ಮೈಸೂರು

ವಿದ್ಯಾರ್ಥಿಗಳಿಗೆ ಸಮಯಪ್ರಜ್ಞೆ ಮುಖ್ಯ

Published On :

ಮೈಸೂರು: ವಿದ್ಯಾರ್ಥಿಗಳಲ್ಲಿ ಸಮಯಪ್ರಜ್ಞೆ, ಶಿಸ್ತು ಅತಿ ಮುಖ್ಯ ಎಂದು ಪತ್ರಿಕೋದ್ಯಮಿ ರಾಜಶೇಖರ ಕೋಟಿ ಹೇಳಿದರು.
ನಗರದ ಖಿಲ್ಲೆ ಮೊಹಲ್ಲಾದ ಶಂಕರಮಠ ಬಡಾವಣೆಯ ಶ್ರೀಕಾಂತ ಮಹಿಳಾ ಪದವಿ ಪೂರ್ವ ಕಾಲೇಜಿನ 2014-15ನೇ ಸಾಲಿನ ವಿದ್ಯಾರ್ಥಿ ಸಂಘ ಉದ್ಘಾಟಿಸಿ ಮಾತನಾಡಿದ ಅವರು, ಮಹಿಳೆಯರ ಪ್ರಾಮುಖ್ಯತೆ, ಶಿಕ್ಷಣದ ಮಹತ್ವ ಹಾಗೂ ಸಕ್ರಿಯವಾಗಿ ಎಲ್ಲ ರಂಗದಲ್ಲೂ ತೊಡಗಿಸಿಕೊಳ್ಳುವ ಬಗ್ಗೆ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ವಿದ್ಯಾಸಂಸ್ಥೆಯ ಕಾರ್ಯದರ್ಶಿ ಎಂ.ಎಸ್. ಶ್ರೀಕಂಠಯ್ಯ ಮಾತನಾಡಿ, ಮಹಿಳೆಯರಲ್ಲಿ ಸ್ವಾಭಾವಿಕವಾಗಿ ನಾಯಕತ್ವ ಗುಣವಿದೆ. ಆದ್ದರಿಂದ ವಿದ್ಯಾಕ್ಷೇತ್ರದಲ್ಲಿ ಮಾತ್ರವಲ್ಲದೆ ರಾಜಕೀಯ ಕ್ಷೇತ್ರದಲ್ಲೂ ಮಹಿಳೆಯರು ಮುಂದೆ ಬರಬೇಕೆಂದು ತಿಳಿಸಿದರು.
ಕೆ.ಎನ್. ವರದರಾಜ ಮೆಮೋರಿಯಲ್ ಟ್ರಸ್ಟ್ ಅಧ್ಯಕ್ಷ ಕೆ.ಎನ್. ವರದರಾಜ ಮೆಮೋರಿಯಲ್ ಟ್ರಸ್ಟ್ ಅಧ್ಯಕ್ಷರಾದ ಆರ್.ಜಿ. ನರಸಿಂಹ ಅಯ್ಯಂಗಾರ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಅನೇಕ ರಾಜಕೀಯ ನಾಯಕರ ಮೂಲ ಬೇರು ವಿದ್ಯಾರ್ಥಿ ಸಂಘಗಳಲ್ಲಿಯೇ ಇದೆ. ವಿದ್ಯಾರ್ಥಿ ಸಮೂಹ ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಲು ವಿದ್ಯಾರ್ಥಿ ಸಂಘ ಪೂರಕ ಎಂದು ಹೇಳಿದರು. ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರು ಪ್ರಥಮ ಪಿಯುಸಿ ವಿದ್ಯಾರ್ಥಿನಿಯರನ್ನು ಸ್ವಾಗತಿಸಿದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.