ಮೈಸೂರು

ಅಂಗವಿಕಲ ಮಕ್ಕಳಿಗೆ ವೈದ್ಯಕೀಯ ತಪಾಸಣೆ: ಕೆ. ಮಹದೇವ

Published On :

ಟಿ. ನರಸೀಪುರ: ನಿರಂತರವಾಗಿ ವೈದ್ಯಕೀಯ ತಪಾಸಣೆ ಮಾಡಿಸುವ ಮೂಲಕ ಅಂಗವಿಕಲ ಮಕ್ಕಳ ಆರೋಗ್ಯ ಕಾಪಾಡಲು ಪೋಷಕರು ಕಾಳಜಿ ವಹಿಸಬೇಕು ಎಂದು ಗರ್ಗೇಶ್ವರಿ ಜಿಪಂ ಕ್ಷೇತ್ರದ ಸದಸ್ಯ ಕೆ. ಮಹದೇವ ಹೇಳಿದರು.
ಪಟ್ಟಣದ ಗುರುಭವನದಲ್ಲಿ ಸೋಮವಾರ ಅಂಗವಿಕಲ ಮಕ್ಕಳ ವೈದ್ಯಕೀಯ ತಪಾಸಣೆ ಹಾಗೂ ಮೌಲ್ಯಾಂಕನ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು, ಪ್ರಕೃತಿಯ ವಿಕಲ್ಪನೆಯಲ್ಲಿ ಅಂಗವೈಕಲ್ಯತೆ ಮಕ್ಕಳಿಗೆ ಶಾಪವಾಗಿಬಿಡುತ್ತದೆ. ನಿರಂತರ ವೈದ್ಯಕೀಯ ಚಿಕಿತ್ಸೆ ನೀಡಿ, ಅಂಗವಿಕಲರಲ್ಲೂ ಚೈತನ್ಯ ತುಂಬಬೇಕು. ಪ್ರತಿ ವರ್ಷವೂ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಹಮ್ಮಿಕೊಳ್ಳುವ ವೈದ್ಯಕೀಯ ತಪಾಸಣೆ ಮತ್ತು ಮೌಲ್ಯಾಂಕನ ಶಿಬಿರದಲ್ಲಿ ತಪ್ಪದೆ ಪೋಷಕರು ಮಕ್ಕಳನ್ನು ಕರೆತರಬೇಕೆಂದರು. ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಕೃಷ್ಣಪ್ಪ, ಆಯುಷ್ ಸಹಾಯಕ ಪ್ರಾಧ್ಯಾಪಕ ಡಾ.ಜಿ.ಜಯರಾಮು, ಕೆ.ಆರ್. ಆಸ್ಪತ್ರೆಯ ಸಹಾಯಕ ಪ್ರಾಧ್ಯಾಪಕ ಡಾ.ಡಿ.ಎಂ. ಪ್ರಕಾಶ್, ಡಾ.ನೀಲನಗೌಡ ಪಾಟೀಲ್, ಡಾ. ಶುಭಾಷ್, ನೇತ್ರ ವೈದ್ಯರಾದ ಡಾ.ಸವಿತಾ ಕುಲಕರ್ಣಿ, ಡಾ.ಎ. ಅಮುಧ, ಡಾ.ಎಂ.ಸಿ. ಪೂಜಾ ಹಾಗೂ ಮನೋತಜ್ಞ ವೈದ್ಯ ಡಾ.ರಾಜ್‌ಗೋಪಾಲ್ ಅವರು ಸುಮಾರು 549 ಅಂಗವಿಕಲ ಮಕ್ಕಳ ಆರೋಗ್ಯ ತಪಾಸಣೆ ಮಾಡಿದರು.
ತಾಪಂ ಅಧ್ಯಕ್ಷರಾದ ಸುಧಾ ನಾಗಣ್ಣ, ಭೈರಾಪುರ ಜಿಪಂ ಸದಸ್ಯೆ ರೇಣುಕಾ ನಾಗರಾಜು, ಆಲಗೂಡು ಗ್ರಾಪಂ ಅಧ್ಯಕ್ಷೆ ರತ್ನಮ್ಮ, ಕ್ಷೇತ್ರ ಶಿಕ್ಷಣಾಧಿಕಾರಿ ಮರಿಸ್ವಾಮಿ, ಸಿಡಿಪಿಒ ಬಿ.ಎನ್.ಬಸವರಾಜು, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಂ.ವಿ. ಶಿವಶಂಕರಮೂರ್ತಿ, ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಎಸ್. ಗಂಗಾಧರ, ಉಪಾಧ್ಯಕ್ಷ ಕುಪ್ಯ ಪುಟ್ಟಸ್ವಾಮಿ, ಕೆಂಪರಾಜು, ಜಿಲ್ಲಾ ಪುನರ್ವಸತಿ ಕೇಂದ್ರದ ನೋಡೆಲ್ ಅಧಿಕಾರಿ ಮುರಳೀಧರ, ದಿನೇಶ, ರಾಮಯ್ಯ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.