ಸೆಸ್ಕ್ ಕಚೇರಿ ಎದುರು ಬಿಜೆಪಿ ಪ್ರತಿಭಟನೆ
ಕ.ಪ್ರ. ವಾರ್ತೆ, ಹುಣಸೂರು, ಆ.5
ಸಮರ್ಪಕ ವಿದ್ಯುತ್ ಪೂರೈಸದ ಸರ್ಕಾರದ ನೀತಿ ಖಂಡಿಸಿ ತಾಲೂಕು ಬಿಜೆಪಿ ರೈತಮೋರ್ಚಾ ಘಟಕ ಪಟ್ಟಣದ ಸೆಸ್ಕ್ ಕಚೇರಿಗೆ ಮುತ್ತಿಗೆ ಹಾಕುವ ಮೂಲಕ ಪ್ರತಿಭಟಿಸಿದರು.
ಪಟ್ಟಣದ ಪಕ್ಷದ ಕಚೇರಿಯಿಂದ ಮೆರವಣಿಗೆ ಹೊರಟ ಪಕ್ಷದ ಕಾರ್ಯಕರ್ತರು, ವಿದ್ಯುತ್ ನೀಡಿ, ಇಲ್ಲದಿದ್ದರೆ ಅಧಿಕಾರದಿಂದ ಕೆಳಗಿಳಿಯಿರಿ. ಗುಣಮಟ್ಟದ ವಿದ್ಯುತ್ ನಮ್ಮ ಹಕ್ಕು ಎಂಬಿತ್ಯಾದಿ ಘೋಷಣೆಗಳನ್ನು ಕೂಗಿದರು. ನಂತರ ಸೆಸ್ಕ್ ಕಚೇರಿ ಮುಂಭಾಗ ಜಮಾವಣೆಗೊಂಡು ಸೆಸ್ಕ್ ಅಧಿಕಾರಿಗಳು ಹಾಗೂ ಇಂಧನ ಸಚಿವರ ವಿರುದ್ಧ ಘೋಷಣೆಗಳನ್ನು ಕೂಗಿದರು.
ತಾಲೂಕು ರೈತ ಮೋರ್ಚಾ ಅಧ್ಯಕ್ಷ ಬಿ.ಎನ್.ನಾಗರಾಜಪ್ಪ ಮಾತನಾಡಿ, ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದಾಗ ರೈತರಿಗೆ ಕನಿಷ್ಠ 8 ಗಂಟೆಗಳ ನಿರಂತರವಾಗಿ ವಿದ್ಯುತ್ ನೀಡುವುದಾಗಿ ಭರವಸೆ ನೀಡಿತ್ತು. ಆದರೆ ಇಂದು ಕನಿಷ್ಠ 3 ಗಂಟೆ ವಿದ್ಯುತ್ ನೀಡುತ್ತಿಲ್ಲ. ಟ್ರಾನ್ಸ್ಫಾರ್ಮರ್ಗಳು ಸುಟ್ಟು ಹೋಗಿ ತಿಂಗಳುಗಳೇ ಕಳೆದಿದ್ದರೂ ಸರಿಪಡಿಸುವ ಗೋಜಿಗೆ ಹೋಗುತ್ತಿಲ್ಲ. ಸರ್ಕಾರದ ರೈತ ವಿರೋಧಿ ನೀತಿ ನಿಲ್ಲದಿದ್ದರೆ ಉಗ್ರ ಚಳವಳಿ ನಡೆಸಲಾಗುವುದೆಂದು ಎಚ್ಚರಿಸಿದರು.
ಸೆಸ್ಕ್ ಎಇಇ ಕಲೀಲ್ ಅಹಮದ್ ಪ್ರತಿಭಟನಾಕಾರರಿಂದ ಮನವಿ ಸ್ವೀಕರಿಸಿ, ಹಿರಿಯ ಅಧಿಕಾರಿಗಳ ಗಮನಕ್ಕೆ ತರುವುದಾಗಿ ತಿಳಿಸಿದರು. ಬಿಜೆಪಿ ತಾಲೂಕು ಅಧ್ಯಕ್ಷ ಮಂಜುನಾಥ್, ಮಾಜಿ ಅಧ್ಯಕ್ಷರಾದ ಬಿ.ಎಸ್.ಯೋಗಾನಂದ್, ಕೆ.ಟಿ.ಗೋಪಾಲ ಮಾತನಾಡಿದರು. ಪ್ರಧಾನ ಕಾರ್ಯದರ್ಶಿ ಮಹದೇವ್ ಹೆಗ್ಗಡೆ, ಯುವಮೋರ್ಚಾ ಅಧ್ಯಕ್ಷ ಮಹದೇವ್, ಉಪಾಧ್ಯಕ್ಷ ದೊರೆಸೋಮೇಗೌಡ, ಮುಖಂಡರಾದ ಅಣ್ಣಯ್ಯನಾಯ್ಕ, ರಮೇಶ್ಕುಮಾರ್, ಸತೀಶ್, ಪಾಪಣ್ಣ, ಪುಟ್ಟಶೆಟ್ಟಿ, ಗೋಪಾಲಶೆಟ್ಟಿ, ಬನ್ನಿಕುಪ್ಪೆ ಚಂದ್ರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

