ಜನಪರ ಕಾಳಜಿಯಿಂದ ಸರ್ಕಾರಿ ಸೇವೆಗೆ ಬನ್ನಿ
ಮೈಸೂರು: ಸರ್ಕಾರಿ ಅಧಿಕಾರಿಯಾಗಬೇಕು ಎನ್ನುವ ಏಕೈಕ ಉದ್ದೇಶದಿಂದ ಸೇವೆಗೆ ಬರಬೇಡಿ. ಜನಪರ ಕಾಳಜಿ, ಸೇವಾಪರತೆ ನಿಮ್ಮಲ್ಲಿ ಇದ್ದರೆ ಮಾತ್ರ ಇದನ್ನು ಆಯ್ಕೆ ಮಾಡಿಕೊಳ್ಳಿ ಎಂದು ರಾಜ್ಯ ಹೆದ್ದಾರಿಗಳ ಅಭಿವೃದ್ಧಿ ಯೋಜನೆ (ಕೆ ಶಿಪ್) ಮುಖ್ಯ ಯೋಜನಾಧಿಕಾರಿ ಪಿ.ಮಣಿವಣ್ಣನ್ ಕಿವಿಮಾತು ಹೇಳಿದರು.
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರ ಶನಿವಾರ ಗಂಗಾ ಸಭಾಂಗಣದಲ್ಲಿ ಆಯೋಜಿಸಿದ್ದ ಐಎಎಸ್, ಕೆಎಎಸ್ ಸಹಿತ ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿತರೊಂದಿಗೆ ಸಂವಾದ ನಡೆಸಿದರು. 15 ವರ್ಷ ಕಾಲ ಕರ್ನಾಟಕದ ನಾನಾ ಭಾಗಗಳಲ್ಲಿ ಸೇವೆ ಸಲ್ಲಿಸಿದ ಅನುಭವ ಹೊಂದಿರುವ ಮಣಿವಣ್ಣನ್ ಸರ್ಕಾರಿ ಸೇವೆಗೆ ಸಂಬಂಧಿಸಿದಂತೆ ಪ್ರಶ್ನೋತ್ತರ ಮಾದರಿಯಲ್ಲೇ ವಿಷಯ ಪ್ರಸ್ತಾಪಿಸಿದರು. ಸರ್ಕಾರಿ ನೌಕರಿ ಸೇರುವವರಿಗೆ ಧೈರ್ಯ, ಬುದ್ಧಿವಂತಿಕೆ, ಪರಿಸ್ಥಿತಿಯನ್ನು ಅವಲೋಕಿಸಿ ಅದಕ್ಕೆ ಸೂಕ್ತ ಪರಿಹಾರ ನೀಡಬಲ್ಲ ಸೂಕ್ಷ್ಮಮತಿ ಬೇಕಾಗುತ್ತದೆ. ಇವೆಲ್ಲವೂ ನಿಮ್ಮಿಂದ ಸಾಧ್ಯ ಎಂದು ಅನ್ನಿಸಿದರೆ ಸರ್ಕಾರಿ ಹುದ್ದೆಯನ್ನು ಆಯ್ಕೆ ಮಾಡಿಕೊಳ್ಳಿ ಎಂದರು.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಪ್ರತಿನಿಧಿಗಳಿಗೆ ಉನ್ನತ ಸ್ಥಾನ. ನಂತರದ್ದೇ ಸರ್ಕಾರಿ ನೌಕರರದ್ದು. ನೀತಿಯನ್ನು ರೂಪಿಸುವಾಗ ಅಧಿಕಾರಿಗಳು ಸಲಹೆಗಳನ್ನು ನೀಡಬಹುದೇ ವಿನಃ ಅದನ್ನು ರೂಪಿಸುವವರು ಜನಪ್ರತಿನಿಧಿಗಳೇ ಎಂದರು.
ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಂ.ಜಿ. ಕೃಷ್ಣನ್, ಕೇಂದ್ರದ ಸಂಯೋಜನಾಧಿಕಾರಿ ಜೈನಹಳ್ಳಿ ಸತ್ಯನಾರಾಯಣಗೌಡ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

