ನಾಲ್ವಡಿ ದೂರದೃಷ್ಟಿ ಹರಿಕಾರರು: ಬಂಜಗೆರೆ ಜಯಪ್ರಕಾಶ್
ಮೈಸೂರು: ಹಿಂದುಳಿದ ವರ್ಗದವರ ಅಭಿವೃದ್ಧಿಗೆ ಮತ್ತು ದೂರದೃಷ್ಟಿಯ ಕಾರ್ಯಕ್ರಮಗಳಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಕೊಡುಗೆ ಅಪಾರ ಎಂದು ಕರ್ನಾಟಕ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ.ಬಂಜಗೆರೆ ಜಯಪ್ರಕಾಶ್ ಹೇಳಿದರು. ಕಲಾಮಂದಿರದ ಮನೆಯಂಗಳದಲ್ಲಿ ಭಾನುವಾರ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಪುನರ್ ಪ್ರತಿಷ್ಠಾನ ಸಮಿತಿಯು 74ನೇ ವರ್ಷದ ಸ್ಮರಣಾರ್ಥ ಆಯೋಜಿಸಿದ್ದ ಸಮಾಜದ ಬದಲಾವಣೆಗೆ ನಾಲ್ವಡಿ ಅವರ ಕೊಡುಗೆ ಕುರಿತ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು. ರಾಜ್ಯಕ್ಕೆ ನೀಡಿದ ಅನೇಕ ದೂರದೃಷ್ಟಿಯ ಕಾರ್ಯಕ್ರಮಗಳ ಮೂಲಕ ನಾಲ್ವಡಿ ಅವರು ಜೀವಂತವಾಗಿದ್ದಾರೆ. ಭಾರತದಲ್ಲಿಯೆ ದೂರದೃಷ್ಟಿ ಹೊಂದಿದ್ದ ರಾಜರಲ್ಲಿ ನಾಲ್ವಡಿ ಪ್ರಮುಖರಾಗಿದ್ದರು. ಸಾಮಾಜಿಕ ಸುಧಾರಣೆ ಮತ್ತು ಅಭಿವೃದ್ಧಿ ಯೋಜನೆಗಳಿಗೆ ಅವರು ಕೊಡುಗೆ ನೀಡಿದ್ದಾರೆ. ಅಲ್ಲದೆ ಎಲ್ಲ ಜಾತಿ ವರ್ಗದವರಿಗೂ ಸಮಾನ ಅವಕಾಶ ಕಲ್ಪಿಸಿಕೊಟ್ಟಿದ್ದರು ಎಂದು ಹೇಳಿದರು.
ಹಿಂದುಳಿದವರು ಮತ್ತು ಬಡವರಿಗಾಗಿ ಮೈಸೂರು ವಿಶ್ವವಿದ್ಯಾಲಯ ತೆರೆದರು. ಆಳ್ವಿಕೆ ನಡೆಸುತ್ತಿದ್ದ ಭಾರತೀಯರು ತೆರೆದ ಮೊದಲ ವಿವಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಇದರಿಂದ ಅನೇಕರಿಗೆ ವಿದ್ಯಾವಕಾಶ ದೊರೆಯಿತು. ನಾಲ್ವಡಿ ಅವರು ಕೇವಲ ಕರ್ನಾಟಕಕ್ಕೆ ಮಾತ್ರ ಮಾದರಿ ಆಡಳಿತ ನೀಡಲಿಲ್ಲ. ಇಡಿ ವಿಶ್ವಕ್ಕೆ ಅವರ ಆಳ್ವಿಕೆ ಮಾದರಿಯಾಗಿದೆ ಎಂದು ತಿಳಿಸಿದರು. ಇತಿಹಾಸ ತಜ್ಞ ಪ್ರೊ.ಪಿ.ವಿ. ನಂಜರಾಜ ಅರಸ್ ಅಧ್ಯಕ್ಷತೆ ವಹಿಸಿದ್ದರು. ಸಾಹಿತಿ ಪ್ರೊ.ಕೆ.ಎಸ್. ಭಗವಾನ್, ಎಸ್‌ಡಿಪಿಐ ರಾಜ್ಯ ಉಪಾಧ್ಯಕ್ಷ ಪ್ರೊ.ಶಬ್ಬೀರ್ ಮುಸ್ತಫಾ, ಲೇಖಕ ಡಾ.ಶಿವರಾಜಪ್ಪ, ಪ್ರಭುದೇವರಾಜ ಅರಸ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

