ಮೈಸೂರು

ವೀರಶೈವ ಶಿಕ್ಷಣ ಸಂಸ್ಥೆಗಳಿಗೂ ಸೌಲಭ್ಯ ಕಲ್ಪಿಸಿ: ಪುಟ್ಟಬುದ್ಧಿ

Published On :

ಕ.ಪ್ರ. ವಾರ್ತೆ, ಹುಣಸೂರು, ಆ.5
ಸರ್ಕಾರ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳಿಗೆ ನೀಡುತ್ತಿರುವ ಸವಲತ್ತುಗಳನ್ನು ವೀರಶೈವ ಸಮಾಜ ನಡೆಸುತ್ತಿರುವ ಶಿಕ್ಷಣ ಸಂಸ್ಥೆಗಳಿಗೂ ನೀಡಬೇಕೆಂದು ವೀರಶೈವ ಮಹಾಸಭಾದ ಕೇಂದ್ರಿಯ ಸಮಿತಿಯ ಸದಸ್ಯ ಕೆ.ಎನ್. ಪುಟ್ಟಬುದ್ಧಿ ಆಗ್ರಹಿಸಿದರು.
ಪಟ್ಟಣದ ಬೂದಿ ಮಂಗಳಮಂಟಪ ಸಭಾಂಗಣದಲ್ಲಿ ತಾಲೂಕು ವೀರಶೈವ ಮಹಾಸಭಾದ ಸದಸ್ಯತ್ವ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ವೀರಶೈವ ಸಮುದಾಯದ ಎಲ್ಲ ಜನಾಂಗದ ಬಡ ವಿದ್ಯಾರ್ಥಿಗಳಿಗೆ ಅಕ್ಷರ ದಾಸೋಹದ ಜೊತೆಗೆ ಅನ್ನದಾಸೋಹದಂತಹ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದೆ. ಆದರೆ ಸರ್ಕಾರ ಕೇವಲ ಅಲ್ಪಸಂಖ್ಯಾತ ಶಿಕ್ಷಣಸಂಸ್ಥೆಗಳಿಗೆ ಮಾತ್ರ ವಿಶೇಷ ಸವಲತ್ತುಗಳನ್ನು ನೀಡುತ್ತಿದೆ. ಇಂತಹ ಸವಲತ್ತುಗಳು ವೀರಶೈವ ಸಮುದಾಯ ನಡೆಸುತ್ತಿರುವ ಶಿಕ್ಷಣ ಸಂಸ್ಥೆಗಳಿಗೂ ಸಿಕ್ಕಲ್ಲಿ ಇನ್ನಷ್ಟು ಸಾಮಾಜಿಕ ಯೋಜನೆಗಳನ್ನು ಜಾರಿಗೊಳಿಸಲು ಪ್ರೋತ್ಸಾಹ ನೀಡಬಲ್ಲರು ಎಂದು ಹೇಳಿದರು.
ಮಹಾಸಭಾದ ತಾಲೂಕು ಅಧ್ಯಕ್ಷ ಸೋಮಶೇಖರ್ ಮಾತನಾಡಿ, ತಾಲೂಕಿನಲ್ಲಿ ಈ ಸಾಲಿನಲ್ಲಿ ಕನಿಷ್ಠ ಐದು ಸಾವಿರ ಮಂದಿಯನ್ನು ನೋಂದಣಿ ಮಾಡಿಕೊಳ್ಳಲು ಗುರಿ ಹೊಂದಲಾಗಿದೆ ಎಂದು ತಿಳಿಸಿದರು. ಮಾದಳ್ಳಿ ಉಕ್ಕಿನಕಂತೆ ಮಠದ ಶ್ರೀ ಸಾಂಬಸದಾಶಿವ ಸ್ವಾಮೀಜಿ ಆಶೀರ್ವಚನ ನೀಡಿದರು. ಸಭೆಯಲ್ಲಿ ಮಾಜಿ ಅಧ್ಯಕ್ಷ ಬಸವರಾಜು, ನಿಂಗರಾಜಪ್ಪ, ಚನ್ನಬಸವೇಶ್ವರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಿ.ಎನ್. ನಾಗರಾಜಪ್ಪ, ರಮೇಶಕುಮಾರ್, ಭಾಗ್ಯ ಕುಮಾರ್, ಎಚ್.ಡಿ. ಗುರುಸ್ವಾಮಿ, ದಕ್ಷಿಣಾಮೂರ್ತಿ, ಶಿವಕುಮಾರ್, ಪುಟ್ಟನಿಂಗಪ್ಪ, ಬಸಮಣ್ಣಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.