ನೇರಳಕುಪ್ಪೆಯಲ್ಲಿ ಜಾಗೃತಿ ಜಾಥಾ

Updated on: 

ಹುಣಸೂರು: ಹನಗೋಡು ಹೋಬಳಿಯ ನೇರಳಕುಪ್ಪೆ ಗ್ರಾಪಂ ವತಿಯಿಂದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ನಡೆದ ಜಾಗೃತಿ ಜಾಥಾಕ್ಕೆ ಗ್ರಾಪಂ ಅಧ್ಯಕ್ಷೆ ಮುತ್ತಮ್ಮ ಚಾಲನೆ ನೀಡಿದರು. ನೇರಳಕುಪ್ಪೆ ಪ್ರೌಢಶಾಲಾ ವಿದ್ಯಾರ್ಥಿಗಳು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಪಂ ನೌಕರರು, ಸ್ವಸಹಾಯ ಸಂಘದ ಮಹಿಳೆಯರು ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದರು. ಜಾಥಾದಲ್ಲಿ ಪಿಡಿಒ ಮಣಿ, ಮುಖ್ಯಶಿಕ್ಷಕ ನಾಗರಾಜ್ ಮಹಿಳೆಯರ ಮೇಲಿನ ದೌರ್ಜನ್ಯದ ಬಗ್ಗೆ ಜಾಗೃತಿ ಮೂಡಿಸಿದರು. ಅಂಗನವಾಡಿ ಕಾರ್ಯಕರ್ತೆಯರು, ವಿವಿಧ ಮಹಿಳಾ ಸಂಘಟನೆಗಳವರು ಭಾಗವಹಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com