ಪ್ರಗತಿಗೆ ಶಿಕ್ಷಣವೇ ಮೆಟ್ಟಿಲು: ಹೊನ್ನನಾಯಕ
ಟಿ. ನರಸೀಪುರ,: ಸಾಮಾಜಿಕ ಪ್ರಗತಿಯ ಮಳಿಗೆಯನ್ನೇರಲು ವಿದ್ಯೆ ಎಂಬುದೇ ಮೆಟ್ಟಿಲು ಎಂದು ಜಿಲ್ಲಾ ಕಾಂಗ್ರೆಸ್ ಎಸ್ಟಿ ವಿಭಾಗದ ಅಧ್ಯಕ್ಷ ಹೊನ್ನನಾಯಕ ಹೇಳಿದರು.
ಪಟ್ಟಣದ ಮಹರ್ಷಿ ವಾಲ್ಮೀಕಿ ಶಿಕ್ಷಣ ಸಂಸ್ಥೆ ಆವರಣದಲ್ಲಿ ಭಾನುವಾರ ತಾಲೂಕು ನಾಯಕ ಸಂಘ ಹಾಗೂ ನೌಕರರ ಕ್ಷೇಮಾಭಿವೃದ್ಧಿ ಸಂಘಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಸಂಘಟನೆಗಳ ನೆರವು ಪಡೆದುಕೊಂಡು ವಿದ್ಯಾವಂತರಾಗಿ ಉನ್ನತ ಹುದ್ದೆಯನ್ನು ಪಡೆದುಕೊಂಡ ನಂತರ ವಿದ್ಯಾರ್ಥಿಗಳು ಸಮುದಾಯದ ಅಭಿವೃದ್ಧಿಗೂ ಗಮನ ಹರಿಸಬೇಕು ಎಂದರು.
ಜಿಲ್ಲಾ ನಾಯಕ ಸಂಘದ ಪ್ರಧಾನ ಕಾರ್ಯದರ್ಶಿ ಡಿ.ಮಹದೇವಪ್ಪ ಮಾತನಾಡಿ, ವಿದ್ಯಾರ್ಥಿಗಳು ಮಾತೃಭಾಷೆ ಕನ್ನಡ, ಇಂಗ್ಲಿಷ್ನೊಂದಿಗೆ ಹಿಂದಿಯನ್ನೂ ಕಲಿತು ರಾಷ್ಟ್ರೀಯ ಮಟ್ಟದಲ್ಲಿ ಉದ್ಯೋಗವನ್ನು ಪಡೆದುಕೊಂಡು ಉತ್ತಮ ಜೀವನ ನಡೆಸಬೇಕು. ಕಲಿತ ವಿದ್ಯೆಗೆ ಜಾಗತೀಕರಣದಲ್ಲಿ ಭಾಷಾ ನೈಪುಣ್ಯತೆ ನೆರವಾಗಲಿದೆ. ಪೋಷಕರು ಮಕ್ಕಳನ್ನು ದುಡಿಮೆಗೆ ನೂಕುವುದರ ಬದಲು ವಿದ್ಯಾವಂತರನ್ನಾಗಿ ಮಾಡಲು ಶಾಲಾ ಕಾಲೇಜುಗಳಿಗೆ ಕಳುಹಿಸಬೇಕೆಂದು ಸಲಹೆ ನೀಡಿದರು.
ಮಹರ್ಷಿ ವಾಲ್ಮೀಕಿ ಶಿಕ್ಷಣ ಸಂಸ್ಥೆ ಗೌರವಾಧ್ಯಕ್ಷ ಎಂ.ಮಹದೇವಯ್ಯ, ಪ್ರಧಾನ ಕಾರ್ಯದರ್ಶಿ ಆಲಗೂಡು ನಾಗರಾಜು, ನೌಕರರ ಸಂಘದ ಅಧ್ಯಕ್ಷ ಪಿ.ಶಶಿಧರ್, ಕಾರ್ಯದರ್ಶಿ ಬಿ.ಶಾಂತರಾಜು, ನಾಯಕ ಶಿಕ್ಷಕರ ಸಂಘದ ಅಧ್ಯಕ್ಷ ಪಿ.ನಾಗರಾಜು, ಕಾರ್ಯದರ್ಶಿ ಬಸವರಾಜು, ಮುಖ್ಯ ಶಿಕ್ಷಕ ಆರ್.ರಾಜು, ನಿವೃತ್ತ ವ್ಯವಸ್ಥಾಪಕ ನಂಜಯ್ಯ, ಮುಖಂಡರಾದ ಕರಿಯಪ್ಪ, ಎಂ.ರವಿಶಂಕರ, ಎಂ. ಕೃಷ್ಣಪ್ಪ, ಗದ್ದೇಮೋಳೆ ಪುರುಷೋತ್ತಮ, ಶ್ರೀರಂಗರಾಜಪುರ ಮಲ್ಲೇಶ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

