ಮೈಸೂರು

ಟಿಇಟಿ ತಡೆಗೆ ಆಗ್ರಹಿಸಿ ಪ್ರತಿಭಟನೆ

Published On :

ಮೈಸೂರು:  ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಗೊಂದಲದ ಗೂಡಾಗಿದ್ದು, ಸರ್ಕಾರವು ಈ ಪರೀಕ್ಷೆಯನ್ನು ತಡೆಹಿಡಿಯಬೇಕು ಎಂದು ಆಗ್ರಹಿಸಿ ಎಐಡಿವೈಒ ಸಂಘಟನೆಯ ನೇತೃತ್ವದಲ್ಲಿ ವಿದ್ಯಾರ್ಥಿಗಳು ಬುಧವಾರ ಪ್ರತಿಭಟಿಸಿದರು.
ನಗರದ ಅರಮನೆ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿದ ವಿದ್ಯಾರ್ಥಿಗಳು, ಸರ್ಕಾರದ ದಿಢೀರ್ ನಿರ್ಧಾರದಿಂದ ಡಿ.ಇಡಿ ಮತ್ತು ಬಿ.ಇಡಿ ತರಬೇತಿ ಪಡೆದವರಲ್ಲಿ ಆತಂಕ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ದೂರಿದರು.
ಟಿಇಟಿಯನ್ನು ಸಿಇಟಿ ಬರೆಯಲು ಮೆಟ್ಟಿಲಾಗಿಸಿರುವುದು, ದುಬಾರಿ ಪರೀಕ್ಷಾ ಶುಲ್ಕ ನಿಗದಿಪಡಿಸಿರುವುದು ಸರಿಯಲ್ಲ. ಶಿಕ್ಷಕರ ತರಬೇತಿಗೆ ದೇಶಾದ್ಯಂತ ಏಕರೂಪದ ಪಠ್ಯಕ್ರಮ ಜಾರಿಯಾಗಿಲ್ಲ. ಆದರೆ, ಟಿಇಟಿಯಲ್ಲಿ ಮಾತ್ರ ದೇಶಾದ್ಯಂತ ಒಂದೇ ರೀತಿಯ ಪಠ್ಯಕ್ರಮ ಹಾಗೂ ಪರೀಕ್ಷಾ ವಿಧಾನ ಹೇರಿರುವುದು ಅಸಮಂಜಸ. ಮಾತೃಭಾಷೆಯಲ್ಲಿ ಪಠ್ಯಕ್ರಮ ಲಭ್ಯವಿಲ್ಲದಿರುವುದು ಅವೈಜ್ಞಾನಿಕ ಎಂದು ಖಂಡಿಸಿದರು.
ಎಲ್ಲ ಗೊಂದಲಗಳನ್ನು ನಿವಾರಿಸುವವರೆಗೂ ಟಿಇಟಿ ಮುಂದೂಡಬೇಕು. ತರಾತುರಿಯಲ್ಲಿ ಪರೀಕ್ಷೆ ನಡೆಸಬಾರದು ಎಂದು ಒತ್ತಾಯಿಸಿದರು. ಮುಖಂಡರಾದ ರವಿ, ಚಂದ್ರಶೇಖರ್ ಮೇಟಿ, ಉಮಾದೇವಿ, ಸೀಮಾ, ಪಿ.ಎಸ್. ಸಂಧ್ಯಾ, ರಂಜಿತಾ, ಸುನಿಲ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.