ಪೋಲಿಯೊ ನಿಯಂತ್ರಣ ಸೇವೆ ಸ್ಮರಣೀಯ: ಬಾಲಸುಬ್ರಹ್ಮಣ್ಯಂ
ಮೈಸೂರು: ಸಮಾಜದಲ್ಲಿನ ಪೋಲಿಯೊ ನಿರ್ಮೂಲನೆಗೆ ಶ್ರಮಿಸಿದ ಕ್ಷೇತ್ರ ಕಾರ್ಯಕರ್ತರ ಸೇವೆ ಸ್ಮರಣೀಯ ಎಂದು ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್ ಸಂಸ್ಥಾಪಕ ಡಾ. ಆರ್. ಬಾಲಸುಬ್ರಹ್ಮಣ್ಯಂ ಹೇಳಿದರು. ವಿಕಲ ವಿಕಾಸ ಸಂಸ್ಥೆಯು ಅರಮನೆ ಉತ್ತರ ದ್ವಾರದಲ್ಲಿರುವ ಸಾಹಿತ್ಯ ಪರಿಷತ್ ಕಚೇರಿಯಲ್ಲಿ ಗುರುವಾರ ಏರ್ಪಡಿಸಿದ್ದ ಪೋಲಿಯೊ ಮುಕ್ತ ಭಾರತಕ್ಕೆ ವಂದನೆ, ಅಭಿವಂದನೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. 2011 ರಲ್ಲಿ ಭಾರತ ಪೋಲಿಯೋ ಮುಕ್ತ ದೇಶವೆಂದು ಘೋಷಿಸಲಾಯಿತು ಎಂದರು.
ಕೆ.ಆರ್. ಆಸ್ಪತ್ರೆ ಅಧೀಕ್ಷಕ ಡಾ.ಬಿ.ಜಿ. ಸಾಗರ್, ಪೋಲಿಯೊ ಮುಕ್ತವಾಗಿದೆಯೆಂದು ಉದಾಸೀನತೆ ತೋರದೆ ಅದರ ವಂಶವಾಹಿನಿ ಬಗ್ಗೆ ಎಚ್ಚರ ವಹಿಸಬೇಕು. ಶುದ್ಧ ಕುಡಿಯುವ ನೀರು ಹಾಗೂ ಶೌಚಾಲಯ ವ್ಯವಸ್ಥೆ ಸಮರ್ಪಕವಾದರೆ ಇಂತಹ ಪಿಡುಗು ನಿಯಂತ್ರಿಸಬಹುದು ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

