ಮೈಸೂರು

ತಹಸೀಲ್ದಾರ್ ಅಮಾನತಿಗೆ ಆಗ್ರಹಿಸಿ ದಸಂಸ ಧರಣಿ

Published On :

ಪಿರಿಯಾಪಟ್ಟಣ: ಟಿ. ನರಸೀಪುರದ ತಹಸೀಲ್ದಾರ್ ಅರುಣಪ್ರಭ ಅವರನ್ನು ಸೇವೆಯಿಂದ ಅಮಾನತುಗೊಳಿಸುವಂತೆ ಆಗ್ರಹಿಸಿ ದಸಂಸ ಕಾರ್ಯಕರ್ತರು ತಾಲೂಕು ಆಡಳಿತ ಭವನದ ಮುಂಭಾಗ ಧರಣಿ ನಡೆಸಿದರು.
ಪ್ರತಿಭಟನೆಯ ನೇತೃತ್ವ ವಹಿಸಿದ್ದ ದಸಂಸ ತಾಲೂಕು ಸಂಚಾಲಕ ಕುಮಾರ್ ಮಾತನಾಡಿ, ಟಿ. ನರಸೀಪುರ ತಾಲೂಕು ಕೊತ್ತೇಗಾಲ ಗ್ರಾಮದ ಜೀತದಾಳು ಶಿವಕುಮಾರ ಸಾವಿಗೆ ತಾಲೂಕು ಆಡಳಿತದ ವಿಫಲವೇ ಕಾರಣ, ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕೆಂದು ಒತ್ತಾಯಿಸಿ, ಪ್ರತಿಭಟನೆ ನಡೆಸಿದ ದಸಂಸ ಪದಾಧಿಕಾರಿಗಳ ಮೇಲೆ ಹೂಡಿರುವ ಮೊಕದ್ದಮೆಯನ್ನು ಕೈಬಿಡಬೇಕು. ತಹಸೀಲ್ದಾರ್ ಅವರನ್ನು ಅಮಾನತುಗೊಳಿಸಬೇಕು ಎಂದು ಆಗ್ರಹಿಸಿದರು. ಪದಾಧಿಕಾರಿಗಳಾದ ಎಚ್.ಕೆ. ಮಹೇಶ್, ಎಚ್.ಎಂ. ಚನ್ನಯ್ಯ, ಅಣ್ಣಯ್ಯ, ಪುಟ್ಟಸ್ವಾಮಿ, ರವಿ, ಮಾಯಪ್ಪ, ವಸಂತ್, ಸುಬ್ರಮಣಿ, ಸೈಯದ್‌ಫಯಾಜ್, ಗೋಪಾಲ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.