ದಲಿತರ ಮೇಲಿನ ಪ್ರಕರಣ ಕೈಬಿಡಲು ಆಗ್ರಹಿಸಿ ಧರಣಿ
ಮೈಸೂರು: ದಲಿತ ಸಂಘರ್ಷ ಸಮಿತಿ ಮುಖಂಡರ ಮೇಲೆ ಸುಳ್ಳು ಪ್ರಕರಣ ದಾಖಲಿಸಿರುವ ಜಿಲ್ಲಾಡಳಿತದ ದಲಿತ ವಿರೋಧಿ ನೀತಿ ಖಂಡಿಸಿ ಹಾಗೂ ಟಿ. ನರಸೀಪುರ ತಹಸೀಲ್ದಾರ್ ಅವರನ್ನು ಅಮಾನತುಗೊಳಿಸಬೇಕು ಎಂದು ಆಗ್ರಹಿಸಿ ದಸಂಸ ಕಾರ್ಯಕರ್ತರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟಿಸಿದರು. ದಲಿತರ, ದುರ್ಬಲರ ಮೇಲೆ ದೌರ್ಜನ್ಯ, ಭೂ ಸಮಸ್ಯೆ ಮತ್ತು ಭ್ರಷ್ಟಾಚಾರದಂತಹ ಪ್ರಕರಣ ನಡೆದಾಗ ಕೂಡಲೆ ಶೋಷಿತರ ಪರ ನಿಂತು ಹೋರಾಟ ನಡೆಸುವ ದಲಿತರ ಮೇಲೆ ಸುಳ್ಳು ಮೊಕದ್ದಮೆ ದಾಖಲಿಸುವುದು ಸರಿಯಲ್ಲ. ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಅಧಿಕಾರಿಗಳು, ಭೂ ಮಾಲೀಕರು, ದಳ್ಳಾಳಿಗಳ ಪರನಿಂತು ಚಳವಳಿ ಹತ್ತಿಕ್ಕಲು ಯತ್ನಿಸುತ್ತಿದ್ದಾರೆ ಎಂದು ದೂರಿದರು. ದುರ್ಬಲರ ಪರನಿಂತು ಹೋರಾಟ ನಡೆಸುವ ದಸಂಸ ಮುಖಂಡರ ಮೇಲೆ ಪ್ರಕರಣ ದಾಖಲಿಸಿ ರೌಡಿಪಟ್ಟಿಗೆ ಸೇರಿಸಲಾಗುತ್ತಿದೆ ಎಂದು ಆರೋಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

