ಕ್ರಿಯಾ ಯೋಜನೆ ತಯಾರಿಸಲು ಸೂಚನೆ
ಮೈಸೂರು: ಪ್ರಸಕ್ತ ಸಾಲಿನ ಅಭಿವೃದ್ಧಿ ಕಾರ್ಯಕ್ರಮಗಳನ್ನು ಕಾರ್ಯಗತಗೊಳಿಸಲು ಮೇ ತಿಂಗಳ ಒಳಗೆ ಕ್ರಿಯಾ ಯೋಜನೆಯನ್ನು ತ್ವರಿತವಾಗಿ ತಯಾರಿಸಬೇಕು ಎಂದು ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿ ಎಂ.ರಾಮಯ್ಯ ತಿಳಿಸಿದರು.
ಬುಧವಾರ ನಡೆದ ವರುಣ ಕ್ಷೇತ್ರದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಕ್ಷೇತ್ರದಲ್ಲಿ ಕುಡಿಯುವ ನೀರಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಬೇಕು. ಬೋರ್ವೆಲ್ಗಳು ಕೆಟ್ಟು ಹೋದ ಕೂಡಲೆ ದುರಸ್ತಿ ಮಾಡಿಸಬೇಕು. ಕುಡಿಯುವ ನೀರಿನ ಟ್ಯಾಂಕ್ಗಳನ್ನು ಸ್ವಚ್ಛಗೊಳಿಸಲು ಕ್ರಮ ಕೈಗೊಳ್ಳಬೇಕು. ಕುಡಿಯುವ ನೀರಿಗೆ ವಿದ್ಯುತ್ ಪೂರೈಸಬೇಕು. ಆದ್ಯತೆಯ ಮೇಲೆ ರಸ್ತೆ ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಸಿದ್ದರಾಮನಹುಂಡಿ ಗ್ರಾಮ ಸೇರಿದಂತೆ ಕ್ಷೇತ್ರದ ಎಲ್ಲಾ ಗ್ರಾಮಗಳ ಅಭಿವೃದ್ಧಿಗೆ ಅಧಿಕಾರಿಗಳು ಮುಂದಾಗಬೇಕು. ಸಮಸ್ಯೆಗಳ ದೂರು ಕೇಳಿಬಂದ ಕೂಡಲೆ ಕ್ರಮ ಕೈಗೊಳ್ಳಬೇಕು. ಸಾರ್ವಜನಿಕರನ್ನು ಅನಗತ್ಯವಾಗಿ ಕಚೇರಿಗೆ ಅಲೆಸಬಾರದು ಎಂದರು.
ಇಒ ಅರುಳ್ಕುಮಾರ್, ತಹಸೀಲ್ದಾರ್ ಜಗದೀಶ್, ಶಿವಸ್ವಾಮಿ, ನಾಗರಾಜ್ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

