ಮೈಸೂರು

ಎಟಿಎಂ ಯಂತ್ರಕ್ಕೆ ಬೆಂಕಿ ಹಚ್ಚಿದ್ದ ಆರೋಪಿಗೆ ಸಜೆ

Published On :

ಮೈಸೂರು: ಎಟಿಎಂ ಕೇಂದ್ರಕ್ಕೆ ಬೆಂಕಿ ಹಚ್ಚಿ ಅಪಾರ ನಷ್ಟವನ್ನುಂಟು ಮಾಡಿದ್ದ ಆರೋಪಿಗೆ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಮೂರು ವರ್ಷ ಕಠಿಣ ಸಜೆ ಹಾಗೂ ರು.6 ಸಾವಿರ ದಂಡ ವಿಧಿಸಿದೆ. ನಜರ್‌ಬಾದ್ ನಿವಾಸಿ ಮಧುಸೂದನ್ ಶಿಕ್ಷೆಗೆ ಒಳಗಾದವನು. ಇಲ್ಲಿನ ಕೆನರಾಬ್ಯಾಂಕ್‌ಗೆ ಸೇರಿದ ಎಟಿಎಂ ಕೇಂದ್ರಕ್ಕೆ 2012ರ ಮಾ. 17 ರಂದು ನುಗ್ಗಿದ ಮಧುಸೂದನ್ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ್ದರು.  ಅಸಭ್ಯ ವರ್ತನೆ: ವ್ಯಕ್ತಿ ಬಂಧನ: ಬಾಲಕಿಯ ಮೇಲೆ ಆಕೆಯ ಚಿಕ್ಕಪ್ಪನೆ ಅಸಭ್ಯವಾಗಿ ವರ್ತಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇಟಗಳ್ಳಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.ಮೇಟಗಳ್ಳಿ ಕಾಲೋನಿ ನಿವಾಸಿ ಶ್ರೀನಿವಾಸ್ ಬಂಧಿತ ಆರೋಪಿ. ವರಸೆಯಲ್ಲಿ ಚಿಕ್ಕಪ್ಪ ಆಗಬೇಕಾದ ಶ್ರೀನಿವಾಸ್, ಬಾಲಕಿಯನ್ನು ಮನೆಯ ಮೇಲೆ ಕರೆದುಕೊಂಡು ಹೋಗಿ ಅಸಭ್ಯವಾಗಿ ವರ್ತಿಸಿದ್ದ ಎಂದು ಬಾಲಕಿ ಪೋಷಕರು ದೂರಿದ್ದಾರೆ.  


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.