವಿವಿ ಎನ್ಎಸ್ಎಸ್ ಸಂಯೋಜನಾಧಿಕಾರಿ ಡಾ.ಕೆ. ಕಾಳಚನ್ನೇಗೌಡ, ಸರ್ಕಲ್ ಇನ್ಸ್ಪೆಕ್ಟರ್ ಎಚ್.ಎನ್. ಸಿದ್ದಯ್ಯ, ದೈಹಿಕ ಶಿಕ್ಷಣ ನಿರ್ದೇಶಕಿ ಕೆ.ಆರ್. ಪ್ರತಿಮಾ, ಎನ್ಸಿಸಿ ಅಧಿಕಾರಿ ಸಿ.ಪಿ. ಮಹದೇವಸ್ವಾಮಿ, ಸಾಂಸ್ಕೃತಿಕ ಸಮಿತಿ ಸಂಚಾಲಕ ಕೆ.ಸಿ.ವೀರಭದ್ರಯ್ಯ, ಸ್ಕೌಟ್ಸ್ ಮತ್ತು ಗೈಡ್ಸ್ ರಾಮಪ್ರಸಾದ್, ಎ.ಎಸ್. ಶಶಿಧರ್, ಉಪನ್ಯಾಸಕರಾದ ಬಸವರಾಜು, ರಮೇಶ್, ಎಚ್.ಆರ್. ಚಂದ್ರಕಲಾ, ಉರೀಗೌಡ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

